AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ವರ್ಷದ ವೈಭವ್ ಸೂರ್ಯವಂಶಿ ಆದಾಯದಲ್ಲಿ 40 ಪಟ್ಟು ಹೆಚ್ಚಳ

Vaibhav Suryavanshi Net Worth: 14 ವರ್ಷದ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ಪ್ರವಾಸದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಸಂಚಲನ ಮೂಡಿಸಿದ್ದಾರೆ. ಐಪಿಎಲ್ 2025 ರಲ್ಲಿ ಅದ್ಭುತ ಪ್ರದರ್ಶನದಿಂದಾಗಿ ಅವರ ನಿವ್ವಳ ಮೌಲ್ಯ ಒಂದು ವರ್ಷದಲ್ಲಿ 40 ಪಟ್ಟು ಹೆಚ್ಚಾಗಿದೆ. 5 ಲಕ್ಷದಿಂದ 2 ಕೋಟಿಗೆ ಏರಿಕೆಯಾದ ಅವರ ಆದಾಯದ ಮೂಲಗಳು ಐಪಿಎಲ್, ದೇಶೀಯ ಪಂದ್ಯಗಳು ಮತ್ತು ಜಾಹೀರಾತುಗಳಾಗಿದೆ.

14 ವರ್ಷದ ವೈಭವ್ ಸೂರ್ಯವಂಶಿ ಆದಾಯದಲ್ಲಿ 40 ಪಟ್ಟು ಹೆಚ್ಚಳ
Vaibhav Suryavanshi
ಪೃಥ್ವಿಶಂಕರ
|

Updated on:Jul 17, 2025 | 7:50 PM

Share

ಭಾರತ ಅಂಡರ್ 19 ತಂಡದೊಂದಿಗೆ ಇಂಗ್ಲೆಂಡ್‌ ಪ್ರವಾಸದಲ್ಲಿರುವ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕವೇ ಇಂಗ್ಲೆಂಡ್​ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಐಪಿಎಲ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸುದ್ದಿಯಾಗಿದ್ದ ವೈಭವ್ ಸೂರ್ಯವಂಶಿ ಮೈದಾನದಲ್ಲಿ ಅದ್ಭುತಗಳನ್ನು ಮಾಡುತ್ತಿರುವುದು ಮಾತ್ರವಲ್ಲದೆ, ತಮ್ಮ ಪ್ರತಿಭೆಯ ಮೂಲಕ ಮೈದಾನದ ಹೊರಗೆಯೂ ಸುದ್ದಿಯಾಗುತ್ತಿದ್ದಾರೆ. ಐಪಿಎಲ್​ಗೂ ಮುನ್ನ ನಡೆದಿದ್ದ ಮೆಗಾ ಹರಾಜಿನಲ್ಲಿ 1 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾಗಿ ದಾಖಲೆ ಬರೆದಿದ್ದ ವೈಭವ್ ಮೇಲೆ ಇದೀಗ ಹಣದ ಮಳೆಯಾಗುತ್ತಿದೆ. ಆ ಪ್ರಕಾರ ಕಳೆದ ಒಂದು ವರ್ಷದಲ್ಲಿ ವೈಭವ್ ಅವರ ಆದಾಯದಲ್ಲಿ 40 ಪಟ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದೆ.

ವೈಭವ್ ನಿವ್ವಳ ಮೌಲ್ಯ ಎಷ್ಟು?

ವೈಭವ್ ಸೂರ್ಯವಂಶಿ ಅವರ ನಿವ್ವಳ ಮೌಲ್ಯ 2024 ರಲ್ಲಿ 5 ಲಕ್ಷ ರೂ.ಗಳಾಗಿದ್ದು, ಇದು 2025 ರ ಐಪಿಎಲ್ ನಂತರ ಸುಮಾರು 2 ಕೋಟಿ ರೂ.ಗಳಿಗೆ ತಲುಪಿದೆ. ಇದರರ್ಥ ವೈಭವ್ ಸೂರ್ಯವಂಶಿ ಅವರ ಆದಾಯ ಒಂದು ವರ್ಷದಲ್ಲಿ 40 ಪಟ್ಟು ಹೆಚ್ಚಾಗಿದೆ. ವೈಭವ್ ಪಂದ್ಯ ಶುಲ್ಕ ಮತ್ತು ಜಾಹೀರಾತುಗಳಿಂದಲೂ ಹಣ ಸಂಪಾಧಿಸುತ್ತಿದ್ದಾರೆ. ಅವರ ಪ್ರಮುಖ ಆದಾಯದ ಮೂಲಗಳು ಐಪಿಎಲ್, ದೇಶೀಯ ಪಂದ್ಯ ಶುಲ್ಕ ಮತ್ತು ಜಾಹೀರಾತುಗಳಾಗಿದೆ. ಪ್ರಸ್ತುತ ಬಿಹಾರ ಅಂಡರ್ -19 ತಂಡದ ಪರ ರಣಜಿ ಟ್ರೋಫಿ ಮತ್ತು ವಿನೂ ಮಂಕಡ್ ಟ್ರೋಫಿಯಲ್ಲಿ ಆಡಿರುವ ವೈಭವ್​ 35 ಎಸೆತಗಳಲ್ಲಿ ಶತಕ ಬಾರಿಸಿದಕ್ಕಾಗಿ ಬಿಹಾರದ ಮುಖ್ಯಮಂತ್ರಿ ರಾಜ್ಯ ಸರ್ಕಾರದ ಪರವಾಗಿ 10 ಲಕ್ಷ ರೂ.ಗಳ ಬಹುಮಾನವನ್ನು ಸಹ ಘೋಷಿಸಿದ್ದರು.

‘ಪೃಥ್ವಿ ಶಾ ರೀತಿ ಹಾಳಾಗಬೇಡಿ’; ವೈಭವ್ ಸೂರ್ಯವಂಶಿಗೆ ಎಚ್ಚರಿಕೆ

ಐಪಿಎಲ್​ನಲ್ಲಿ ವೈಭವ್ ಅಂಕಿಅಂಶ

ವೈಭವ್ ಸೂರ್ಯವಂಶಿ ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ 7 ಪಂದ್ಯಗಳಲ್ಲಿ 36 ಸರಾಸರಿಯಲ್ಲಿ 252 ರನ್ ಗಳಿಸಿದ್ದರು. ಇದರಲ್ಲಿ ಒಂದು ಶತಕ ಮತ್ತು ಅರ್ಧಶತಕವೂ ಸೇರಿತ್ತು. 206.50 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದ ವೈಭವ್ ಅವರ ಅತ್ಯುತ್ತಮ ಸ್ಕೋರ್ 101 ರನ್‌ ಆಗಿದೆ. ಐಪಿಎಲ್ 2025 ರಲ್ಲಿ ಅವರು ಬ್ಯಾಟಿಂಗ್ ಮಾಡಿದ ರೀತಿಯನ್ನು ನೋಡಿದರೆ, ರಾಜಸ್ಥಾನ್ ರಾಯಲ್ಸ್ ತಂಡವು ಖಂಡಿತವಾಗಿಯೂ ಅವರನ್ನು ಐಪಿಎಲ್ 2026ರಲ್ಲಿ ತಂಡದಲ್ಲಿ ಉಳಿಸಿಕೊಳ್ಳುವುದು ಖಚಿತ ಎನ್ನಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:47 pm, Thu, 17 July 25

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ