AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2022: ಸೌರಾಷ್ಟ್ರಗೆ ಭರ್ಜರಿ ಜಯ: ಕರ್ನಾಟಕ ತಂಡದ ಫೈನಲ್ ಕನಸು ಭಗ್ನ..!

Vijay Hazare Trophy 2022: 172 ರನ್​ಗಳ ಸುಲಭ ಗುರಿ ಪಡೆದ ಸೌರಾಷ್ಟ್ರ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕರ್ನಾಟಕದ ವೇಗಿಗಳು ಯಶಸ್ವಿಯಾಗಿದ್ದರು. ಮೊದಲ ಓವರ್​ನ 2ನೇ ಎಸೆತದಲ್ಲೇ ಹಾರ್ವಿಕ್ ದೇಸಾಯಿಯನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿ ವಿಧ್ವತ್ ಕಾವೇರಪ್ಪ ಕರ್ನಾಟಕಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

Vijay Hazare Trophy 2022: ಸೌರಾಷ್ಟ್ರಗೆ ಭರ್ಜರಿ ಜಯ: ಕರ್ನಾಟಕ ತಂಡದ ಫೈನಲ್ ಕನಸು ಭಗ್ನ..!
Karnataka Team
TV9 Web
| Edited By: |

Updated on:Nov 30, 2022 | 4:01 PM

Share

Vijay Hazare Trophy 2022:  ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕ (Karnataka vs Saurashtra) ತಂಡವು ಸೋಲನುಭವಿಸಿದೆ. ಇದರೊಂದಿಗೆ ಫೈನಲ್ ಪ್ರವೇಶಿಸುವ ಕರ್ನಾಟಕ ತಂಡದ ಕನಸು ಕೂಡ ಕಮರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡದ ನಾಯಕ ಜಯದೇವ್ ಉನಾದ್ಕಟ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಯಾಂಕ್ ಅಗರ್ವಾಲ್ (1) ಉನಾದ್ಕಟ್ ಎಸೆತದಲ್ಲಿ ಕ್ಯಾಚ್ ಬೇಗನೆ ನಿರ್ಗಮಿಸಿದರು. ಇದರ ಬೆನ್ನಲ್ಲೇ ಬಿಆರ್​ ಶರತ್ (3) ಸಹ ವಿಕೆಟ್ ಒಪ್ಪಿಸಿದರು. ನಂತರ ಬಂದ ನಿಕಿನ್ ಜೋಸ್ 12 ರನ್​ಗಳಿಸಿ ಔಟಾದರೆ, ಮನೀಷ್ ಪಾಂಡೆ ಶೂನ್ಯದೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು. ಪರಿಣಾಮ ಕೇವಲ 47 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಕರ್ನಾಟಕ ತಂಡವು ಸಂಕಷ್ಟಕ್ಕೆ ಸಿಲುಕಿತು.

ಇದಾಗ್ಯೂ ಮತ್ತೋರ್ವ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಜವಾಬ್ದಾರಿಯುತ ಇನಿಂಗ್ಸ್ ಆಡಿದರು. ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸಮರ್ಥ್ ಸೌರಾಷ್ಟ್ರ ಬೌಲರ್​ಗಳನ್ನು ಸಮರ್ಥವಾಗಿಯೇ ಎದುರಿಸಿದರು. ಈ ಮೂಲಕ 135 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 88 ರನ್​ಗಳನ್ನು ಕಲೆಹಾಕಿದರು. ಆದರೆ ಉಳಿದ ಆಟಗಾರರಿಂದ ಸಮರ್ಥ್​ಗೆ ಉತ್ತಮ ಸಾಥ್ ಸಿಕ್ಕಿರಲಿಲ್ಲ. ಪರಿಣಾಮ ಕರ್ನಾಟಕ ತಂಡವು 49. 1 ಓವರ್​ಗಳಲ್ಲಿ 171 ರನ್​ಗಳಿಗೆ ಆಲೌಟ್ ಆಯಿತು. ಸೌರಾಷ್ಟ್ರ ಪರ ನಾಯಕ ಜಯದೇವ್ ಉನಾದ್ಕಟ್ 10 ಓವರ್​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು 172 ರನ್​ಗಳ ಸುಲಭ ಗುರಿ ಪಡೆದ ಸೌರಾಷ್ಟ್ರ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕರ್ನಾಟಕದ ವೇಗಿಗಳು ಯಶಸ್ವಿಯಾಗಿದ್ದರು. ಮೊದಲ ಓವರ್​ನ 2ನೇ ಎಸೆತದಲ್ಲೇ ಹಾರ್ವಿಕ್ ದೇಸಾಯಿಯನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿ ವಿಧ್ವತ್ ಕಾವೇರಪ್ಪ ಕರ್ನಾಟಕಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಶೆಲ್ಡನ್ ಜಾಕ್ಸನ್ (0) ವಿಕೆಟ್ ಪಡೆಯುವ ಮೂಲಕ ವಿ ಕೌಶಿಕ್ ಸೌರಾಷ್ಟ್ರಗೆ ಮತ್ತೊಂದು ಆಘಾತ ನೀಡಿದರು.

ಇದನ್ನೂ ಓದಿ
Image
Suryakumar Yadav: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್
Image
BPL 2023: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ಗೆ ಭಾರತೀಯ ಆಟಗಾರ ಎಂಟ್ರಿ..!
Image
IPL 2023: 4 ವರ್ಷಗಳ ಬಳಿಕ ಐಪಿಎಲ್​ನತ್ತ ಜೋ ರೂಟ್..!
Image
ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಇದನ್ನೂ ಓದಿ: Ruturaj Gaikwad: ಒಂದೇ ಓವರ್​ನಲ್ಲಿ ಅತ್ಯಧಿಕ ರನ್: ವಿಶ್ವ ದಾಖಲೆ ಸರಿಗಟ್ಟಿದ ರುತುರಾಜ್ ಗಾಯಕ್ವಾಡ್

ಆದರೆ ಈ ಹಂತದಲ್ಲಿ ಜೊತೆಯಾದ ಜಯ್ ಗೋಯಿಲ್ ಹಾಗೂ ಸಮರ್ಥ್ ವ್ಯಾಸ್ 75 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ವೇಳೆ ಜಯ್ ಗೋಯಿಲ್ (61) ರನ್​ ಕಲೆಹಾಕಿ ಔಟಾದರೆ, ಸಮರ್ಥ್ ವ್ಯಾಸ್ 33 ರನ್​ಗಳ ಉತ್ತಮ ಕಾಣಿಕೆ ನೀಡಿದರು.

ಆ ಬಳಿಕ ಬಂದರೆ ಪ್ರೇರಕ್ ಮಂಕಡ್ ಕೂಡ 35 ರನ್​ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಅಂತಿಮವಾಗಿ 36.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್​ ಕಲೆಹಾಕುವ ಮೂಲಕ ಸೌರಾಷ್ಟ್ರ ತಂಡವು ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಸೌರಾಷ್ಟ್ರ ತಂಡವು ಫೈನಲ್​ಗೆ ಪ್ರವೇಶಿಸಿದೆ.

ಕರ್ನಾಟಕ ಪ್ಲೇಯಿಂಗ್ ಇಲೆವೆನ್: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಮನೀಶ್ ಪಾಂಡೆ , ಶ್ರೇಯಸ್ ಗೋಪಾಲ್ , ಶರತ್ ಬಿ ಆರ್ ( ವಿಕೆಟ್ ಕೀಪರ್ ) , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ರೋನಿತ್ ಮೋರ್ , ವಾಸುಕಿ ಕೌಶಿಕ್ , ವಿಧ್ವತ್ ಕಾವೇರಪ್ಪ.

ಸೌರಾಷ್ಟ್ರ ಪ್ಲೇಯಿಂಗ್ ಇಲೆವೆನ್: ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್) , ಶೆಲ್ಡನ್ ಜಾಕ್ಸನ್ , ಜಯ್ ಗೋಯಿಲ್ , ಸಮರ್ಥ ವ್ಯಾಸ್ , ಅರ್ಪಿತ್ ವಾಸವಾದ , ಪ್ರೇರಕ್ ಮಂಕಡ್ , ಚಿರಾಗ್ ಜಾನಿ , ಧರ್ಮೇಂದ್ರಸಿನ್ಹ್ ಜಡೇಜಾ , ಕುಶಾಂಗ್ ಪಟೇಲ್ , ಜಯದೇವ್ ಉನಾದ್ಕತ್ (ನಾಯಕ) , ಪಾರ್ಥ್ ಭುತ್

Published On - 4:01 pm, Wed, 30 November 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ