
ಇಂದೋರ್ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆದ ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 49 ರನ್ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ರಿಲೀ ರೊಸ್ಸೊ ಅವರ ಭರ್ಜರಿ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 227 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಟೀಮ್ ಇಂಡಿಯಾ ಸ್ಪೋಟಕ ಆರಂಭ ಪಡೆಯುವಲ್ಲಿ ವಿಫಲವಾಗಿತ್ತು.
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ 21 ಎಸೆತಗಳಲ್ಲಿ 46 ರನ್ ಬಾರಿಸಿ ಅಬ್ಬರಿಸಿದರು. ಆದರೆ ಉತ್ತಮ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದ ಸೌತ್ ಆಫ್ರಿಕಾ ತಂಡವು ಅಂತಿಮವಾಗಿ 18.3 ಓವರ್ಗಳಲ್ಲಿ ಟೀಮ್ ಇಂಡಿಯಾವನ್ನು 170 ರನ್ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತು.
ಈ ಸೋಲಿನ ಬಳಿಕ ಟೀಮ್ ಇಂಡಿಯಾದ ಡಗೌಟ್ನಲ್ಲಿ ದಿನೇಶ್ ಕಾರ್ತಿಕ್ ಚಪ್ಪಾಳೆ ತಟ್ಟುತ್ತಿರುವುದು ಕಂಡು ಬಂತು. ಇದನ್ನು ಗಮನಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಡಿಕೆಗೆ ಬೆನ್ನಿಗೆ ಗುದ್ದಿದ್ದಾರೆ. ಮೇಲ್ನೋಟಕ್ಕೆ ಸರಣಿ ಗೆಲುವಿನ ಖುಷಿಯಲ್ಲಿದ್ದ ದಿನೇಶ್ ಕಾರ್ತಿಕ್ ಸೋಲನ್ನು ಮರೆತು ಚಪ್ಪಾಳೆ ತಟ್ಟುತ್ತಿದ್ದರು. ಆದರೆ ಇತ್ತ ಕೊನೆಯ ಪಂದ್ಯದಲ್ಲಿ ಸೋತಿದ್ದರಿಂದ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್ಗೆ ನಾವು ಸೋತಿದ್ದೇವೆ ಎಂದೇಳುವ ಮೂಲಕ ಪಂಚ್ ನೀಡಿದ್ದಾರೆ.
Bro ??
.@ImRo45 .@DineshKarthik pic.twitter.com/y6W1egfXjx— Manideep ? (@Manideep_Vanga) October 4, 2022
ಇದೀಗ ಈ ತಮಾಷೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಡಿಕೆ-ಹಿಟ್ಮ್ಯಾನ್ ಮತ್ತಷ್ಟು ಫನ್ ಟಾಕ್ನಲ್ಲಿ ತೊಡಗಿಸಿಕೊಂಡಿರುವ ಮತ್ತೊಂದು ವಿಡಿಯೋವನ್ನು ಸಹ ಬಿಸಿಸಿಐ ಹಂಚಿಕೊಂಡಿದೆ.
A dash of laughter does not hurt after the series win! ☺️#TeamIndia captain @ImRo45 & @DineshKarthik share a lighter moment. ?#INDvSA pic.twitter.com/8WcTjcpOSF
— BCCI (@BCCI) October 4, 2022
ಒಟ್ಟಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಕೊನೆಯ ಟಿ20 ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ 3 ಪಂದ್ಯಗಳ ಮೊದಲೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿ 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ.