AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 132 ರನ್: ಭರ್ಜರಿ ದಾಖಲೆ ಬರೆದ ವೈಭವ್ ಸೂರ್ಯವಂಶಿ!

Vaibhav Sooryavanshi Records: ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ ಯುವ ದಾಂಡಿಗ  ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ದುಲೀಪ್ ಟ್ರೋಫಿ ಇತಿಹಾಸದಲ್ಲೇ ನಿರ್ಣಾಯಕ ಪಂದ್ಯದಲ್ಲಿ ಒಟ್ಟು 100+ ಸ್ಕೋರ್​ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಬರೋಬ್ಬರಿ 132 ರನ್: ಭರ್ಜರಿ ದಾಖಲೆ ಬರೆದ ವೈಭವ್ ಸೂರ್ಯವಂಶಿ!
Vaibhav Sooryavanshi
ಝಾಹಿರ್ ಯೂಸುಫ್
|

Updated on:Sep 02, 2026 | 7:04 AM

Share

ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಒಟ್ಟು 132 ರನ್ ಕಲೆಹಾಕಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೆಂಟ್ರಲ್ ಝೋನ್ ತಂಡ ಪ್ರಥಮ ಇನಿಂಗ್ಸ್​ನಲ್ಲಿ 266 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಈಸ್ಟ್ ಝೋನ್ ತಂಡವು ವೈಭವ್ ಸೂರ್ಯವಂಶಿಯ 92 ರನ್​ಗಳ ಅಮೋಘ ಇನಿಂಗ್ಸ್​ ನೆರವಿನೊಂದಿಗೆ 266 ರನ್​ ಗಳಿಸಿ ಆಲೌಟ್ ಆಯಿತು.

ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಸೆಂಟ್ರಲ್ ಝೋನ್ ತಂಡವನ್ನು ಕೇವಲ 158 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಈಸ್ಟ್ ಝೋನ್ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಈಸ್ಟ್ ಝೋನ್ ಪರ ಮುಕೇಶ್ ಕುಮಾರ್ 4 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 3 ವಿಕೆಟ್ ಕಬಳಿಸಿ ಮಿಂಚಿದರು.

159 ರನ್​ಗಳ ಸುಲಭ ಗುರಿ:

159 ರನ್​ಗಳ ಸುಲಭ ಗುರಿ ಪಡೆದ ಈಸ್ಟ್ ಝೋನ್ ತಂಡಕ್ಕೆ ಭರ್ಜರಿ ಆರಂಭ ಒದಗಿಸುವಲ್ಲಿ ವೈಭವ್ ಸೂರ್ಯವಂಶಿ ಯಶಸ್ವಿಯಾದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಆ ಬಳಿಕ ಎಂದಿನಿಂತೆ ಹೊಡಿಬಡಿ ಆಟಕ್ಕೆ ಮುಂದಾದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ 2 ಸಿಕ್ಸರ್ ಹಾಗೂ 3 ಫೋರ್​ಗಳೊಂದಿಗೆ 43 ಎಸೆತಗಳಲ್ಲಿ 40 ರನ್ ಮೂಡಿಬಂತು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ವೈಭವ್ ಸೂರ್ಯವಂಶಿ (40) ವಿಕೆಟ್ ಕೈಚೆಲ್ಲಿದರು.

132 ರನ್​ಗಳ ಭರ್ಜರಿ ದಾಖಲೆ:

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 92 ಹಾಗೂ ದ್ವಿತೀಯ ಇನಿಂಗ್ಸ್​ನಲ್ಲಿ 40 ರನ್ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ನೂರಕ್ಕೂ ಅಧಿಕ ರನ್ ಕಲೆಹಾಕಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಪೃಥ್ವಿ ಶಾ ಹೆಸರಿನಲ್ಲಿತ್ತು. 2022 ರ ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಪಶ್ಚಿಮ ವಲಯ ಪರ ಕಣಕ್ಕಿಳಿದಿದ್ದ ಪೃಥ್ವಿ ಎರಡು ಇನಿಂಗ್ಸ್‌ಗಳಿಂದ ಒಟ್ಟು 202 ರನ್ ಗಳಿಸಿದ್ದರು. ಈ ವೇಳೆ ಅವರ ವಯಸ್ಸು ವಯಸ್ಸು 22 ವರ್ಷ 316 ದಿನಗಳು.

ಇದೀಗ 15ನೇ ವಯಸ್ಸಿನಲ್ಲಿ ದುಲೀಪ್ ಟ್ರೋಫಿಯ ಸೆಮಿಫೈನಲ್​ ಪಂದ್ಯದಲ್ಲಿ ಒಟ್ಟು 132 ರನ್ ಕಲೆಹಾಕುವ ಮೂಲಕ ವೈಭವ್ ಸೂರ್ಯವಂಶಿ, ನಿರ್ಣಾಯಕ ಪಂದ್ಯದಲ್ಲಿ ಒಟ್ಟು 100+ ಸ್ಕೋರ್​ಗಳಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ವೈಭವ್ ಸೂರ್ಯವಂಶಿ ನೀಡಿದ 40 ರನ್​ಗಳ ಕೊಡಗೆಯೊಂದಿಗೆ ಈಸ್ಟ್ ಝೋನ್ ತಂಡವು 15 ಓವರ್​ಗಳ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 62 ರನ್ ಕಲೆಹಾಕಿದೆ. ಇನ್ನು ತಂಡದ ಗೆಲುವಿಗೆ ಕೇವಲ 97 ರನ್​ಗಳ ಅವಶ್ಯಕತೆಯಿದೆ.

ಸೆಂಟ್ರಲ್ ಝೋನ್ ಪ್ಲೇಯಿಂಗ್ 11: ಅಮನ್ ಮೊಖಡೆ , ಆರ್ಯನ್ ಜುಯಲ್ (ವಿಕೆಟ್ ಕೀಪರ್) , ಕುನಾಲ್ ಚಾಂಡೇಲಾ , ಯಶ್ ರಾಥೋಡ್ , ರಜತ್ ಪಾಟಿದಾರ್ (ನಾಯಕ) , ರಿಂಕು ಸಿಂಗ್ , ಸರಾಂಶ್ ಜೈನ್ , ಹರ್ಷ್ ದುಬೆ , ಅರ್ಷದ್ ಖಾನ್ , ಯಶ್ ಠಾಕೂರ್ , ಆರ್ಯನ್ ಪಾಂಡೆ.

ಇದನ್ನೂ ಓದಿ: ಅಝರ್ ಸಿಡಿಲಬ್ಬರ.. 42 ಸಿಕ್ಸರ್, 3 ಭರ್ಜರಿ ಸೆಂಚುರಿ, ಹೊಸ ದಾಖಲೆ!

ಈಸ್ಟ್ ಝೋನ್ ಪ್ಲೇಯಿಂಗ್ 11: ಅಭಿಮನ್ಯು ಈಶ್ವರನ್ , ವೈಭವ್ ಸೂರ್ಯವಂಶಿ , ಕುಮಾರ್ ಕುಶಾಗ್ರ , ಸುದೀಪ್ ಕುಮಾರ್ ಘರಾಮಿ , ಇಶಾನ್ ಕಿಶನ್ (ನಾಯಕ) , ವಿರಾಟ್ ಸಿಂಗ್ , ಮುಹಮ್ಮದ್ ಖುರೈಶಿ , ಅನುಕೂಲ್ ರಾಯ್ , ಅಭಿಜಿತ್ ಕೆ ಸರ್ಕಾರ್ , ಮೊಹಮ್ಮದ್ ಶಮಿ , ಮುಖೇಶ್ ಕುಮಾರ್.

Published On - 2:50 pm, Tue, 1 September 26

Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ