AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೃಥ್ವಿ ಶಾ ರೀತಿ ಹಾಳಾಗಬೇಡಿ’; ವೈಭವ್ ಸೂರ್ಯವಂಶಿಗೆ ಎಚ್ಚರಿಕೆ

Vaibhav Suryavanshi: ಇಂಗ್ಲೆಂಡ್ ಅಂಡರ್-19 ವಿರುದ್ಧ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ಅಬ್ಬರಿಸಿರುವ ವೈಭವ್ ಅವರ ಜನಪ್ರಿಯತೆ ಹೆಚ್ಚುತ್ತಿರುವುದರಿಂದ, ಅಭಿಮಾನಿಗಳು ಅವರಿಗೆ ವೃತ್ತಿಪರ ಜೀವನದಲ್ಲಿ ಗಮನಹರಿಸುವಂತೆ ಸಲಹೆ ನೀಡುತ್ತಿದ್ದಾರೆ. ಪೃಥ್ವಿ ಶಾ ಅವರ ಉದಾಹರಣೆಯನ್ನು ನೀಡುವ ಮೂಲಕ ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.

‘ಪೃಥ್ವಿ ಶಾ ರೀತಿ ಹಾಳಾಗಬೇಡಿ’; ವೈಭವ್ ಸೂರ್ಯವಂಶಿಗೆ ಎಚ್ಚರಿಕೆ
Vaibhav Suryavanshi
ಪೃಥ್ವಿಶಂಕರ
|

Updated on: Jul 16, 2025 | 7:26 PM

Share

ಇಂಗ್ಲೆಂಡ್‌ ಅಂಡರ್ 19 (England U19) ತಂಡದ ವಿರುದ್ಧ ಅದ್ಭುತ ಪ್ರದರ್ಶನ ನೀಡುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಪ್ರಸ್ತುತ ಸುದ್ದಿಯಲ್ಲಿದ್ದಾರೆ. ಏಕದಿನ ಸರಣಿಯಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದ ವೈಭವ್, ಮೊದಲ ಯುವ ಟೆಸ್ಟ್ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿದ್ದರು. ವೈಭವ್ ಸೂರ್ಯವಂಶಿ ಅವರ ಮೋಡಿ ಎಷ್ಟಿದೆಯೆಂದರೆ ಇಂಗ್ಲೆಂಡ್‌ನಲ್ಲಿಯೂ ಜನರು ಅವರು ಆಟೋಗ್ರಾಫ್ ಪಡೆಯಲು ಮುಗಿಬೀಳುತ್ತಿದ್ದಾರೆ. ವೈಭವ್ ಸೂರ್ಯವಂಶಿ ಪಡೆಯುತ್ತಿರುವ ಈ ಜನಪ್ರಿಯತೆಯ ನಡುವೆ, ತಮ್ಮ ವೃತ್ತಿಜೀವನದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂಬ ಎಚ್ಚರಿಕೆಯನ್ನು ಸಹ ಪಡೆಯುತ್ತಿದ್ದಾರೆ. ಅಭಿಮಾನಿಗಳು ಪೃಥ್ವಿ ಶಾರನ್ನು ಉದಾಹರಣೆ ನೀಡುವ ಮೂಲಕ ವೈಭವ್​ಗೆ ಬುದ್ಧಿವಾದ ಹೇಳಲಾರಂಭಿಸಿದ್ದಾರೆ.

ವೈಭವ್​ಗೆ ಫ್ಯಾನ್ಸ್​ಗಳಿಂದ ಸಲಹೆ

ವಾಸ್ತವವಾಗಿ ವೈಭವ್ ಸೂರ್ಯವಂಶಿ ಇಂಗ್ಲೆಂಡ್‌ನಲ್ಲಿ ಮಕ್ಕಳಿಗೆ ಆಟೋಗ್ರಾಫ್ ನೀಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಅವರ ಜನಪ್ರಿಯತೆಯಿಂದ ಅನೇಕ ಅಭಿಮಾನಿಗಳು ಸಂತೋಷಪಟ್ಟಿದ್ದರೆ, ಇನ್ನು ಕೆಲವರು ವೈಭವ್‌ಗೆ ಎಚ್ಚರಿಕೆ ನೀಡಿದ್ದಾರೆ. ಅಭಿಮಾನಿಯೊಬ್ಬರು, ‘ನಿಮ್ಮ ಗಮನವನ್ನು ಆಟದ ಮೇಲೆ ಇರಿಸಿ, ಇಲ್ಲದಿದ್ದರೆ ಭಾರತವು ಪೃಥ್ವಿ ಶಾ ಅವರನ್ನು ಸಹ ನೋಡಿದೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಇಂಗ್ಲೆಂಡ್‌ನಲ್ಲಿ ವೈಭವ್ ಅಬ್ಬರ

ವೈಭವ್, ಯೂತ್ ಏಕದಿನ ಸರಣಿಯಲ್ಲಿ ಮತ್ತು ಈಗ ಇಂಗ್ಲೆಂಡ್ ಅಂಡರ್ 19 ತಂಡದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಏಕದಿನ ಸರಣಿಯಲ್ಲಿ 355 ರನ್ ಬಾರಿಸಿದ್ದ ವೈಭವ್, ಈ ಸರಣಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಈ ಸರಣಿಯಲ್ಲಿ ಅವರು 71 ರ ಸರಾಸರಿ ಮತ್ತು 174 ರ ಸ್ಟ್ರೈಕ್ ರೇಟ್​ನಲ್ಲಿ 29 ಸಿಕ್ಸರ್‌ಗಳ ಸಹಿತ ವೈಭವ್ ಒಂದು ಶತಕ ಮತ್ತು ಅರ್ಧಶತಕವನ್ನು ಸಹ ಬಾರಿಸಿದ್ದರು.

IND vs ENG: ಅಬ್ಬರ ಸಿಡಿಲಬ್ಬರ.. ಇಂಗ್ಲೆಂಡ್​ನಲ್ಲಿ ಸ್ಫೋಟಕ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

ಯೂತ್ ಟೆಸ್ಟ್ ಬಗ್ಗೆ ಹೇಳುವುದಾದರೆ, ವೈಭವ್ ಸೂರ್ಯವಂಶಿ ಇದರಲ್ಲೂ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 14 ರನ್‌ ಮಾತ್ರ ಕಲೆಹಾಕಿದರಾದರೂ ಎರಡನೇ ಇನ್ನಿಂಗ್ಸ್‌ನಲ್ಲಿ 56 ರನ್‌ ಬಾರಿಸುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಈ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ