Vaibhav Sooryavanshi: 400 ರನ್ ಗಳಿಸಿ ಆರೆಂಜ್ ಕ್ಯಾಪ್ ವಶಪಡಿಸಿಕೊಂಡ ವೈಭವ್ ಸೂರ್ಯವಂಶಿ
Orange Cap IPL 2026 list: ಐಪಿಎಲ್ 2026 ರಲ್ಲಿ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿಸಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧ ಕೇವಲ 16 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ಅವರು ಋತುವಿನಲ್ಲಿ 400 ರನ್ ಗಳಿಸಿ, ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದರು. ಜೊತೆಗೆ ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 400 ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಸಾಧನೆ ಕೂಡ ಮಾಡಿದ್ದಾರೆ.

ಬೆಂಗಳೂರು (ಏ. 29): ಐಪಿಎಲ್ 2026 ರ 40 ನೇ ಪಂದ್ಯದ ನಂತರ, ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಮತ್ತೊಮ್ಮೆ ದೊಡ್ಡ ಬದಲಾವಣೆಯಾಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Sooryavamshi) ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನ ತಲುಪಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕುವ ಮೂಲಕ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ವೈಭವ್ ಸೂರ್ಯವಂಶಿ 9 ಪಂದ್ಯಗಳಲ್ಲಿ 400 ರನ್ ಗಳಿಸಿದ್ದು ಅವರ ಸರಾಸರಿ 44.44. ಈ ಆಟಗಾರನ ಸ್ಟ್ರೈಕ್ ರೇಟ್ 238.09 ಮತ್ತು ಅವರು ಇಲ್ಲಿಯವರೆಗೆ ಒಂದು ಶತಕ ಮತ್ತು ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ. ವೈಭವ್ ಸೂರ್ಯವಂಶಿ ಈ ಋತುವಿನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು (37) ಬಾರಿಸಿದ ಆಟಗಾರ ಕೂಡ ಆಗಿದ್ದಾರೆ.
ಇಷ್ಟೇ ಅಲ್ಲದೆ ವೈಭವ್ ಈಗ ಒಂದೇ ಐಪಿಎಲ್ ಸೀಸನ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 400 ರನ್ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರು ಈ ಸಾಧನೆ ಮಾಡುವ ಮೂಲಕ ಆಂಡ್ರೆ ರಸೆಲ್ ಅವರ ದಾಖಲೆಯನ್ನೂ ಮುರಿದಿದ್ದಾರೆ. ಈ ಮೂಲಕ ವೈಭವ್ ಈ ಋತುವಿನಲ್ಲಿ ರನ್ ಮೆಷಿನ್ ಆಗಿ ಹೊರಹೊಮ್ಮಿದ್ದಾರೆ.
ಐಪಿಎಲ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 400 ರನ್ ಗಳಿಸಿದ ಆಟಗಾರರು
- 167 – ವೈಭವ್ ಸೂರ್ಯವಂಶಿ (2026)
- 188 – ಆಂಡ್ರೆ ರಸೆಲ್ (2019)
- 195 – ಅಭಿಷೇಕ್ ಶರ್ಮಾ (2024)
- 197 – ನಿಕೋಲಸ್ ಪೂರನ್ (2025)
- 200 – ಗ್ಲೆನ್ ಮ್ಯಾಕ್ಸ್‌ವೆಲ್ (2014)
Priyansh Arya: ಪಂಜಾಬ್ ಕಿಂಗ್ಸ್-ರಾಜಸ್ಥಾನ್ ಪಂದ್ಯದ ನಡುವೆ ಹರಿಯಿತು ನೆತ್ತರು: ಇದಕ್ಕೆ ಕಾರಣ ಪ್ರಿಯಾಂಶ್ ಆರ್ಯ
ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ?
ಅಭಿಷೇಕ್ ಶರ್ಮಾ ಎಂಟು ಪಂದ್ಯಗಳಲ್ಲಿ 380 ರನ್ ಗಳಿಸಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ ಎಂಟು ಪಂದ್ಯಗಳಲ್ಲಿ 358 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಎಂಟು ಪಂದ್ಯಗಳಲ್ಲಿ 351 ರನ್ ಗಳಿಸಿದ್ದಾರೆ. ಹೆನ್ರಿಕ್ ಕ್ಲಾಸೆನ್ 349 ರನ್ ಗಳಿಸಿ ಐದನೇ ಸ್ಥಾನದಲ್ಲಿದ್ದಾರೆ. ಪ್ರಭ್ಸಿಮ್ರಾನ್ ಸಿಂಗ್, ಶುಭ್ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಕೂಡ ಆರೆಂಜ್ ಕ್ಯಾಪ್ ರೇಸ್‌ನಲ್ಲಿದ್ದಾರೆ.
ಪರ್ಪಲ್ ಕ್ಯಾಪ್ ನಲ್ಲಿ ಭುವನೇಶ್ವರ್ ಕುಮಾರ್ಗೆ ಅಗ್ರಸ್ಥಾನ
ಆರ್‌ಸಿಬಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್ 2026 ರಲ್ಲಿ ಪ್ರಮುಖ ವಿಕೆಟ್ ಪಡೆದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ಎಂಟು ಪಂದ್ಯಗಳಲ್ಲಿ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಮತ್ತು ಪ್ರತಿ ಓವರ್‌ಗೆ ಕೇವಲ 7.6 ರನ್‌ಗಳ ಎಕಾನಮಿ ದರವನ್ನು ಹೊಂದಿದ್ದಾರೆ. ಅವರು ಪ್ರಸ್ತುತ ಪರ್ಪಲ್ ಕ್ಯಾಪ್ ಹೊಂದಿದ್ದಾರೆ. ರಾಜಸ್ಥಾನ್ ರಾಯಲ್ಸ್ ವೇಗದ ಬೌಲರ್ ಜೋಫ್ರಾ ಆರ್ಚರ್ ಕೂಡ 14 ವಿಕೆಟ್‌ಗಳನ್ನು ಹೊಂದಿದ್ದಾರೆ, ಇವರು ಒಂಬತ್ತು ಪಂದ್ಯಗಳನ್ನು ಆಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಕೂಡ 14 ವಿಕೆಟ್‌ಗಳನ್ನು ಹೊಂದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವೇಗದ ಬೌಲರ್ ಎಹ್ಸಾನ್ ಮಾಲಿಂಗ ಕೂಡ 14 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




