AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy: ಕರ್ನಾಟಕ ತಂಡಕ್ಕೆ ಕೆಎಲ್ ರಾಹುಲ್ ಎಂಟ್ರಿ; 16 ಸದಸ್ಯರ ತಂಡ ಪ್ರಕಟ

Karnataka Vijay Hazare Squad 2025-26: ವಿಜಯ್ ಹಜಾರೆ ಟ್ರೋಫಿ 2025-26ಕ್ಕಾಗಿ ಹಾಲಿ ಚಾಂಪಿಯನ್ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಮಯಾಂಕ್ ಅಗರ್ವಾಲ್ ನಾಯಕರಾಗಿದ್ದು, ಕೆಎಲ್ ರಾಹುಲ್, ಕರುಣ್ ನಾಯರ್ ತಂಡಕ್ಕೆ ಬಲ ತುಂಬಿದ್ದಾರೆ. ಬಿಸಿಸಿಐ ನಿಯಮದಂತೆ ರಾಹುಲ್ ದೇಶಿ ಟೂರ್ನಿಯಲ್ಲಿ ಆಡಲಿದ್ದಾರೆ. 5 ಬಾರಿ ಚಾಂಪಿಯನ್ ಆಗಿರುವ ಕರ್ನಾಟಕ, ಈ ಬಾರಿಯೂ ಗೆಲುವಿನ ಫೇವರಿಟ್ ಎನಿಸಿದೆ.

Vijay Hazare Trophy: ಕರ್ನಾಟಕ ತಂಡಕ್ಕೆ ಕೆಎಲ್ ರಾಹುಲ್ ಎಂಟ್ರಿ; 16 ಸದಸ್ಯರ ತಂಡ ಪ್ರಕಟ
Karnataka Team
ಪೃಥ್ವಿಶಂಕರ
|

Updated on: Dec 17, 2025 | 9:28 PM

Share

ಡಿಸೆಂಬರ್ 24, 2025 ರಂದು ಪ್ರಾರಂಭವಾಗಿ ಜನವರಿ 18, 2026 ರವರೆಗೆ ನಡೆಯಲಿರುವ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಗೆ (Vijay Hazare Trophy) ಹಾಲಿ ಚಾಂಪಿಯನ್ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ 16 ಸದಸ್ಯರ ತಂಡವನ್ನು ಕೆಎಸ್​ಸಿಎ ಆಯ್ಕೆ ಮಾಡಿದೆ. ಗಮನಿಸಬೇಕಾದ ಸಂಗತಿಯೆಂದರೆ ಕೆಎಲ್ ರಾಹುಲ್ ಕೂಡ ಈ ಟೂರ್ನಿಯಲ್ಲಿ ಆಡಲಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾ ಆಟಗಾರರು ಕೂಡ ದೇಶಿ ಟೂರ್ನಿಯಲ್ಲಿ ಆಡಬೇಕೆಂಬ ಕಡ್ಡಾಯ ನಿಯಮವನ್ನು ಬಿಸಿಸಿಐ ಹೊರಡಿಸಿದೆ. ಇದರ ಪರಿಣಾಮವಾಗಿ ಕೆಎಲ್ ರಾಹುಲ್ (KL Rahul) ಕರ್ನಾಟಕ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹಾಲಿ ಚಾಂಪಿಯನ್ ಕರ್ನಾಟಕ

ಐದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವುದರೊಂದಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಕರ್ನಾಟಕ ಈ ಆವೃತ್ತಿಯಲ್ಲಿ ತನ್ನ ಮೊದಲ ಪಂದ್ಯವನ್ನು ಡಿಸೆಂಬರ್ 24 ರಂದು ಜಾರ್ಖಂಡ್ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಆಡುವ ಸಾಧ್ಯತೆಗಳಿವೆ. ಅಲ್ಲದೆ ಈ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಕರ್ನಾಟಕ ತನ್ನ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ. 2024/25 ರ ಆವೃತ್ತಿಯ ಫೈನಲ್​ನಲ್ಲಿ ವಿದರ್ಭ ತಂಡವನ್ನು 36 ರನ್​ಗಳಿಂದ ಸೋಲಿಸಿದ್ದ ಕರ್ನಾಟಕ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಟ್ರೋಫಿ ಎತ್ತಿಹಿಡಿದಿತ್ತು.

ರಾಜ್ಯ ತಂಡಕ್ಕೆ ರಾಹುಲ್ ಎಂಟ್ರಿ

ಆದಾಗ್ಯೂ ಕಳೆದ ಆವೃತ್ತಿಯಲ್ಲಿ ವಿದರ್ಭ ತಂಡದ ಪರ ಕಣಕ್ಕಿಳಿದು ರನ್​ಗಳ ಸುರಿಮಳೆ ಹರಿಸುವುದರೊಂದಿಗೆ ತಂಡವನ್ನು ಪೈನಲ್​ಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕರುಣ್ ನಾಯರ್ ಈ ಬಾರಿ ಕರ್ನಾಟಕ ತಂಡದ ಪರ ಆಡುತ್ತಿದ್ದಾರೆ. ಮಾತ್ರವಲ್ಲದೆ ಅವರಿಗೆ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ಕರುಣ್ ನಾಯರ್ ಆಗಮನ ಹಾಗೂ ಕೆಎಲ್ ರಾಹುಲ್ ಉಪಸ್ಥಿತಿ ಕರ್ನಾಟಕ ತಂಡವನ್ನು ಇನ್ನಷ್ಟು ಬಲಿಷ್ಠಗೊಳಿಸಿದ್ದು, ಈ ಬಾರಿಯೂ ಕರ್ನಾಟಕ ತಂಡವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.

ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಕರುಣ್ ನಾಯರ್ (ಉಪನಾಯಕ), ಅಭಿಲಾಷ್ ಶೆಟ್ಟಿ, ಶ್ರೀಶ ಆಚಾರ್, ಹರ್ಷಿಲ್ ಧರ್ಮನಿ, ಶ್ರೇಯಸ್ ಗೋಪಾಲ್, ಅಭಿನವ್ ಮನೋಹರ್, ಮನ್ವಂತ ಕುಮಾರ್, ದೇವದತ್ ಪಡಿಕ್ಕಲ್, ಧ್ರುವ ಪ್ರಭಾಕರ್, ಪ್ರಸಿದ್ಧ್ ಕೃಷ್ಣ, ಕೆಎಲ್ ರಾಹುಲ್, ಬಿ ಆರ್ ಶರತ್ , ಕೃಷ್ಣನ್ ಶ್ರೀಜಿತ್, ರವಿಚಂದ್ರನ್ ಸ್ಮರಣ್, ವೈಶಾಕ್ ವಿಜಯಕುಮಾರ್.

ಕನಿಷ್ಠ 2 ಪಂದ್ಯಗಳನ್ನಾದರೂ ಆಡಬೇಕು

ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರನು ವಿಜಯ್ ಹಜಾರೆ ಟ್ರೋಫಿಯಲ್ಲಿ ಕನಿಷ್ಠ ಪಕ್ಷ ಎರಡು ಪಂದ್ಯಗಳನ್ನಾದರೂ ಆಡಬೇಕೆಂಬ ನಿಯಮ ಹೊರಡಿಸಿದೆ. ಹಾಗಾಗಿ ನಿಯಮದಡಿಯಲ್ಲಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಹಿರಿಯ ಆಟಗಾರರು ತಮ್ಮ ರಾಜ್ಯ ತಂಡಗಳಿಗಾಗಿ ಆಡಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ