Akshay Karnewar: ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಕ್ಷಯ್
T20 Cricket World Record: ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಅಕ್ಷಯ್ ಕರ್ನೆವಾರ್ 4 ಓವರ್‌ಗಳಲ್ಲಿ 5 ರನ್ ನೀಡಿ ಹ್ಯಾಟ್ರಿಕ್ ವಿಕೆಟ್ ಸೇರಿದಂತೆ ಒಟ್ಟು 4 ವಿಕೆಟ್ ಪಡೆದಿದ್ದಾರೆ. ಈ ಮೂಲಕ ದೇಶೀಯ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿರುವ ಅಕ್ಷಯ್ ಕರ್ನೆವಾರ್ (Akshay Karnewar) ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್ ಇತಿಹಾಸದಲ್ಲಿ 4 ಓವರ್‌ಗಳಲ್ಲಿ ಒಂದೇ ಒಂದು ರನ್ ನೀಡದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಅಕ್ಷಯ್ ಪಾತ್ರರಾಗಿದ್ದಾರೆ. ವಿದರ್ಭ ತಂಡದ ಎಡಗೈ ಸ್ಪಿನ್ನರ್ ಅಕ್ಷಯ್ ಮಣಿಪುರ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದರು. 4 ಓವರ್ ಬೌಲಿಂಗ್ ಮಾಡಿದ್ದ ಅಕ್ಷಯ್ ಒಂದೇ ಒಂದು ರನ್ ಬಿಟ್ಟುಕೊಟ್ಟಿಲ್ಲ ಎಂಬುದು ವಿಶೇಷ. ಅಂದರೆ 4 ಓವರ್ಗಳು ಕೂಡ ಮೇಡನ್ ಆಗಿದ್ದವು. ಅಷ್ಟೇ ಅಲ್ಲ 2 ವಿಕೆಟ್ ಕಬಳಿಸಿ ಮಿಂಚಿದ್ದರು.
ಈ ಪಂದ್ಯದಲ್ಲಿ ವಿದರ್ಭ ಮೊದಲು ಬ್ಯಾಟ್ ಮಾಡಿದ ವಿಧರ್ಭ ತಂಡವು ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ತಂಡದ ಪರ ಜಿತೇಶ್ ಶರ್ಮಾ 31 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿ ಅಜೇಯ 71 ರನ್ ಗಳಿಸಿದರು. ಈ ಬೃಹತ್ ಗುರಿ ಬೆನ್ನತ್ತಿದ ಮಣಿಪುರ ತಂಡವು 16.3 ಓವರ್‌ಗಳಲ್ಲಿ ಕೇವಲ 55 ರನ್ ಗಳಿಸಿ ಆಲೌಟಾದರು. ತಂಡದ 9 ಬ್ಯಾಟರುಗಳು ಎರಡಂಕಿ ಕಲೆಹಾಕುವಲ್ಲಿ ವಿಫಲರಾಗಿದ್ದರು. ಈ ಮೂಲಕ ವಿದರ್ಭ ಭರ್ಜರಿ ಜಯ ಸಾಧಿಸಿತು.
ಇನ್ನು ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಅಕ್ಷಯ್ ಕರ್ನೆವಾರ್ 4 ಓವರ್‌ಗಳಲ್ಲಿ 5 ರನ್ ನೀಡಿ ಹ್ಯಾಟ್ರಿಕ್ ವಿಕೆಟ್ ಸೇರಿದಂತೆ ಒಟ್ಟು 4 ವಿಕೆಟ್ ಪಡೆದಿದ್ದಾರೆ. ಈ ಮೂಲಕ ದೇಶೀಯ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ
ಇದನ್ನೂ ಓದಿ: IPL 2022: ಯುವ ನಾಯಕನ ಮೇಲೆ ಕಣ್ಣಿಟ್ಟಿರುವ CSK
(Vidarbha Bowler Akshay Karnewar Scripts World Record)