Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ

Vijay Hazare Trophy 2023: ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು.

Vijay Hazare Trophy 2023: ಕರ್ನಾಟಕ ಪರ ಅಬ್ಬರಿಸಿದ ಮನೋಜ್-ಮನೋಹರ್: ರಾಜಸ್ಥಾನ್​ಗೆ ಕಠಿಣ ಗುರಿ
Manoj-Abhinav
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 14, 2023 | 6:01 PM

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ವಿಜಯ್​ ಹಜಾರೆ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ರಾಜಸ್ಥಾನ್​ಗೆ ಕಠಿಣ ಗುರಿ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ (Mayank Agarwal) ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಕರ್ನಾಟಕ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು. ಇನ್ನು ಮನೀಶ್ ಪಾಂಡೆ 28 ರನ್​ಗಳ ಕೊಡುಗೆ ನೀಡಿದರು.

ಆದರೆ ಕೊನೆಯ 13 ಓವರ್​ಗಳಿರುವಾಗ ಜೊತೆಗೂಡಿದ ಅಭಿನವ್ ಮನೋವರ್ ಹಾಗೂ ಮನೋಜ್ ಭಾಂಡಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ರಾಜಸ್ಥಾನ್ ಬೌಲರ್​ಗಳ ಬೆಂಡೆತ್ತಿದ ಅಭಿನವ್ ಮನೋಹರ್ 80 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 91 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 63 ರನ್ ಚಚ್ಚಿದರು.

ಮನೋಜ್-ಮನೋಹರ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 282 ರನ್ ಕಲೆಹಾಕಿದೆ. ಈ ಮೂಲಕ ರಾಜಸ್ಥಾನ್ ತಂಡಕ್ಕೆ 283 ರನ್​ಗಳ ಗುರಿ ನೀಡಿದೆ.

ರಾಜಸ್ಥಾನ್ ಪ್ಲೇಯಿಂಗ್ 11: ಅಭಿಜಿತ್ ತೋಮರ್ , ರಾಮ್ ಮೋಹನ್ ಚೌಹಾಣ್ , ಮಹಿಪಾಲ್ ಲೊಮ್ರೋರ್ , ದೀಪಕ್ ಹೂಡಾ (ನಾಯಕ) , ಕರಣ್ ಲಂಬಾ , ಕುನಾಲ್ ಸಿಂಗ್ ರಾಥೋರ್ (ವಿಕೆಟ್ ಕೀಪರ್) , ರಾಹುಲ್ ಚಾಹರ್ , ಅನಿಕೇತ್ ಚೌಧರಿ , ಅರಾಫತ್ ಖಾನ್ , ಖಲೀಲ್ ಅಹ್ಮದ್ , ಕುಕ್ನಾ ಅಜಯ್ ಸಿಂಗ್.

ಇದನ್ನೂ ಓದಿ: IPL 2024 Auction: ಐಪಿಎಲ್ ಹರಾಜಿನಲ್ಲಿ ಕರ್ನಾಟಕದ 14 ಕ್ರಿಕೆಟಿಗರು

ಕರ್ನಾಟಕ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಮನೀಶ್ ಪಾಂಡೆ , ಅಭಿನವ್ ಮನೋಹರ್ , ಮನೋಜ್ ಭಾಂಡಗೆ , ಕೃಷ್ಣಪ್ಪ ಗೌತಮ್ , ಜಗದೀಶ ಸುಚಿತ್ , ವಾಸುಕಿ ಕೌಶಿಕ್ , ವಿಜಯ್ ಕುಮಾರ್ ವೈಶಾಕ್.

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್