AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaibhav Suryavanshi IPL Auction 2025: 13 ವರ್ಷದ ಬಾಲಕನಿಗೆ 1.10 ಕೋಟಿ ರೂ. ನೀಡಿದ ರಾಜಸ್ಥಾನ

Vaibhav Suryavanshi Auction Price: ಪ್ರತಿಭೆಯೊಂದಿದ್ದರೆ ಕ್ರಿಕೆಟ್‌ನಲ್ಲಿ ವಯಸ್ಸು ಮುಖ್ಯವಾಗುವುದಿಲ್ಲ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಕೇವಲ 13ನೇ ವಯಸ್ಸಿನಲ್ಲಿ ಕ್ರಿಕೆಟ್ ಲೋಕದಲ್ಲಿ ತಲ್ಲಣ ಮೂಡಿಸಿರುವ ಬಿಹಾರದ ಸಮಸ್ತಿಪುರದ ವೈಭವ್ ಸೂರ್ಯವಂಶಿಯನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬರೋಬ್ಬರಿ 1.10 ಕೋಟಿ ರೂ. ನೀಡಿ ಖರೀದಿಸಿದೆ.

Vaibhav Suryavanshi IPL Auction 2025: 13 ವರ್ಷದ ಬಾಲಕನಿಗೆ 1.10 ಕೋಟಿ ರೂ. ನೀಡಿದ ರಾಜಸ್ಥಾನ
ವೈಭವ್ ಸೂರ್ಯವಂಶಿ
ಪೃಥ್ವಿಶಂಕರ
|

Updated on:Nov 25, 2024 | 8:58 PM

Share

ಪ್ರತಿಭೆಯೊಂದಿದ್ದರೆ ಕ್ರಿಕೆಟ್‌ನಲ್ಲಿ ವಯಸ್ಸು ಮುಖ್ಯವಾಗುವುದಿಲ್ಲ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಕೇವಲ 13ನೇ ವಯಸ್ಸಿನಲ್ಲಿ ಕ್ರಿಕೆಟ್ ಲೋಕದಲ್ಲಿ ತಲ್ಲಣ ಮೂಡಿಸಿರುವ ಬಿಹಾರದ ಸಮಸ್ತಿಪುರದ ವೈಭವ್ ಸೂರ್ಯವಂಶಿಗೆ ಐಪಿಎಲ್‌ನಲ್ಲಿ ಆಡುವ ಅವಕಾಶ ದೊರೆತಿದೆ. ಇಷ್ಟು ದಿನ ದೇಶೀ ಕ್ರಿಕೆಟ್‌ನಲ್ಲಿ ರನ್ ಮಳೆ ಹರಿಸುತ್ತಿರುವ ವೈಭವ್ ಸೂರ್ಯವಂಶಿ ಇನ್ನು ಮುಂದೆ ಐಪಿಎಲ್‌ನಲ್ಲಿ ಅಬ್ಬರಿಸುವುದನ್ನು ನಾವು ಕಾಣಬಹುದಾಗಿದೆ. ಇಂದು ನಡೆದ ಮೆಗಾ ಹರಾಜಿನಲ್ಲಿ ಈ ಯುವ ಕ್ರಿಕೆಟಿಗನ್ನು ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಬರೋಬ್ಬರಿ 1.10 ಕೋಟಿ ರೂ. ನೀಡಿದೆ. ಈ ಹರಾಜಿನಲ್ಲಿ ಘಟಾನುಘಟಿ ಆಟಗಾರರೇ ಹರಾಜಾಗದೆ ಉಳಿದಿರುವಾಗ ಕೇವಲ 13 ವರ್ಷದ ವೈಭವ್, ಐಪಿಎಲ್​ನಲ್ಲಿ ಕೋಟಿ ಸರದಾರನಾಗಿ ಹೊರಹೊಮ್ಮಿರುವುದು ಸಂತಸಕರ ಸುದ್ದಿಯಾಗಿದೆ.ಇದರ ಜೊತೆಗೆ ಕೇವಲ 13 ವರ್ಷಕ್ಕೆ ಐಪಿಎಲ್​ ಲೋಕಕ್ಕೆ ಕಾಲಿಟ್ಟ ಮೊದಲ ಯುವ ಕ್ರಿಕೆಟಿಗ ಎಂಬ ದಾಖಲೆಯನ್ನು ವೈಭವ್ ಬರೆದಿದ್ದಾರೆ.

ಅತಿ ಚಿಕ್ಕ ವಯಸ್ಸಿಗೆ ಐಪಿಎಲ್​ಗೆ ಕಾಲಿಟ್ಟ ದಾಖಲೆ

ಐಪಿಎಲ್ ಮೆಗಾ ಹರಾಜಿನಲ್ಲಿ 491 ನೇ ಆಟಗಾರನಾಗಿ ಹರಾಜಿಗೆ ಬಂದಿದ್ದ ವೈಭವ್ ಸೂರ್ಯವಂಶಿಯನ್ನು ಯಾರು ಖರೀದಿಸುವುದಿಲ್ಲ ಎಂಬುದು ಆರಂಭದ ಅಭಿಪ್ರಾಯವಾಗಿತ್ತು. ಆದರೆ ವೈಭವ್​ಗಾಗಿ ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿತ್ತು. ಅಂತಿಮವಾಗಿ ರಾಜಸ್ಥಾನ ರಾಯಲ್ಸ್, 1.10 ಕೋಟಿ ರೂ. ನೀಡಿ ಈ ಯುವ ಕ್ರಿಕೆಟಿಗನನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಇದೀಗ ಅತಿ ಚಿಕ್ಕ ವಯಸ್ಸಿಗೆ ಐಪಿಎಲ್​ನಲ್ಲಿ ಆಡುವ ಅವಕಾಶ ಪಡೆದಿರುವ ವೈಭವ್​ಗೆ ತಂಡದ ಪ್ಲೇಯಿಂಗ್​ 11ನಲ್ಲಿ ಅವಕಾಶ ಸಿಗುತ್ತಾ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ರಣಜಿ ಆಡಿರುವ ವೈಭವ್

ಕೇವಲ 13 ವಯಸ್ಸಿನ ವೈಭವ್​ರನ್ನು ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಲು ಕಾರಣವೂ ಇದೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ವೈಭವ್ ಭಾರತದ ಕ್ರಿಕೆಟ್​ನಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ| ಈ ವಯಸ್ಸಿಗೆ ಅವರು ರಣಜಿ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಅಲ್ಲದೆ ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟ್ರೋಫಿಗಳನ್ನು ಆಡಿದ್ದಾರೆ. ಇತ್ತೀಚೆಗೆ ಭಾರತದ ಅಂಡರ್-19 ತಂಡಕ್ಕೂ ಆಯ್ಕೆಯಾಗಿದ್ದರು. ವೈಭವ್ ಸೂರ್ಯವಂಶಿ ಅವರು ವಿವಿಧ ಟೂರ್ನಿಗಳು ಸೇರಿದಂತೆ ಒಂದು ವರ್ಷದಲ್ಲಿ ಒಟ್ಟು 49 ಶತಕಗಳನ್ನು ಗಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಕೇವಲ 12 ವರ್ಷ ಮತ್ತು 284 ದಿನಗಳಲ್ಲಿ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದಾರೆ. ಇದಲ್ಲದೇ ರಣಧೀರ್ ವರ್ಮಾ ಅಂಡರ್-19 ಏಕದಿನ ಪಂದ್ಯಾವಳಿಯಲ್ಲೂ ವೈಭವ್ ತ್ರಿಶತಕ ಬಾರಿಸಿದ್ದರು.

ಆಸ್ಟ್ರೇಲಿಯಾ ಎ ವಿರುದ್ಧ ಶತಕ

ಸೂರ್ಯವಂಶಿ ಈ ವರ್ಷದ ಜನವರಿಯಲ್ಲಿ ಬಿಹಾರ ಪರ ರಣಜಿಗೆ ಪದಾರ್ಪಣೆ ಮಾಡಿ ಉತ್ತಮ ಪ್ರದರ್ಶನ ನೀಡಿದ್ದರು. ಆ ನಂತರ ವೈಭವ್ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತ ಎ ತಂಡದಲ್ಲಿ ಆಯ್ಕೆ ಮಾಡಲಾಯಿತು. ಆಸ್ಟ್ರೇಲಿಯಾ ಎ ವಿರುದ್ಧವೂ ವೈಭವ್ ಅದ್ಭುತ ಪ್ರದರ್ಶನ ನೀಡಿ ಶತಕ ಸಿಡಿಸಿದ್ದರು. ವೈಭವ್ ಕೇವಲ 58 ಎಸೆತಗಳಲ್ಲಿ ಈ ಶತಕ ದಾಖಲಿಸಿದ್ದರು. ಅವರ ಇನ್ನಿಂಗ್ಸ್‌ನಲ್ಲಿ 14 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಸೂರ್ಯವಂಶಿ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಆಡಿರುವ 10 ಇನ್ನಿಂಗ್ಸ್‌ಗಳಲ್ಲಿ 100 ರನ್ ಗಳಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Mon, 25 November 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು