Venkatesh Prasad Birthday: 52ನೇ ವಸಂತಕ್ಕೆ ಕಾಲಿಟ್ಟ ವೆಂಕಟೇಶ್ ಪ್ರಸಾದ್‌: ಕ್ರಿಕೆಟ್ ಜಗತ್ತು ಮರೆಯದ ಆ ಸ್ಮರಣೀಯ ಕ್ಷಣ ಇಲ್ಲಿದೆ

1996ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ತಂಡಗಳು ಬೆಂಗಳೂರಿನಲ್ಲಿ ಮುಖಾಮುಖಿಯಾಗಿದ್ದವು. ಈ ವೇಳೆ ಅಮೀರ್ ಸೋಹೆಲ್ ವಿಕೆಟ್ ಪಡೆದ ಸ್ಮರಣೀಯ ಕ್ಷಣವನ್ನು ಎಂದಿಗೂ ಮರೆಯುವಂತಿಲ್ಲ.

Venkatesh Prasad Birthday: 52ನೇ ವಸಂತಕ್ಕೆ ಕಾಲಿಟ್ಟ ವೆಂಕಟೇಶ್ ಪ್ರಸಾದ್‌: ಕ್ರಿಕೆಟ್ ಜಗತ್ತು ಮರೆಯದ ಆ ಸ್ಮರಣೀಯ ಕ್ಷಣ ಇಲ್ಲಿದೆ
Venkatesh Prasad
Follow us
TV9 Web
| Updated By: Vinay Bhat

Updated on: Aug 05, 2021 | 10:46 AM

ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ, ಹೆಮ್ಮೆಯ ಕನ್ನಡಿಗ ವೆಂಕಟೇಶ್ ಪ್ರಸಾದ್‌ (Venkatesh Prasad) ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 52ನೇ ವಸಂತಕ್ಕೆ ಕಾಲಿಟ್ಟಿರುವ ವೆಂಕಟೇಶ್ ಪ್ರಸಾದ್‌ಗೆ ಕ್ರಿಕೆಟ್ ಜಗತ್ತಿನಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. 1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಿ, ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ಉರುಳಿಸಿದ್ದಾರೆ.

ಕರ್ನಾಟಕದ ಮತ್ತೋರ್ವ ವೇಗಿ ಜಾವಗಲ್​ ಶ್ರೀನಾಥ್​, ಸ್ಪಿನ್ನರ್​ ಅನಿಲ್​ ಕುಂಬ್ಳೆ ಹಾಗೂ ರಾಹುಲ್​ ದ್ರಾವಿಡ್​, 90ರ ದಶಕದಲ್ಲಿ ರಾಷ್ಟ್ರೀಯ ತಂಡದಲ್ಲಿ ಕಾಯಂ ಸ್ಥಾನ ಪಡೆದಿದ್ದರು. ಬೌಲಿಂಗ್​ನಲ್ಲಿ ವೆಂಕಿ, ಶ್ರೀನಾಥ್​, ಕುಂಬ್ಳೆ ಮಿಂಚುತ್ತಿದ್ದರೆ, ರಾಹುಲ್​ ದ್ರಾವಿಡ್​ ಬ್ಯಾಟಿಂಗ್​ನಲ್ಲಿ ತಂಡಕ್ಕೆ ಆಧಾರವಾಗುತ್ತಿದ್ದರು. ಎದುರಾಳಿ ತಂಡಕ್ಕೆ ಕಡಿವಾಣ ಹಾಕುವುದರಲ್ಲಿ ನಿಪುಣರಾಗಿದ್ದ ವೆಂಕಟೇಶ್​ ಪ್ರಸಾದ್​, ರಾಜ್ಯ ಹಾಗೂ ರಾಷ್ಟ್ರೀಯ ತಂಡದಲ್ಲಿ 90ರ ದಶಕದಲ್ಲಿ ಶ್ರೀನಾಥ್​ ಹಾಗೂ ವೆಂಕಿ ಜೋಡಿ ಭಲೇ ವೇಗದ ಜೋಡಿ ಎನಿಸಿಕೊಂಡಿತ್ತು.

1996ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ತಂಡಗಳು ಬೆಂಗಳೂರಿನಲ್ಲಿ ಮುಖಾಮುಖಿಯಾಗಿದ್ದವು. ಈ ವೇಳೆ ಅಮೀರ್ ಸೋಹೆಲ್ ವಿಕೆಟ್ ಪಡೆದ ಸ್ಮರಣೀಯ ಕ್ಷಣವನ್ನು ಎಂದಿಗೂ ಮರೆಯುವಂತಿಲ್ಲ. ಈ ದೃಶ್ಯ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ ಅಚ್ಚಳಿಯದೇ ಉಳಿದಿದೆ.

ಈ ವಿಶ್ವಕಪ್ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಿತ್ತು. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಕಣ್ತುಂಬಿಕೊಳ್ಳಲು ಇಡೀ ಕ್ರಿಕೆಟ್ ಅಭಿಮಾನಿಗಳ ದಂಡೇ ತುದಿಗಾಲಿನಲ್ಲಿ ನಿಂತಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ ನವಜೋತ್ ಸಿಂಗ್ ಸಿಧು[93] ಆಕರ್ಷಕ  ಬ್ಯಾಟಿಂಗ್ ನೆರವಿನಿಂದ 287 ರನ್ ಬಾರಿಸಿತ್ತು.

ಸವಾಲಿನ ಗುರಿ ಬೆನ್ನತ್ತಿದ ಪಾಕಿಸ್ತಾನಕ್ಕೆ ನಾಯಕ ಅಮಿರ್ ಸೋಹೆಲ್-ಸಯೀದ್ ಅನ್ವರ್ ಜೋಡಿ ಉತ್ತಮ ಆರಂಭವನ್ನೇ ಒದಗಿಸಿತು. ವೆಂಕಟೇಶ್ ಪ್ರಸಾದ್ ಹಾಕಿದ 15ನೇ ಓವರ್‌ನ 5ನೇ ಎಸೆತದಲ್ಲಿ ಅಮಿರ್ ಸೋಹೆಲ್ ಮುನ್ನುಗಿ ಕವರ್ ಪಾಯಿಂಟ್​ನತ್ತ ಬೌಂಡರಿ ಬಾರಿಸಿದರು. ಮಾತ್ರವಲ್ಲದೆ ಪ್ರಸಾದ್​​ಗೆ ಸ್ಲೆಡ್ಜಿಂಗ್ ಮಾಡಿದರು. ಇದಕ್ಕುತ್ತರವಾಗಿ ಮರು ಎಸೆತದಲ್ಲೇ ಪ್ರಸಾದ್ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಪಾಕ್ ನಾಯಕ ಸೋಹಿಲ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಆ ಕ್ಷಣ ಬಹುತೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚಳಿಯದೇ ಉಳಿದಿದೆ.

ಭಾರತ ತಂಡವು ಆ ಪಂದ್ಯವನ್ನು 39 ರನ್​​ಗಳಿಂದ ಜಯಿಸಿತ್ತು. ಅಲ್ಲದೇ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ವಿರುದ್ಧ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತ್ತು.

IND vs ENG: ಆಂಗ್ಲರ ಮೇಲೆ ಹಿಡಿತ ಸಾಧಿಸಿದ ಭಾರತ; ಮಿಂಚಿದ ಬೌಲರ್‌ಗಳು, ರೋಹಿತ್-ರಾಹುಲ್ ಉತ್ತಮ ಆರಂಭ

IND vs ENG: 183 ರನ್​ಗಳಿಗೆ ಮೊದಲ ಇನ್ನಿಂಗ್ಸ್​ ಮುಗಿಸಿದ ಇಂಗ್ಲೆಂಡ್; ಮಿಂಚಿದ ಬುಮ್ರಾ, ಶಮಿ, ಶಾರ್ದೂಲ್

(Venkatesh Prasad Birthday Pakistani batsman used to be afraid of Venkatesh Prasad Aamir Sohail had to be screwed expensive )

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ