AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಟೀಮ್ ಇಂಡಿಯಾ ಸೋತರೂ ಚಪ್ಪಾಳೆ ತಟ್ಟಿದ ಡಿಕೆ: ಪಂಚ್ ನೀಡಿದ ಹಿಟ್​ಮ್ಯಾನ್..!

India vs South Africa: ಸೌತ್ ಆಫ್ರಿಕಾ ತಂಡವು ಅಂತಿಮವಾಗಿ 18.3 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು 170 ರನ್​ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು.

VIDEO: ಟೀಮ್ ಇಂಡಿಯಾ ಸೋತರೂ ಚಪ್ಪಾಳೆ ತಟ್ಟಿದ ಡಿಕೆ: ಪಂಚ್ ನೀಡಿದ ಹಿಟ್​ಮ್ಯಾನ್..!
DK - Rohit Sharma
TV9 Web
| Edited By: |

Updated on: Oct 05, 2022 | 1:55 PM

Share

ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 49 ರನ್​ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ರಿಲೀ ರೊಸ್ಸೊ ಅವರ ಭರ್ಜರಿ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 227 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಟೀಮ್ ಇಂಡಿಯಾ ಸ್ಪೋಟಕ ಆರಂಭ ಪಡೆಯುವಲ್ಲಿ ವಿಫಲವಾಗಿತ್ತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ 21 ಎಸೆತಗಳಲ್ಲಿ 46 ರನ್​ ಬಾರಿಸಿ ಅಬ್ಬರಿಸಿದರು. ಆದರೆ ಉತ್ತಮ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದ ಸೌತ್ ಆಫ್ರಿಕಾ ತಂಡವು ಅಂತಿಮವಾಗಿ 18.3 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು 170 ರನ್​ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

ಈ ಸೋಲಿನ ಬಳಿಕ ಟೀಮ್ ಇಂಡಿಯಾದ ಡಗೌಟ್​ನಲ್ಲಿ ದಿನೇಶ್ ಕಾರ್ತಿಕ್ ಚಪ್ಪಾಳೆ ತಟ್ಟುತ್ತಿರುವುದು ಕಂಡು ಬಂತು. ಇದನ್ನು ಗಮನಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಡಿಕೆಗೆ ಬೆನ್ನಿಗೆ ಗುದ್ದಿದ್ದಾರೆ. ಮೇಲ್ನೋಟಕ್ಕೆ ಸರಣಿ ಗೆಲುವಿನ ಖುಷಿಯಲ್ಲಿದ್ದ ದಿನೇಶ್ ಕಾರ್ತಿಕ್ ಸೋಲನ್ನು ಮರೆತು ಚಪ್ಪಾಳೆ ತಟ್ಟುತ್ತಿದ್ದರು. ಆದರೆ ಇತ್ತ ಕೊನೆಯ ಪಂದ್ಯದಲ್ಲಿ ಸೋತಿದ್ದರಿಂದ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್​ಗೆ ನಾವು ಸೋತಿದ್ದೇವೆ ಎಂದೇಳುವ ಮೂಲಕ ಪಂಚ್ ನೀಡಿದ್ದಾರೆ.

ಇದೀಗ ಈ ತಮಾಷೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಡಿಕೆ-ಹಿಟ್​ಮ್ಯಾನ್ ಮತ್ತಷ್ಟು ಫನ್​ ಟಾಕ್​ನಲ್ಲಿ ತೊಡಗಿಸಿಕೊಂಡಿರುವ ಮತ್ತೊಂದು ವಿಡಿಯೋವನ್ನು ಸಹ ಬಿಸಿಸಿಐ ಹಂಚಿಕೊಂಡಿದೆ.

ಒಟ್ಟಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಕೊನೆಯ ಟಿ20 ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ 3 ಪಂದ್ಯಗಳ ಮೊದಲೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?