AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಕ್ಕಾ ಸೇದಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಕ್ಯಾಪ್ಟನ್ ಕೂಲ್ ಧೋನಿ..! ವಿಡಿಯೋ ನೋಡಿ

MS Dhoni: ಇತ್ತೀಚೆಗಷ್ಟೇ ತಮ್ಮ 42ನೇ ಹುಟ್ಟುಹಬ್ಬವನ್ನು ತಮ್ಮ ಸಾಕುಪ್ರಾಣಿಗಳೊಂದಿಗೆ ಆಚರಿಸಿಕೊಂಡಿದ್ದ ಧೋನಿಯ ಸರಳತೆಗೆ ಇಡೀ ಕ್ರೀಡಾ ಲೋಕವೇ ಸಲಾಂ ಹೊಡೆದಿತ್ತು. ಆದರೀಗ ಸೋಶಿಯಲ್ ಮೀಡಿಯಾದಲ್ಲಿ ಧೋನಿಯ ವಿಡಿಯೋವೊಂದು ವೈರಲ್ ಆಗುತ್ತಿದ್ದು, ತಮ್ಮ ನೆಚ್ಚಿನ ಆಟಗಾರ ಮಾಡಿರುವ ಕೆಲಸವನ್ನು ಅಭಿಮಾನಿಗಳಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಹುಕ್ಕಾ ಸೇದಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಕ್ಯಾಪ್ಟನ್ ಕೂಲ್ ಧೋನಿ..! ವಿಡಿಯೋ ನೋಡಿ
ಎಂಎಸ್ ಧೋನಿ
ಪೃಥ್ವಿಶಂಕರ
| Edited By: |

Updated on:Feb 14, 2024 | 3:08 PM

Share

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ತಮ್ಮ ಸರಳ ವ್ಯಕ್ತಿತ್ವದಿಂದಲೇ ಇಡೀ ಕ್ರಿಕೆಟ್ ಲೋಕದ ಗಮನ ಸೆಳೆದವರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ಟೀಂ ಇಂಡಿಯಾವನ್ನು (Team India) ಯಶಸ್ಸಿನ ಉತ್ತುಂಗಕ್ಕೆ ಕೊಂಡೊಯ್ದ ಕ್ಯಾಪ್ಟನ್ ಕೂಲ್​ಗೆ ಕ್ರಿಕೆಟ್​ ಲೋಕದಲ್ಲಿ ಬೇರೆಯದ್ದೇ ಸ್ಥಾನಮಾನಗಳಿವೆ. ಇತ್ತೀಚೆಗಷ್ಟೇ ತಮ್ಮ 42ನೇ ಹುಟ್ಟುಹಬ್ಬವನ್ನು ತಮ್ಮ ಸಾಕುಪ್ರಾಣಿಗಳೊಂದಿಗೆ ಆಚರಿಸಿಕೊಂಡಿದ್ದ ಧೋನಿಯ ಸರಳತೆಗೆ ಇಡೀ ಕ್ರೀಡಾ ಲೋಕವೇ ಸಲಾಂ ಹೊಡೆದಿತ್ತು. ಆದರೀಗ ಸೋಶಿಯಲ್ ಮೀಡಿಯಾದಲ್ಲಿ ಧೋನಿಯ ವಿಡಿಯೋವೊಂದು ವೈರಲ್ ಆಗುತ್ತಿದ್ದು, ತಮ್ಮ ನೆಚ್ಚಿನ ಆಟಗಾರ ಮಾಡಿರುವ ಕೆಲಸವನ್ನು ಅಭಿಮಾನಿಗಳಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಅಭಿಮಾನಿಗಳಿಗೆ ಬಿಗ್ ಶಾಕ್

ವಾಸ್ತವವಾಗಿ ಆಗಿರುವುದೆನೆಂದರೆ, ಎಂಎಸ್ ಧೋನಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಅದರಲ್ಲಿ ಧೋನಿ ಹುಕ್ಕಾ ಸೇದುತ್ತಿರುವುದನ್ನು ಕಾಣಬಹುದಾಗಿದೆ. ವೀಡಿಯೊದಲ್ಲಿ ಧೋನಿ ತನ್ನ ಸೊಗಸಾದ ಉದ್ದನೆಯ ಕೂದಲಿನೊಂದಿಗೆ ಫಾರ್ಮಲ್ ಸೂಟ್ ಧರಿಸಿರುವುದನ್ನು ನಾವು ಕಾಣಬಹುದಾಗಿದೆ. ಅವರ ಜೊತೆಯಲ್ಲಿ ಇತರರು ಇರುವುದನ್ನು ಕಾಣಬಹುದಾಗಿದೆ. ಗೆಳೆಯರ ಗುಂಪಿನಲ್ಲಿರುವ ಧೋನಿ, ಹುಕ್ಕಾ ಸೇದಿ ಹೊಗೆಬಿಡುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ.

ಈ ಹಿಂದೆಯೇ ಈ ಬಗ್ಗೆ ಸುದ್ದಿ ಹರಿದಾಡಿತ್ತು

ಎಂಎಸ್ ಧೋನಿ ಯುವ ಆಟಗಾರರೊಂದಿಗೆ ಬೆರೆಯಲು ಹುಕ್ಕಾ ಸೆಷನ್‌ಗಳನ್ನು ಮಾಡುತ್ತಿದ್ದರು ಎಂದು ಆಸ್ಟ್ರೇಲಿಯಾದ ಮಾಜಿ ಆಟಗಾರ ಜಾರ್ಜ್ ಬೈಲಿ ಈ ಹಿಂದೆಯೇ ಹೇಳಿಕೊಂಡಿದ್ದರು. ಬೈಲಿ ಅವರು 2009 ಮತ್ತು 2012 ರ ನಡುವೆ ಸಿಎಸ್​ಕೆ ತಂಡದ ಭಾಗವಾಗಿದ್ದರು. ಅಲ್ಲದೆ 2016 ರ ಐಪಿಎಲ್​ನಲ್ಲಿ ಧೋನಿ ನಾಯಕತ್ವದ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡದಲ್ಲೂ ಬೈಲಿ ಆಡಿದ್ದರು.

ಆ ವೇಳೆ ಸ್ವತಃ ಬೈಲಿ ಅವರೇ ಧೋನಿ ಹುಕ್ಕಾ ಸೇದುವ ಬಗ್ಗೆ ಮಾಹಿತಿ ನೀಡಿದ್ದರು. ಇದೀಗ ಧೋನಿ ಹುಕ್ಕಾ ಸೇದಿರುವ ಹೊಸ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ತಮ್ಮ ನೆಚ್ಚಿನ ಆಟಗಾರರನ್ನು ಈ ರೀತಿಯಾಗಿ ನೋಡಿರುವ ಅಭಿಮಾನಿಗಳು ಪರ- ವಿರೋಧದ ಅಭಿಪ್ರಾಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹೊರಹಾಕುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Sun, 7 January 24

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು