Vijay Hazare Trophy 2022: ಕಾವೇರಪ್ಪ ಕರಾರುವಾಕ್ ದಾಳಿ: ಸೆಮೀಸ್​ಗೆ ಕರ್ನಾಟಕ

Vijay Hazare Trophy 2022: 236 ರನ್​ಗಳ ಟಾರ್ಗೆಟ್ ಪಡೆದ ಕರ್ನಾಟಕ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ನಾಯಕ ಮಯಾಂಕ್ ಅಗರ್ವಾಲ್ (1) ಸಿದ್ದಾರ್ಥ್​ ಕೌಲ್​ಗೆ ವಿಕೆಟ್ ಒಪ್ಪಿಸಿ ಹೊರನಡೆದರು.

Vijay Hazare Trophy 2022: ಕಾವೇರಪ್ಪ ಕರಾರುವಾಕ್ ದಾಳಿ: ಸೆಮೀಸ್​ಗೆ ಕರ್ನಾಟಕ
Vidhwath Kaverappa
Follow us
| Updated By: ಝಾಹಿರ್ ಯೂಸುಫ್

Updated on: Nov 28, 2022 | 8:32 PM

Vijay Hazare Trophy 2022: ವಿಜಯ್ ಹಜಾರೆ ಟೂರ್ನಿಯ ಮೊದಲ ಕ್ವಾರ್ಟರ್​ ಫೈನಲ್​ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಕರ್ನಾಟಕ (Karnataka Team) ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಂಜಾಬ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಮೊದಲ ಓವರ್​ನ ಮೊದಲ ಎಸೆತದಲ್ಲಿ ಪ್ರಭ್​ಸಿಮ್ರಾನ್ ಸಿಂಗ್ ವಿಕೆಟ್​ ಪಡೆಯುವ ಮೂಲಕ ವಿಧ್ವತ್ ಕಾವೇರಪ್ಪ ಕರ್ನಾಟಕಕ್ಕೆ ಮೊದಲ ಜಯ ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ಅನ್ಮೋಲ್​ಪ್ರೀತ್ ಸಿಂಗ್ (4) ಹಾಗೂ ನಾಯಕ ಮಂದೀಪ್ ಸಿಂಗ್ (6) ಅವರನ್ನು ವಿ. ಕೌಶಿಕ್ ಹಾಗೂ ರೋನಿತ್ ಮೋರೆ ಪೆವಿಲಿಯನ್​ಗೆ ಕಳುಹಿಸಿದರು. ಇತ್ತ ಆರಂಭದಲ್ಲೇ 3 ವಿಕೆಟ್ ಕಳೆದುಕೊಂಡರೂ ಮತ್ತೋರ್ವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕ್ರೀಸ್ ಕಚ್ಚಿ ನಿಂತಿದ್ದರು.

ಕರ್ನಾಟಕ ಬೌಲರ್​ಗಳ ವಿರುದ್ಧ ಅತ್ಯುತ್ತಮ ಇನಿಂಗ್ಸ್​ ಆಡಿದ ಎಡಗೈ ದಾಂಡಿಗ ಅಭಿಷೇಕ್ ಶರ್ಮಾ 123 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ 109 ರನ್ ಬಾರಿಸಿದರು. ಈ ಮೂಲಕ ತಂಡಕ್ಕೆ ಆಸರೆಯಾದರು. ಅಭಿಷೇಕ್ ಶರ್ಮಾ ಬಾರಿಸಿದ ಈ ಆಕರ್ಷಕ ಶತಕದ ನೆರವಿನಿಂದ ಪಂಜಾಬ್ ತಂಡವು 50 ಓವರ್​ಗಳಲ್ಲಿ 235 ರನ್​ಗಳಿಸಿ ಆಲೌಟ್ ಆಯಿತು. ಕರ್ನಾಟಕ ಪರ ವಿಧ್ವತ್ ಕಾವೇರಪ್ಪ 4 ವಿಕೆಟ್ ಕಬಳಿಸಿದರೆ, ರೋನಿತ್ ಮೋರೆ 2 ವಿಕೆಟ್ ಪಡೆದು ಮಿಂಚಿದರು.

236 ರನ್​ಗಳ ಟಾರ್ಗೆಟ್ ಪಡೆದ ಕರ್ನಾಟಕ ತಂಡ ಕೂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ನಾಯಕ ಮಯಾಂಕ್ ಅಗರ್ವಾಲ್ (1) ಸಿದ್ದಾರ್ಥ್​ ಕೌಲ್​ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇದಾಗ್ಯೂ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರವಿಕುಮಾರ್ ಸಮರ್ಥ್ 106 ಎಸೆತಗಳಲ್ಲಿ 71 ರನ್​ ಕಲೆಹಾಕಿ ಸನ್​ವೀರ್ ಸಿಂಗ್ ಎಸೆತದಲ್ಲಿ ಔಟಾದರು.

ಇದನ್ನೂ ಓದಿ
Image
Suryakumar Yadav: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್
Image
BPL 2023: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ಗೆ ಭಾರತೀಯ ಆಟಗಾರ ಎಂಟ್ರಿ..!
Image
IPL 2023: 4 ವರ್ಷಗಳ ಬಳಿಕ ಐಪಿಎಲ್​ನತ್ತ ಜೋ ರೂಟ್..!
Image
ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಇದನ್ನೂ ಓದಿ: Suresh Raina: ಸುರೇಶ್ ರೈನಾ ಹೆಸರಿನಲ್ಲಿರುವ ಈ 3 IPL ದಾಖಲೆಗಳ ಬಗ್ಗೆ ಗೊತ್ತಾ?

ಆ ಬಳಿಕ ನಿಕಿನ್ ಜೋಸ್ (29), ಮನೀಷ್ ಪಾಂಡೆ (35) ಹಾಗೂ ಶ್ರೇಯಸ್ ಗೋಪಾಲ್ (42) ಉಪಯುಕ್ತ ಕಾಣಿಕೆ ನೀಡಿದರು. ಅಂತಿಮ ಹಂತದಲ್ಲಿ ಮನೋಜ್ ಭಂಡಗೆ ಅಜೇಯ 25 ಹಾಗೂ ಕೃಷ್ಣಪ್ಪ ಗೌತಮ್ ಅಜೇಯ 6 ರನ್​ಗಳಿಸುವ ಮೂಲಕ 49.2 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಕರ್ನಾಟಕ ತಂಡವು ಸೆಮಿಫೈನಲ್​​ಗೆ ಪ್ರವೇಶಿಸಿದೆ. 10 ಓವರ್​ಗಳಲ್ಲಿ 40 ರನ್​ ನೀಡಿ 4 ಪ್ರಮುಖ ವಿಕೆಟ್ ಕಬಳಿಸಿದ ವಿಧ್ವತ್ ಕಾವೇರಪ್ಪ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಪಂಜಾಬ್ ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಶರ್ಮಾ , ಪ್ರಭ್​ಸಿಮ್ರಾನ್ ಸಿಂಗ್ , ಅನ್ಮೋಲ್ಪ್ರೀತ್ ಸಿಂಗ್ , ಮಂದೀಪ್ ಸಿಂಗ್ (ನಾಯಕ) , ಅನ್ಮೋಲ್ ಮಲ್ಹೋತ್ರಾ ( ವಿಕೆಟ್ ಕೀಪರ್ ) , ಹರ್ಪ್ರೀತ್ ಬ್ರಾರ್ , ಸನ್ವಿರ್ ಸಿಂಗ್ , ರಮಣದೀಪ್ ಸಿಂಗ್ , ಮಯಾಂಕ್ ಮಾರ್ಕಾಂಡೆ , ಬಲ್ತೇಜ್ ಸಿಂಗ್ , ಸಿದ್ದಾರ್ಥ್ ಕೌಲ್.

ಇದನ್ನೂ ಓದಿ: Suryakumar Yadav: ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ..!

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಶ್ ಪಾಂಡೆ , ಶ್ರೇಯಸ್ ಗೋಪಾಲ್ , ಶರತ್ ಬಿ ಆರ್ ( ವಿಕೆಟ್ ಕೀಪರ್ ) , ಮನೋಜ್ ಭಂಡಗೆ , ಕೃಷ್ಣಪ್ಪ ಗೌತಮ್ , ರೋನಿತ್ ಮೋರೆ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್

ಸೆಮಿಫೈನಲ್​ಗೆ 4 ತಂಡ ಎಂಟ್ರಿ:

ಬುಧವಾರ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಸೌರಾಷ್ಟ್ರ ತಂಡವನ್ನು ಎದುರಿಸಲಿದೆ. ಹಾಗೆಯೇ 2ನೇ ಸೆಮೀಸ್​ನಲ್ಲಿ ಮಹಾರಾಷ್ಟ್ರ ಹಾಗೂ ಅಸ್ಸಾಂ ತಂಡಗಳು ಮುಖಾಮುಖಿಯಾಗಲಿದೆ. ಫೈನಲ್ ಪಂದ್ಯವು ಡಿಸೆಂಬರ್ 2 ರಂದು ಅಹಮದಾಬಾದ್​ನಲ್ಲಿ ನಡೆಯಲಿದೆ.

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು