VIDEO: ಅಯೋಧ್ಯೆಯಲ್ಲಿ ಡುಪ್ಲಿಕೇಟ್ ವಿರಾಟ್ ಕೊಹ್ಲಿ: ಮುಗಿಬಿದ್ದ ಫ್ಯಾನ್ಸ್..!
Virat Kohli: ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಕ್ಕೆ ತಂಡದಿಂದ ಹಿಂದೆ ಸರಿದಿರುವ ಕೊಹ್ಲಿ ರಾಜ್ಕೋಟ್ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಹೋದಲ್ಲಿ, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುವುದು ಗೊತ್ತೇ ಇದೆ. ಆದರೆ ಈ ಬಾರಿ ಅವರನ್ನೇ ಹೋಲವು ವ್ಯಕ್ತಿಯೊಬ್ಬರು ಫ್ಯಾನ್ಸ್ನ ಪ್ರೀತಿಗೆ ಪಾತ್ರರಾಗಿದ್ದಾರೆ. ಸೋಮವಾರ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಭಾಗವಹಿಸುತ್ತಾರೆ ಎನ್ನಲಾಗಿತ್ತು. ಆದರೆ ವೈಯುಕ್ತಿಕ ಕಾರಣಗಳಿಂದಾಗಿ ಅವರು ಅಯೋಧ್ಯೆಗೆ ತೆರಳಿರಲಿಲ್ಲ.
ಇದಾಗ್ಯೂ ವಿರಾಟ್ ಕೊಹ್ಲಿಯನ್ನು ಹೋಲುವ ವ್ಯಕ್ತಿಯೊಬ್ಬರು ಅಯೋಧ್ಯೆಯಲ್ಲಿ ಕಾಣಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಜೆರ್ಸಿ ತೊಟ್ಟ ಆಗಮಿಸಿದ್ದ ವ್ಯಕ್ತಿಯನ್ನು ಅಭಿಮಾನಿಗಳು ಹೌಹಾರಿದ್ದಾರೆ. ಖುದ್ದು ಕೊಹ್ಲಿಯೇ ಬಂದಿದ್ದಾರೆ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಲು ಮುಗಿ ಬಿದ್ದಿದ್ದಾರೆ.
ಇತ್ತ ಅಭಿಮಾನಿಗಳ ಕ್ರೇಝ್ನಿಂದ ಕಂಗೆಟ್ಟ ಡುಪ್ಲಿಕೇಟ್ ವಿರಾಟ್ ಕೊಹ್ಲಿ ಕಾಲ್ಕಿಳಲು ಯತ್ನಿಸಿದರೂ ಕಿಂಗ್ ಕೊಹ್ಲಿ ಫ್ಯಾನ್ಸ್ ಮಾತ್ರ ಅವರನ್ನು ಹಿಂಬಾಲಿಸುತ್ತಿದ್ದರು. ಇದೀಗ ಡುಪ್ಲಿಕೇಟ್ ವಿರಾಟ್ ಕೊಹ್ಲಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವಿರಾಟ್ ಕೊಹ್ಲಿ ಅಲಭ್ಯ:
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕಿಂಗ್ ಕೊಹ್ಲಿ 2 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ವಿರಾಟ್ ಕೊಹ್ಲಿ ವೈಯುಕ್ತಿಕ ಕಾರಣಕ್ಕೆ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಆ ಕಾರಣಗಳು ಕುರಿತಾಗಿ ಯಾವುದೇ ಊಹಾಪೋಹಗಳನ್ನು ಸೃಷ್ಟಿಸಿಕೊಳ್ಳಬೇಡಿ. ಭಾರತವನ್ನು ಪ್ರತಿನಿಧಿಸುವುದು ಅವರ ಪ್ರಮುಖ ಆದ್ಯತೆ ಎಂದು ಅವರೇ ತಿಳಿಸಿದ್ದಾರೆ. ಇದೀಗ ಅನಿವಾರ್ಯ ಕಾರಣಗಳಿಂದಾಗಿ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಅವರ ವೈಯುಕ್ತಿಕ ವಿಚಾರವನ್ನು ಗೌರವಿಸುವಂತೆ ಬಿಸಿಸಿಐ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಕಿಂಗ್ ಕೊಹ್ಲಿ ಕಂಬ್ಯಾಕ್ ಯಾವಾಗ?
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯು ಗುರುವಾರದಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ಅಂದರೆ ಮೂರನೇ ಟೆಸ್ಟ್ ಪಂದ್ಯದ ವೇಳೆಗೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್ಕೋಟ್ನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಅವರು ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.
ಭಾರತ ಟೆಸ್ಟ್ ತಂಡ ಪ್ರಕಟ:
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಇದೀಗ ವಿರಾಟ್ ಕೊಹ್ಲಿ ಹೊರಗುಳಿದಿರುವ ಕಾರಣ ಅವರ ಸ್ಥಾನಕ್ಕೆ ಬದಲಿ ಆಟಗಾರನನ್ನು ಆಯ್ಕೆ ಮಾಡಬೇಕಿದೆ.
ಇದನ್ನೂ ಓದಿ: Virat Kohli: ಅತ್ಯಂತ ಕಳಪೆ ದಾಖಲೆ ಬರೆದ ಕಿಂಗ್ ಕೊಹ್ಲಿ
ಭಾರತ ಟೆಸ್ಟ್ ತಂಡ (ಮೊದಲೆರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
Published On - 9:12 am, Tue, 23 January 24