Venkatesh Iyer: ಸ್ಫೊಟಕ ಶತಕ ಸಿಡಿಸಿದ ವೇಳೆ ವೆಂಕಟೇಶ್ ಅಯ್ಯರ್ ಸಂಭ್ರಮಿಸಿದ ಸ್ಟೈಲ್ ನೋಡಿ: ವೈರಲ್ ವಿಡಿಯೋ

Venkatesh Iyer - Rajinikanth Viral Video: ವೆಂಕಟೇಶ್ ಅಯ್ಯರ್ ಶತಕ ಸಿಡಿಸುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್ ಕಡೆ ಕೈ ತೋರಿಸಿ ರಜನಿಕಾಂತ್ ಸ್ಟೈಲ್‍ನಲ್ಲಿ ಕೂಲಿಂಗ್ ಗ್ಲಾಸ್ ಹಾಕುವಂತೆ ಕೈ ಸನ್ನೆ ಮಾಡಿ ರಜನಿಕಾಂತ್‍ಗೆ ಹುಟ್ಟುಹಬ್ಬದ ಗಿಫ್ಟ್ ಎಂಬಂತೆ ಶತಕವನ್ನು ಅವರಿಗೆ ಸಮರ್ಪಿಸಿ ಸಂಭ್ರಮಿಸಿದರು.

Venkatesh Iyer: ಸ್ಫೊಟಕ ಶತಕ ಸಿಡಿಸಿದ ವೇಳೆ ವೆಂಕಟೇಶ್ ಅಯ್ಯರ್ ಸಂಭ್ರಮಿಸಿದ ಸ್ಟೈಲ್ ನೋಡಿ: ವೈರಲ್ ವಿಡಿಯೋ
Venkatesh Iyer Rajinikanth celebration
Follow us
TV9 Web
| Updated By: Vinay Bhat

Updated on: Dec 13, 2021 | 9:48 AM

ಸದ್ಯ ಸಾಗುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಮಧ್ಯಪ್ರದೇಶದ ಆಲ್ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ (India vs South Africa) ಆಯ್ಕೆ ಆಗುವುದರಲ್ಲಿದ್ದಾರೆ. ಕಳೆದ ಐಪಿಎಲ್‌ನಲ್ಲಿ (IPL) ಕೆಕೆಆರ್ (KKR) ಪರ ಮಿಂಚಿದ್ದ ವೆಂಕಟೇಶ್ ಅಯ್ಯರ್ ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿ 2ನೇ ಶತಕ ಸಿಡಿಸಿ ಗಮನಸೆಳೆದಿದ್ದಾರೆ. ಈ ಮೂಲಕ ಬಿಸಿಸಿಐ (BCCI) ಆಯ್ಕೆ ಸಮಿತಿಯ ಕದ ತಟ್ಟಿದ್ದಾರೆ. ಉತ್ತರ ಪ್ರದೇಶ ಮತ್ತು ಚಂಢೀಗಢ ನಡುವಿನ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಕೇವಲ 113 ಎಸೆತಗಳಲ್ಲಿ 8 ಬೌಂಡರಿ ಮತ್ತು ಬರೋಬ್ಬರಿ 10 ಸಿಕ್ಸ್ ಸಿಡಿಸಿ 151 ರನ್ ಬಾರಿಸಿ ಗೆಲುವಿನ ರೂವಾರಿಯಾದರು. ಜತೆಗೆ ಈ ಶತಕವನ್ನು ಮೆಗಾ ಸೂಪರ್‌ಸ್ಟಾರ್ ರಜನಿಕಾಂತ್ (Rajanikanth Birthday) ಶೈಲಿಯಲ್ಲಿ ಸಂಭ್ರಮಿಸಿರುವುದು ವಿಶೇಷವಾಗಿದೆ. ಈ ಮೂಲಕ ರಜನಿಕಾಂತ್‌ಗೆ 71ನೇ ಜನ್ಮದಿನದ ಶುಭಾಶಯವನ್ನು ವಿಶೇಷವಾಗಿ ಸಲ್ಲಿಸಿದ್ದಾರೆ.

ಹೌದು, ಅಯ್ಯರ್ ಶತಕ ಸಿಡಿಸುತ್ತಿದ್ದಂತೆ ಡ್ರೆಸ್ಸಿಂಗ್ ರೂಮ್ ಕಡೆ ಕೈ ತೋರಿಸಿ ರಜನಿಕಾಂತ್ ಸ್ಟೈಲ್‍ನಲ್ಲಿ ಕೂಲಿಂಗ್ ಗ್ಲಾಸ್ ಹಾಕುವಂತೆ ಕೈ ಸನ್ನೆ ಮಾಡಿ ರಜನಿಕಾಂತ್‍ಗೆ ಹುಟ್ಟುಹಬ್ಬದ ಗಿಫ್ಟ್ ಎಂಬಂತೆ ಶತಕವನ್ನು ಅವರಿಗೆ ಸಮರ್ಪಿಸಿ ಸಂಭ್ರಮಿಸಿದರು. ನಿನ್ನೆ ರಜನಿಕಾಂತ್ 71ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಇವರಿಗೆ ಗೌರವ ಕೊಡುವ ನಿಟ್ಟಿನಲ್ಲಿ ಅಯ್ಯರ್ ಶತಕ ಸಿಡಿಸಿದ ಬಳಿಕ ಅವರ ಆ್ಯಕ್ಷನ್ ಒಂದನ್ನು ಮೈದಾನದಲ್ಲಿ ಮಾಡುವ ಮೂಲಕ ಗಮನಸೆಳೆದರು. ಇದೀಗ ಅಯ್ಯರ್ ಈ ರೀತಿ ಸಂಭ್ರಮಿಸಿದ ವಿಡಿಯೋ ವೈರಲ್ ಆಗುತ್ತಿದೆ.

ಚಂಡೀಗಢ ವಿರುದ್ಧ 113 ಎಸೆತಗಳಲ್ಲಿ 8 ಬೌಂಡರಿ, 10 ಸಿಕ್ಸರ್ ಸಹಿತ 151 ರನ್ ಸಿಡಿಸಿದ ವೆಂಕಟೇಶ್, ಮಧ್ಯಪ್ರದೇಶ ತಂಡ 9 ವಿಕೆಟ್‌ಗೆ 331 ರನ್ ಪೇರಿಸಲು ನೆರವಾದರು. 4 ದಿನಗಳ ಹಿಂದಷ್ಟೇ ಅವರು ಕೇರಳ ವಿರುದ್ಧ 84 ಎಸೆತಗಳಲ್ಲಿ 112 ರನ್ ಸಿಡಿಸಿ ಮಿಂಚಿದ್ದರು. 26 ವರ್ಷದ ವೆಂಕಟೇಶ್ ಟೂರ್ನಿಯಲ್ಲಿ ಇದುವರೆಗೆ ಆಡಿದ 4 ಪಂದ್ಯಗಳಲ್ಲಿ 2 ಶತಕ, 1 ಅರ್ಧಶತಕ ಸಹಿತ 348 ರನ್ ಮತ್ತು 8 ವಿಕೆಟ್ ಗಳಿಸಿದ್ದಾರೆ.

ಇತ್ತೀಚೆಗಷ್ಟೇ ಭಾರತ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ್ದ ಆಲ್ರೌಂಡರ್‌ ವೆಂಕಟೇಶ್‌ ಅಯ್ಯರ್‌ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ವಿಜಯ್‌ ಹಜಾರೆ ಟೂರ್ನಿಯಲ್ಲಿ ಮಧ್ಯಪ್ರದೇಶ ಪರ ಆಡುತ್ತಿರುವ ವೆಂಕಟೇಶ್‌ ಬ್ಯಾಟಿಂಗ್ ಜೊತೆಗೆ ಬೌಲಿಂಗ್​ನಲ್ಲಿ ಮಿಂಚುತ್ತಿದ್ದಾರೆ. ಈ ಹಿಂದಿನ ಆವೃತ್ತಿಗಳಲ್ಲಿ ಮಧ್ಯಪ್ರದೇಶ ಪರ ಆರಂಭಿಕನಾಗಿ ಆಡಿದ್ದ ವೆಂಕಟೇಶ್‌, ಇದೀಗ ಫಿನಿಶರ್ ಪಾತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಮಹಾರಾಷ್ಟ್ರದ ಯುವ ಪ್ರತಿಭಾನ್ವಿತ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಕೂಡಾ ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್‌ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ವಿಜಯ್ ಹಜಾರೆ ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ.

Virat Kohli: ವಿದೇಶಿ ತಂಡಕ್ಕೆ ನಡುಕ ಹುಟ್ಟಿಸಿದೆ ವಿರಾಟ್ ಕೊಹ್ಲಿ ಬಗ್ಗೆ ಗೌತಮ್ ಗಂಭೀರ್ ನೀಡಿದ ಆ ಒಂದು ಹೇಳಿಕೆ

IPL 2022 Auction: ಬಹುನಿರೀಕ್ಷಿತ ಐಪಿಎಲ್ 2022 ಮೆಗಾ ಆಕ್ಷನ್ ಬಗ್ಗೆ ಹೊರಬಿತ್ತು ನೂತನ ಮಾಹಿತಿ

(Venkatesh Iyer tribute to Rajinikanth birthday by pulling off his iconic salute after century in Vijay Hazare Trophy)

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ