‘ಮತ್ತೊಬ್ಬ ಸೂರ್ಯವಂಶಿ ಬರಲು 40 ವರ್ಷ ಬೇಕಾಗಬಹುದು’;  ರಾಹುಲ್ ದ್ರಾವಿಡ್

ವೈಭವ್ ಸೂರ್ಯವಂಶಿ ಈ ಬಾರಿಯ ಐಪಿಎಲ್‌ನಲ್ಲಿ ದಾಖಲೆ ಬರೆದು, ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಅವರ ಅದ್ಭುತ ಪ್ರತಿಭೆಗೆ ಮಾಜಿ ನಾಯಕ ರಾಹುಲ್ ದ್ರಾವಿಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೈಭವ್ ಒಬ್ಬ 'ಯೂನಿಕ್ ಪ್ಲೇಯರ್' ಎಂದಿರುವ ದ್ರಾವಿಡ್, ರಾಜಸ್ಥಾನ್ ರಾಯಲ್ಸ್‌ಗೆ ವೈಭವ್ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 40 ವರ್ಷಗಳ ಬಳಿಕ ಸಿಕ್ಕಿದ ಪ್ರತಿಭೆ ಎಂದಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಮಿಂಚಲಿ ಎಂದು ಹಾರೈಸಿದ್ದಾರೆ.

‘ಮತ್ತೊಬ್ಬ ಸೂರ್ಯವಂಶಿ ಬರಲು 40 ವರ್ಷ ಬೇಕಾಗಬಹುದು’;  ರಾಹುಲ್ ದ್ರಾವಿಡ್
ವೈಭವ್ ಸೂರ್ಯವಂಶಿ
Image Credit source: IPL

Updated on: Jun 12, 2026 | 12:18 PM

ವೈಭವ್ ಸೂರ್ಯವಂಶಿ ಅವರು ತಮ್ಮ ಪ್ರತಿಭೆಯನ್ನು ಜಗತ್ತಿನ ಎದರು ತೆರೆದಿಟ್ಟಿದ್ದಾರೆ. ಈ ಬಾರಿಯ ಐಪಿಎಲ್ ಸೀಸನ್​ ಅಲ್ಲಿ ದಾಖಲೆ ಮೇಲೆ ದಾಖಲೆ ಬರೆದಿದ್ದಾರೆ. ಸೂಪರ್​ ಸ್ಟ್ರೈಕರ್​, ಆರೆಂಜ್ ಕ್ಯಾಪ್, ಸೀಸನ್​ನ ಅತಿ ಹೆಚ್ಚು ಸಿಕ್ಸ್ ಸೇರಿದಂತೆ ಅನೇಕ ಅವಾರ್ಡ್ ಅವರ ಕೈ ಸೇರಿತ್ತು. ಈಗ ಅವರಿಗೆ ಟೀಂ ಇಂಡಿಯಾ ಮಣೆ ಹಾಕಿದೆ. ಈ ಕುರಿತು ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಮನಬಿಚ್ಚಿ ಮಾತನಾಡಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವೈಭವ್ ಸೂರ್ಯವಂಶಿ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದ್ರಾವಿಡ್, ‘ಎಲ್ಲರನ್ನೂ ವೈಭವ್ ಸೂರ್ಯವಂಶಿಗೆ ಹೋಲಿಕೆ ಮಾಡುವುದು ಸರಿಯಲ್ಲ. ಆತ ಒಬ್ಬ ಅತ್ಯಂತ ಯೂನಿಕ್ ಪ್ಲೇಯರ್’ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್ ದ್ರಾವಿಡ್ ಈ ಮಾತುಗಳನ್ನು ಆಡಿದ್ದಾರೆ. ಮಾಜಿ ಕ್ರಿಕೆಟಿಗ ಹಾಗೂ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರೊಂದಿಗೆ ಸೇರಿ ಟ್ರೋಫಿ ಅನಾವರಣಗೊಳಿಸಿದ ಬಳಿಕ, ಮಾಧ್ಯಮಗಳ ಜೊತೆ ಮಾತನಾಡುತ್ತಾ ದ್ರಾವಿಡ್ ಅವರು ವೈಭವ್ ಅವರ ಬ್ಯಾಟಿಂಗ್ ಶೈಲಿ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

YouTube video player

‘ಎಲ್ಲರನ್ನೂ ವೈಭವ್ ಸೂರ್ಯವಂಶಿಗೆ ಹೋಲಿಸಿ ನೋಡುವುದು ಚೆನ್ನಾಗಿರಲ್ಲ. ವೈಭವ್ ಸೂರ್ಯವಂಶಿ ಒಬ್ಬ ವಿಭಿನ್ನ ಮತ್ತು ಯೂನಿಕ್ ಪ್ಲೇಯರ್. ಸಚಿನ್ 15 ವರ್ಷದವರಿದ್ದಾಗ ಆಡಿದ್ರು. 40 ವರ್ಷಗಳ ಸುದೀರ್ಘ ಅವಧಿಯ ಬಳಿಕ ಈಗ ಮತ್ತೊಬ್ಬ ವೈಭವ್ ಸೂರ್ಯವಂಶಿ ನಮಗೆ ಸಿಕ್ಕಿದ್ದಾನೆ. ಮತ್ತೊಬ್ಬ ವೈಭವ್ ಬರಲು ಇನ್ನು 40 ವರ್ಷ ಬೇಕಾಗಬಹುದು’ ಎಂದು ನಕ್ಕಿದ್ದಾರೆ.

ಇದನ್ನೂ ಓದಿ: ಸೂರ್ಯವಂಶಿ ಟೀಮ್ ಇಂಡಿಯಾ ಡೆಬ್ಯೂ ವಿಳಂಬ? ಎದುರಾಯ್ತು ಅಡಚಣೆ

‘ನಮ್ಮ ಹುಡುಗರೂ ಚೆನ್ನಾಗಿ ಆಡುತ್ತಾರೆ, ಅವರಿಗೂ ಅವಕಾಶ ಸಿಗಬೇಕು. ಆದರೆ ವೈಭವ್ ಒಬ್ಬ ವಿಭಿನ್ನ ಆಟಗಾರ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳಬೇಕು. ಆತ ಸಖತ್ ಆಗಿ ಆಡುತ್ತಿದ್ದಾನೆ. ಅದೊಂದು ಸ್ಪೆಷಲ್ ಟ್ಯಾಲೆಂಟ್. ಮುಂಬರುವ ದಿನಗಳಲ್ಲೂ ಆತ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸಿಕೊಂಡು ಹೋಗಲಿ’ ಎಂದು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:24 am, Fri, 12 June 26

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us