AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕನ್ನಡತಿ ವೇದಾ ಕೃಷ್ಣಮೂರ್ತಿ

Veda Krishnamurthy's Retirement: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ವುಮನ್ ವೇದಾ ಕೃಷ್ಣಮೂರ್ತಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೇದಾ, 48 ಏಕದಿನ ಮತ್ತು 76 ಟಿ20 ಪಂದ್ಯಗಳನ್ನು ಆಡಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಗಮನಾರ್ಹ ಸಾಧನೆ ಮಾಡಿದ ವೇದಾ, ಭಾರತ ಮಹಿಳಾ ತಂಡದ ಯಶಸ್ಸಿಗೆ ಕೊಡುಗೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕನ್ನಡತಿ ವೇದಾ ಕೃಷ್ಣಮೂರ್ತಿ
Veda Krishnamurthy
ಪೃಥ್ವಿಶಂಕರ
|

Updated on:Jul 25, 2025 | 7:44 PM

Share

ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸ ಮಾಡಿದ್ದ ಭಾರತ ವನಿತಾ ಪಡೆ (Indian Women’s Cricket), ಈ ಪ್ರವಾಸದಲ್ಲಿ ಟಿ20 ಸರಣಿಯನ್ನು ಮಾತ್ರವಲ್ಲದೆ ಏಕದಿನ ಸರಣಿಯನ್ನೂ ಗೆದ್ದುಕೊಂಡಿತ್ತು. ಇದರೊಂದಿಗೆ ಇಷ್ಟರಲ್ಲೇ ಆರಂಭವಾಗಲಿರುವ ಮಹಿಳಾ ವಿಶ್ವಕಪ್​ಗೆ ಭಾರತ ತಂಡ ಉತ್ತಮ ತಯಾರಿಯನ್ನು ಮಾಡಿಕೊಂಡಿತ್ತು. ಮಹಿಳಾ ವಿಶ್ವಕಪ್​ ಇದೇ ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗುತ್ತಿದ್ದು, ಎಲ್ಲಾ ವಿಭಾಗಗಳಲ್ಲೂ ಬಲಿಷ್ಠವಾಗಿ ಕಾಣುತ್ತಿರುವ ಭಾರತ ಮಹಿಳಾ ತಂಡ ಈ ಬಾರಿಯ ಚಾಂಪಿಯನ್ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. ಆದಾಗ್ಯೂ, ಈ ಏಕದಿನ ವಿಶ್ವಕಪ್‌ ಆರಂಭಕ್ಕೂ ಮೊದಲು, ಭಾರತ ಮಹಿಳಾ ತಂಡದ ಸ್ಫೋಟಕ ಬ್ಯಾಟರ್ ವೇದಾ ಕೃಷ್ಣಮೂರ್ತಿ (Veda Krishnamurthy) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ನಿವೃತ್ತಿ ಘೋಷಿಸಿದ ವೇದಾ ಕೃಷ್ಣಮೂರ್ತಿ

ಭಾರತ ಮಹಿಳಾ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದ ಕನ್ನಡತಿ ವೇದಾ ಕೃಷ್ಣಮೂರ್ತಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವೇದಾ, ‘ದೊಡ್ಡ ಕನಸುಗಳನ್ನು ಹೊತ್ತು ಸಣ್ಣ ಪಟ್ಟಣದ ಹುಡುಗಿಯೊಬ್ಬಳು ಹೆಮ್ಮೆಯಿಂದ ಭಾರತೀಯ ತಂಡದ ಜೆರ್ಸಿಯನ್ನು ಧರಿಸುವವರೆಗೆ. ಕ್ರಿಕೆಟ್ ನನಗೆ ನೀಡಿದ ಎಲ್ಲಾ ಪಾಠಗಳು, ಜನರು ಮತ್ತು ನೆನಪುಗಳಿಗೆ ನಾನು ಕೃತಜ್ಞಳಾಗಿದ್ದೇನೆ. ಈಗ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ’ ಎಂದು ಬರೆದುಕೊಂಡಿದ್ದಾರೆ.

ವೇದಾ ಕೃಷ್ಣಮೂರ್ತಿ

ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರಾದ ವೇದಾ 2011 ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಅಂದಿನಿಂದ 2018 ರವರೆಗೆ ತಂಡದಲ್ಲಿದ ವೇದಾ ಅವರು ತಮ್ಮ ಕೊನೆಯ ಏಕದಿನ ಪಂದ್ಯವನ್ನು ಸಹ ಇದೇ ಇಂಗ್ಲೆಂಡ್‌ ವಿರುದ್ಧ ಆಡಿದ್ದರು. ತಮ್ಮ ವೃತ್ತಿಜೀವನದಲ್ಲಿ ಟೀಂ ಇಂಡಿಯಾ ಪರ 48 ಏಕದಿನ ಪಂದ್ಯಗಳನ್ನಾಡಿರುವ ವೇದಾ, 25.90 ಸರಾಸರಿಯಲ್ಲಿ 829 ರನ್ ಗಳಿಸಿದ್ದಾರೆ. ಇದರಲ್ಲಿ 8 ಅರ್ಧಶತಕಗಳು ಸೇರಿದ್ದು ಅವರ ಅತ್ಯುತ್ತಮ ಸ್ಕೋರ್ 71 ರನ್ ಆಗಿದೆ.

ಹಾಗೆಯೇ 76 ಟಿ20 ಪಂದ್ಯಗಳನ್ನಾಡಿರುವ ಅವರು 18.61 ಸರಾಸರಿಯಲ್ಲಿ 875 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕಗಳು ಸೇರಿದ್ದು ಅವರ ಅತ್ಯುತ್ತಮ ಸ್ಕೋರ್ ಔಟಾಗದೆ 57 ರನ್ ಆಗಿದೆ. 2020 ರಲ್ಲಿ ನಡೆದಿದ್ದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಡಿದ್ದ ವೇದಾ ಅವರಿಗೆ ಇದೇ ಅವರ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಿತ್ತು.

ವೇದಾ ಕೃಷ್ಣಮೂರ್ತಿ ಅವರು 2023 ರಲ್ಲಿ ಕರ್ನಾಟಕದ ಮಾಜಿ ಕ್ರಿಕೆಟಿಗ ಅರ್ಜುನ್ ಹೊಯ್ಸಳ ಅವರನ್ನು ವಿವಾಹವಾದರು. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿಯೂ ಆಡಿದ್ದ ವೇದಾ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್ ಪರ ತಮ್ಮ ಕೊನೆಯ WPL ಪಂದ್ಯವನ್ನು ಆಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Fri, 25 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ