AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅಬ್ಬರ ಸಿಡಿಲಬ್ಬರ.. ಇಂಗ್ಲೆಂಡ್​ನಲ್ಲಿ ಸ್ಫೋಟಕ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

Vaibhav Suryavanshi Smashes Fastest Youth ODI Century: ಭಾರತದ ಅಂಡರ್-19 ಕ್ರಿಕೆಟ್ ತಂಡದ ಪರ ಆಡುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಅವರು ಐದು ಪಂದ್ಯಗಳ ಯೂತ್ ಏಕದಿನ ಸರಣಿಯಲ್ಲಿ ಪ್ರತಿ ಪಂದ್ಯದಲ್ಲೂ 40 ಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ನಾಲ್ಕನೇ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ಶತಕ ಬಾರಿಸಿ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕದ ದಾಖಲೆ ನಿರ್ಮಿಸಿದ್ದಾರೆ.

IND vs ENG: ಅಬ್ಬರ ಸಿಡಿಲಬ್ಬರ.. ಇಂಗ್ಲೆಂಡ್​ನಲ್ಲಿ ಸ್ಫೋಟಕ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ
Vaibhav Suryavanshi
ಪೃಥ್ವಿಶಂಕರ
|

Updated on:Jul 05, 2025 | 5:44 PM

Share

ಭಾರತದ ಅಂಡರ್-19 ಕ್ರಿಕೆಟ್ (India U19 cricket) ತಂಡವು ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಅಲ್ಲಿ ಆತಿಥೇಯ ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ಐದು ಪಂದ್ಯಗಳ ಯೂತ್ ಏಕದಿನ ಸರಣಿಯನ್ನು ಆಡುತ್ತಿದೆ. ಈ ಸರಣಿಯಲ್ಲಿ ಭಾರತದ 14 ವರ್ಷದ ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಸಂಚಲನ ಸೃಷ್ಟಿಸುತ್ತಿದ್ದಾರೆ. ಸರಣಿಯ ಮೊದಲ 3 ಪಂದ್ಯಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದ ವೈಭವ್​ ಇದೀಗ ನಾಲ್ಕನೇ ಏಕದಿನ ಪಂದ್ಯದಲ್ಲಿ 190 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನೊಂದಿಗೆ ಬಿರುಗಾಳಿಯ ಶತಕ ಬಾರಿಸಿ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಸರಣಿಯಲ್ಲಿ ಇಲ್ಲಿಯವರೆಗೆ, ಅವರು ಪ್ರತಿ ಪಂದ್ಯದಲ್ಲೂ 40 ರನ್‌ಗಳ ಗಡಿ ದಾಟಿರುವುದು ಅವರ ಅದ್ಭುತ ಫಾರ್ಮ್​ಗೆ ಉದಾಹರಣೆಯಾಗಿದೆ. ಶತಕದ ನಂತರವೂ ಹೊಡಿಬಡಿ ಆಟವನ್ನು ಮುಂದುವರೆಸಿದ ವೈಭವ್ 143 ರನ್​ಗಳಿಗೆ ತಮ್ಮ ಇನ್ನಿಂಗ್ಸ್​ಗೆ ಅಂತ್ಯಹಾಡಿದರು.

ವೇಗದ ಶತಕ ಬಾರಿಸಿದ ವೈಭವ್

ವೋರ್ಸೆಸ್ಟರ್‌ನ ನ್ಯೂ ರೋಡ್ ಮೈದಾನದಲ್ಲಿ ನಡೆದ ನಾಲ್ಕನೇ ಯೂತ್ ಏಕದಿನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಪಂದ್ಯದ ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದರು. ಹೀಗಾಗಿ ವೈಭವ್ ಕೇವಲ 52 ಎಸೆತಗಳಲ್ಲಿ 10 ಬೌಂಡರಿಗಳು ಮತ್ತು 7 ಸಿಕ್ಸರ್‌ಗಳ ಸಹಿತ ಶತಕ ಪೂರೈಸಿದರು. ಇದರೊಂದಿಗೆ, ಅವರು ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮೊದಲು, ಯೂತ್ ಏಕದಿನ ಪಂದ್ಯದಲ್ಲಿ ಯಾವುದೇ ಆಟಗಾರನಿಗೂ ಇಷ್ಟು ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಲು ಸಾಧ್ಯವಾಗಿರಲಿಲ್ಲ.

ಇದಕ್ಕೂ ಮೊದಲು, ಜುಲೈ 2 ರಂದು ನಾರ್ಥಾಂಪ್ಟನ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ, ವೈಭವ್ 31 ಎಸೆತಗಳಲ್ಲಿ 86 ರನ್ ಗಳಿಸುವ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಈ ಇನ್ನಿಂಗ್ಸ್‌ನಲ್ಲಿ, ಅವರು ಒಂಬತ್ತು ಸಿಕ್ಸರ್‌ಗಳು ಮತ್ತು ಆರು ಬೌಂಡರಿಗಳನ್ನು ಬಾರಿಸಿದ್ದರು. ಇದರಿಂದಾಗಿ ಆ ಪಂದ್ಯವನ್ನು ಸಹ ಭಾರತ ಗೆದ್ದುಕೊಂಡಿತ್ತು. ಅವರ ಇನ್ನಿಂಗ್ಸ್ ಭಾರತೀಯ ಅಂಡರ್-19 ತಂಡಕ್ಕೆ ಸರಣಿಯಲ್ಲಿ 2-1 ಮುನ್ನಡೆಯನ್ನು ಸಹ ನೀಡಿತ್ತು.

IND vs ENG: ಸತತ 2ನೇ ಪಂದ್ಯದಲ್ಲೂ ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ

ಪ್ರತಿ ಪಂದ್ಯದಲ್ಲೂ 40+ ರನ್

ಮೇಲೆ ಹೇಳಿದಂತೆ ಈ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿ ಅವರ ಬ್ಯಾಟ್ ಅಬ್ಬರಿಸುತ್ತಿದೆ. ಈ ಪ್ರವಾಸದ ಪ್ರತಿ ಇನ್ನಿಂಗ್ಸ್‌ನಲ್ಲೂ ಅವರು ರನ್​ಗಳ ಮಳೆಗರೆದಿದ್ದಾರೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್‌ಗಳ ಇನ್ನಿಂಗ್ಸ್ ಆಡಿದ್ದ ವೈಭವ್ ಇದಾದ ನಂತರ ಎರಡನೇ ಪಂದ್ಯದಲ್ಲಿಯೂ 45 ರನ್ ಬಾರಿಸಿದ್ದರು. ಆ ಬಳಿಕ ನಡೆದಿದ್ದ ಮೂರನೇ ಪಂದ್ಯದಲ್ಲಿ 86 ರನ್ ಸಿಡಿಸಿದ್ದ ವೈಭವ್ ಈಗ ಶತಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Sat, 5 July 25

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ