AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026 Orange Cap: ಆರೆಂಜ್ ಕ್ಯಾಪ್ ಗೆದ್ದ 15 ವರ್ಷದ ವೈಭವ್ ಸೂರ್ಯವಂಶಿ

Vaibhav Sooryavanshi Wins IPL 2026 Orange Cap: ಐಪಿಎಲ್ 2026ರ ಆರೆಂಜ್ ಕ್ಯಾಪ್ ವಿಜೇತರು ಫೈನಲ್ ಪಂದ್ಯ ಮುಗಿಯುವುದಕ್ಕೆ ಮುನ್ನವೇ ಖಚಿತವಾಗಿದೆ. ರಾಜಸ್ಥಾನ್ ರಾಯಲ್ಸ್‌ನ ವೈಭವ್ ಸೂರ್ಯವಂಶಿ ಅಗ್ರಸ್ಥಾನಿಯಾಗಿದ್ದು, ಗುಜರಾತ್ ಟೈಟಾನ್ಸ್‌ನ ಶುಭ್​ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಫೈನಲ್‌ನಲ್ಲಿ ಅವರನ್ನು ಮೀರಿಸಲು ವಿಫಲರಾದರು. ಈ ಮೂಲಕ ವೈಭವ್ ಸೂರ್ಯವಂಶಿ ಐಪಿಎಲ್ 2026ರ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನಕ್ಕೆ ದೊರೆತ ಮನ್ನಣೆಯಾಗಿದೆ.

IPL 2026 Orange Cap: ಆರೆಂಜ್ ಕ್ಯಾಪ್ ಗೆದ್ದ 15 ವರ್ಷದ ವೈಭವ್ ಸೂರ್ಯವಂಶಿ
Vaibhav Sooryavanshi
ಪೃಥ್ವಿಶಂಕರ
|

Updated on:May 31, 2026 | 8:55 PM

Share

ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯುತ್ತಿದೆ. ಈ ಫೈನಲ್ ಪಂದ್ಯ ಮುಗಿಯುವುದಕ್ಕೆ ಮುನ್ನವೇ ಈ ಬಾರಿಯ ಆರೆಂಜ್ ಕ್ಯಾಚ್ ಯಾರ ಪಾಲಾಗಿದೆ ಎಂಬುದು ಖಚಿತವಾಗಿದೆ. ವಾಸ್ತವವಾಗಿ ಎಲ್ಲರಿಗೂ ತಿಳಿದಿರುವಂತೆ ಇಡೀ ಆವೃತ್ತಿಯಲ್ಲಿ ಯಾರು ಅತ್ಯಧಿಕ ರನ್ ಕಲೆಹಾಕುತ್ತಾರೋ ಅವರಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಈ ಆರೆಂಜ್ ಕ್ಯಾಪ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ (Vaibhav Sooryavanshi) ಅಗ್ರಸ್ಥಾನದಲ್ಲಿದ್ದರು. ಆದಾಗ್ಯೂ ಅದರ ನಂತರದ ಎರಡು ಸ್ಥಾನಗಳಲ್ಲಿ ಗುಜರಾತ್ ತಂಡದ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಇದ್ದ ಕಾರಣ ಫೈನಲ್ ಪಂದ್ಯ ಮುಗಿದ ಬಳಿಕವಷ್ಟೇ ಆರೆಂಜ್ ಕ್ಯಾಪ್ ಯಾರ ಪಾಲಾಗಲಿದೆ ಎಂಬುದನ್ನು ಅಧಿಕೃತವಾಗಿ ಹೇಳಬಹುದಾಗಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಗಿಲ್ ಹಾಗೂ ಸುದರ್ಶನ್, ಸೂರ್ಯವಂಶಿ ಅವರನ್ನು ಮೀರಿಸದ ಕಾರಣ ಅವರಿಬ್ಬರು ಈ ರೇಸ್​ನಿಂದ ಹೊರಬಿದ್ದಿದ್ದು, ವೈಭವ್​ಗೆ ಈ ಕ್ಯಾಪ್ ಸಿಕ್ಕಿದೆ.

ಆರೆಂಜ್ ಕ್ಯಾಪ್ ಗೆದ್ದ ವೈಭವ್

ವಾಸ್ತವವಾಗಿ ಕ್ವಾಲಿಫೈಯರ್ 2 ರಲ್ಲಿ ಇದೇ ಗುಜರಾತ್ ಟೈಟಾನ್ಸ್ ವಿರುದ್ಧ 96 ರನ್​ಗಳ ಇನ್ನಿಂಗ್ಸ್ ಆಡಿದ್ದ ವೈಭವ್ ಸೂರ್ಯವಂಶಿ, ಸಾಯಿ ಸುದರ್ಶನ್ ಬಳಿ ಇದ್ದ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದರು. ಆದರೆ ಕ್ವಾಲಿಫೈಯರ್ 2 ರಲ್ಲಿ ರಾಜಸ್ಥಾನ್ ಸೋತಿದ್ದರಿಂದ ವೈಭವ್​ಗೆ ಫೈನಲ್ ಆಡಲು ಸಾಧ್ಯವಾಗಲಿಲ್ಲ. ಆದರೆ ಫೈನಲ್​ಗೆ ಅರ್ಹತೆ ಪಡೆದಿದ್ದ ಗುಜರಾತ್ ತಂಡದ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್​ಗೆ ಆರೆಂಜ್ ಕ್ಯಾಪ್ ಗೆಲ್ಲುವ ಅವಕಾಶವಿತ್ತು.

ರೇಸ್​​ನಲ್ಲಿದ್ದ ಗಿಲ್, ಸುದರ್ಶನ್

ಈ ಬಾರಿಯ ಐಪಿಎಲ್‌ನಲ್ಲಿ ಆಡಿದ 16 ಇನ್ನಿಂಗ್ಸ್‌ಗಳಲ್ಲಿ ವೈಭವ್ ಸೂರ್ಯವಂಶಿ 776 ರನ್ ಬಾರಿಸಿ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಅಗ್ರಸ್ಥಾನದಲ್ಲಿದ್ದರು. ಆದರೆ ಈ ರೇಸ್​ನಲ್ಲಿ ಅವರ ಹಿಂದೆಯೇ ಇದ್ದ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಕ್ರಮವಾಗಿ 722 ರನ್ ಮತ್ತು 710 ರನ್ ಬಾರಿಸಿದ್ದರು. ಹೀಗಾಗಿ ವೈಭವ್ ಅವರನ್ನು ಹಿಂದಿಕ್ಕಲು ಗಿಲ್​ಗೆ 55 ರನ್‌ ಮತ್ತು ಸುದರ್ಶನ್‌ಗೆ 67 ರನ್‌ಗಳು ಬೇಕಾಗಿದ್ದವು. ಆದರೆ ಫೈನಲ್ ಪಂದ್ಯದಲ್ಲಿ ಅವರಿಬ್ಬರು ಇಷ್ಟು ರನ್ ಬಾರಿಸುವಲ್ಲಿ ವಿಫಲರಾದರು.

ವೈಭವ್ ಸೂರ್ಯವಂಶಿ ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ?

ಈ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ

ನಾಯಕ ಶುಭ್​ಮನ್ ಗಿಲ್ ಕೇವಲ 10 ರನ್ ಗಳಿಸಿ ಔಟಾದರೆ, ಸುದರ್ಶನ್ 12 ರನ್‌ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಹೀಗಾಗಿ, ಗಿಲ್ ಅವರ ಸೀಸನ್ 732 ರನ್‌ಗಳೊಂದಿಗೆ ಮತ್ತು ಸುದರ್ಶನ್ ಅವರ 722 ರನ್‌ಗಳೊಂದಿಗೆ ಕೊನೆಗೊಂಡಿತು. ಆದ್ದರಿಂದ 16 ಪಂದ್ಯಗಳಲ್ಲಿ 776 ರನ್ ಬಾರಿಸಿದ್ದ ವೈಭವ್​ಗೆ ಆರೆಂಜ್ ಕ್ಯಾಪ್ ಸಿಕ್ಕಿದೆ. ಈ ಮೂಲಕ ವೈಭವ್ ಈ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sun, 31 May 26

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ