AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್​ ಸೂರ್ಯವಂಶಿ ಕೈತಪ್ಪಿದ ವಿಶ್ವ ದಾಖಲೆಯ ಸೆಂಚುರಿ!

Vaibhav Sooryavanshi: ಭಾರತ ಎ ಪರ ಕಣಕ್ಕಿಳಿದ ಮೊದಲ ನಾಲ್ಕು ಮ್ಯಾಚ್​ಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ವೈಭವ್ ಸೂರ್ಯವಂಶಿ ಕೊನೆಗೂ ಅಬ್ಬರಿಸಿದ್ದಾರೆ. ಅದು ಕೂಡ ಕೇವಲ 29 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ ಸಿಡಿಲಬ್ಬರದ 94 ರನ್ ಚಚ್ಚುವ ಮೂಲಕ ಎಂಬುದು ವಿಶೇಷ.

ವೈಭವ್​ ಸೂರ್ಯವಂಶಿ ಕೈತಪ್ಪಿದ ವಿಶ್ವ ದಾಖಲೆಯ ಸೆಂಚುರಿ!
Vaibhav Sooryavanshi Image Credit source: BCCI
ಝಾಹಿರ್ ಯೂಸುಫ್
|

Updated on: Jun 21, 2026 | 11:10 AM

Share

ಟಿ20 ಕ್ರಿಕೆಟ್‌ನಲ್ಲಿ ಅಬ್ಬರಿಸಿದ್ದ ಆಯ್ತು, ಐಪಿಎಲ್‌ನಲ್ಲಿ ಧೂಳೆಬ್ಬಿಸಿದ್ದೂ ಆಯ್ತು. ಇದೀಗ 15 ವರ್ಷದ ರನ್ ಮಷಿನ್ ವೈಭವ್ ಸೂರ್ಯವಂಶಿ ಏಕದಿನ ಕ್ರಿಕೆಟ್​ನಲ್ಲಿ ಸಿಡಿಲಬ್ಬರ ಶುರು ಮಾಡಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಶ್ರೀಲಂಕಾ ಬೌಲರ್​ಗಳನ್ನು ಮನಬಂದಂತೆ ದಂಡಿಸಿದ ಯುವ ದಾಂಡಿಗ ಕೇವಲ 6 ರನ್​ಗಳ ಅಂತರದಿಂದ ವಿಶ್ವ ದಾಖಲೆಯ ಶತಕವನ್ನು ಕೈಚೆಲ್ಲಿಕೊಂಡಿದ್ದಾರೆ.

ದಂಬುಲ್ಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಸೋತಿರುವ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮೊದಲ ಓವರ್​ನಿಂದಲೇ ಹೊಡಿಬಡಿ ಆಟಕ್ಕೆ ಒತ್ತು ನೀಡಿದ ವೈಭವ್ ಮೈದಾನದ ಮೂಲೆ ಮೂಲೆಗೂ ಚೆಂಡನ್ನಟ್ಟಿದ್ದಾರೆ. ಪರಿಣಾಮ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

  • ಈ ಅರ್ಧಶತಕದೊಂದಿಗೆ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯು ವೈಭವ್ ಸೂರ್ಯವಂಶಿ ಪಾಲಾಗಿದೆ.
  •  2005 ರಲ್ಲಿ ಶ್ರೀಲಂಕಾದಲ್ಲಿ ನಡೆದ ದೇಶೀಯ ಲಿಸ್ಟ್ ಎ (ಏಕದಿನ) ಪಂದ್ಯದಲ್ಲಿ ಕೌಶಲ್ಯ ವೀರರತ್ನೆ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
  • ವೈಭವ್ ಸೂರ್ಯವಂಶಿ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಕೈ ತಪ್ಪಿದ ವಿಶ್ವ ದಾಖಲೆ:

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ವೈಭವ್ ಸೂರ್ಯವಂಶಿ ಹಾಫ್ ಸೆಂಚುರಿ ಬಳಿಕ ಕೂಡ ತಮ್ಮ ಸಿಡಿಲಬ್ಬರ ಮುಂದುವರೆಸಿದ್ದರು. ಅದರಲ್ಲೂ ಆಫ್ ಸೈಡ್-ಲೆಗ್ ಸೈಡ್​ನತ್ತ ಫೋರ್​ ಸಿಕ್ಸ್​ಗಳ ಸುರಿಮಳೆಗೈಯ್ಯುವ ಮೂಲಕ ಕೇವಲ 28 ಎಸೆತಗಳಲ್ಲಿ 94 ರನ್​ ಚಚ್ಚಿದ್ದರು.

ಇನ್ನೇನು ಒಂದು ಎಸೆತದಲ್ಲಿ ಒಂದು ಸಿಕ್ಸ್ ಮೂಡಿ ಬಂದಿದ್ದರೆ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗುತ್ತಿತ್ತು. ಆದರೆ ಬಿಗ್ ಶಾಟ್ ಹೊಡೆಯುವ ಯತ್ನದಲ್ಲಿ ವೈಭವ್ ಮಿಡ್ ಆನ್​ನಲ್ಲಿದ್ದ ಫೀಲ್ಡರ್​ಗೆ ಕ್ಯಾಚ್ ನೀಡಿದ್ದಾರೆ. ಈ ಮೂಲಕ ಚೊಚ್ಚಲ ಶತಕವನ್ನು ಕೈ ಚೆಲ್ಲಿಕೊಂಡಿದ್ದಾರೆ.

ಒಂದು ವೇಳೆ ವೈಭವ್ ಸೂರ್ಯವಂಶಿ 29ನೇ ಎಸೆತದಲ್ಲಿ ಕ್ಯಾಚ್ ನೀಡುವ ಬದಲು ಸಿಕ್ಸ್ ಬಾರಿಸಿದ್ದರೆ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದರು.

  • ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಆಸ್ಟ್ರೇಲಿಯಾದ ಜೇಕ್ ಫ್ರೇಸರ್ ಮೆಕ್​ಗುರ್ಕ್ ಹೆಸರಿನಲ್ಲಿದೆ.
  • 2023 ರಲ್ಲಿ ಸೌತ್ ಆಸ್ಟ್ರೇಲಿಯಾ ಪರ ಲಿಸ್ಟ್ ಎ ಪಂದ್ಯವಾಡಿದ್ದ ಜೇಕ್ ಫ್ರೇಸರ್ ಮೆಕ್​ಗುರ್ಕ್ ಕೇವಲ 29 ಎಸೆತಗಳಲ್ಲಿ ಶತಕ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ವಿಶ್ವ ದಾಖಲೆಯನ್ನು ಸರಿಗಟ್ಟಲು ವೈಭವ್ ಸೂರ್ಯವಂಶಿಗೆ ಉತ್ತಮ ಅವಕಾಶವಿತ್ತು. ಆದರೆ ತಾನೆದುರಿಸಿದ 29ನೇ ಎಸೆತದಲ್ಲಿ ವೈಭವ್ ಕ್ಯಾಚ್ ನೀಡಿದ್ದಾರೆ. ಇದರೊಂದಿಗೆ 29 ಎಸೆತಗಳಲ್ಲಿ 8 ಸಿಕ್ಸರ್​ ಹಾಗೂ 10 ಫೋರ್​ಗಳನ್ನು ಒಳಗೊಂಡ 94 ರನ್​ಗಳ ಭರ್ಜರಿ ಇನಿಂಗ್ಸ್ ಕೂಡ ಕೊನೆಗೊಂಡಿದೆ.

ಇದನ್ನೂ ಓದಿ: 13 ಸಿಕ್ಸ್, 11 ಫೋರ್​: ರೆಕಾರ್ಡ್ ಬ್ರೇಕಿಂಗ್ ಸೆಂಚುರಿ ಸಿಡಿಸಿದ ಮಿಚೆಲ್ ಓವನ್

ವೈಭವ್ ಸೂರ್ಯವಂಶಿ ಬಾರಿಸಿದ ಈ 94 ರನ್​ಗಳ ಸ್ಫೋಟಕ ಇನಿಂಗ್ಸ್​ ನೆರವಿನೊಂದಿಗೆ ಟೀಮ್ ಇಂಡಿಯಾ 12 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 144 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ತಿಲಕ್ ವರ್ಮಾ ಬ್ಯಾಟಿಂಗ್ ಮುಂದುರೆಸಿದ್ದಾರೆ.

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್