AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ನಾನೇ ಬೇರೆ ನನ್ನ ಸ್ಟೈಲೇ ಬೇರೆ…ಸುಯ್ಯಂತ ಬಂದ ವಿರಾಟ್ ಕೊಹ್ಲಿ

Virat Kohli Viral Video: ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯ ಔಟಾಗಿ ಕಳಪೆ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

VIDEO: ನಾನೇ ಬೇರೆ ನನ್ನ ಸ್ಟೈಲೇ ಬೇರೆ...ಸುಯ್ಯಂತ ಬಂದ ವಿರಾಟ್ ಕೊಹ್ಲಿ
Team India-Virat Kohli
TV9 Web
| Edited By: |

Updated on:Jan 18, 2024 | 1:10 PM

Share

ಕ್ರಿಕೆಟ್ ಅಂಗಳದ ಸೆನ್ಸೇಷನ್ ವಿರಾಟ್ ಕೊಹ್ಲಿ (Virat Kohli) ನಿಂತರೂ..ಕೂತರೂ ಟ್ರೆಂಡ್ ಸೃಷ್ಟಿಯಾಗುತ್ತೆ. ಈ ಟ್ರೆಂಡಿಂಗ್​ಗಳಿಗೆ ಕಿಚ್ಚು ಹಚ್ಚುವಂತಹ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಬಾರಿ ವಿರಾಟ್ ಕೊಹ್ಲಿ ವೈರಲ್ ಆಗಲು ಮುಖ್ಯ ಕಾರಣ ಸುಯ್ಯಂತ ಎಂಟ್ರಿ ಕೊಟ್ಟಿರುವುದು. ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್​ನಲ್ಲಿ ವಿಫಲರಾಗಿದ್ದರು. ಆದರೆ ಫೀಲ್ಡಿಂಗ್​ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಅದರಲ್ಲೂ ಅಫ್ಘಾನಿಸ್ತಾನ್ ಇನಿಂಗ್ಸ್​ನ 17ನೇ ಓವರ್​ನಲ್ಲಿ ಬೌಂಡರಿ ಲೈನ್​ನಲ್ಲಿ ಕಿಂಗ್ ಕೊಹ್ಲಿ ಸಿಕ್ಸ್​ವೊಂದನ್ನು ತಡೆದು 5 ರನ್​ಗಳನ್ನು ಉಳಿಸಿದ್ದರು. ಈ ಅಮೂಲ್ಯ ಐದು ರನ್​ಗಳ ನೆರವಿನಿಂದಾಗಿ ಈ ಪಂದ್ಯವು ಟೈನಲ್ಲಿ ಅಂತ್ಯ ಕಂಡಿತ್ತು ಎಂದರೆ ತಪ್ಪಾಗಲಾರದು.

ಇದಾದ ಬಳಿಕ ನಡೆದ ಮೊದಲ ಸೂಪರ್​ನಲ್ಲಿ ಅಫ್ಘಾನಿಸ್ತಾನ್ ನೀಡಿದ 16 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕಲೆಹಾಕಿದ್ದು 16 ರನ್​ಗಳು. ಈ ಟೈನೊಂದಿಗೆ ಪಂದ್ಯವು 2ನೇ ಸೂಪರ್​ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಭಾರತ ತಂಡವು 11 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಕಿಂಗ್ ಕೊಹ್ಲಿಯ ಎಂಟ್ರಿ:

ಈ ಗೆಲುವಿನ ಬಳಿಕ ನಡೆದ ಫೋಟೋಶೂಟ್​ಗೆ ಎಲ್ಲಾ ಆಟಗಾರರು ಪೋಸ್ ನೀಡಲು ಸಜ್ಜಾಗಿ ನಿಂತಿದ್ದರೆ ಅತ್ತ ವಿರಾಟ್ ಕೊಹ್ಲಿ ಆಗಮಿಸಿರಲಿಲ್ಲ. ಮತ್ತೊಂದೆಡೆ ರೋಹಿತ್ ಶರ್ಮಾ ಟ್ರೋಫಿಯನ್ನು ಪಡೆದು ವಿಕ್ಟರಿ ಪೋಸ್ ನೀಡಲು ಬರುತ್ತಿದ್ದರು.

ಈ ವೇಳೆ ಅತ್ತ ಕಡೆಯಿಂದ ಓಡಿ ಬಂದ ವಿರಾಟ್ ಕೊಹ್ಲಿ ಸುಯ್ಯಂತ ಜಾರಿ ಟೀಮ್ ಇಂಡಿಯಾ ಬಳಗವನ್ನು ಸೇರಿಕೊಂಡರು. ಇದೀಗ ಕಿಂಗ್ ಕೊಹ್ಲಿ ಸುಯ್ಯಂತ ಎಂಟ್ರಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ:

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಇದರೊಂದಿಗೆ ಭಾರತದ ಪರ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಲೆಯೊಂದು ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಭಾರತದ ಪರ ಅತೀ ಹೆಚ್ಚು ಬಾರಿ ಡಕ್​ ಔಟ್ ಆದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಸಚಿನ್ ನಿರ್ಮಿಸಿದ್ದರು.

ಇದನ್ನೂ ಓದಿ: Rohit Sharma: 5 ಭರ್ಜರಿ ರೆಕಾರ್ಡ್ಸ್​: ಹಿಟ್​ಮ್ಯಾನ್ ಅಬ್ಬರಕ್ಕೆ ಹಳೆಯ ದಾಖಲೆಗಳು ಧೂಳೀಪಟ

ಇದೀಗ ಟೀಮ್ ಇಂಡಿಯಾ ಪರ 580 ಇನಿಂಗ್ಸ್​ಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟು 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಭಾರತದ ಪರ  ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

Published On - 1:09 pm, Thu, 18 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ