AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಯಾಂಕ್ ಶತಕ, ಅಭಿಲಾಷ್ ಮಾರಕ ದಾಳಿ; ಕರ್ನಾಟಕಕ್ಕೆ ಹ್ಯಾಟ್ರಿಕ್ ಜಯ

Vijay Hazare Trophy 2024: ಕರ್ನಾಟಕ ಕ್ರಿಕೆಟ್ ತಂಡವು ಅಹಮದಾಬಾದ್‌ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದೆ. ಮಯಾಂಕ್ ಅಗರ್ವಾಲ್ ಅವರ ಶತಕ ಹಾಗೂ ಅಭಿಲಾಷ್ ಶೆಟ್ಟಿಯ ಮಾರಕ ಬೌಲಿಂಗ್ ನೆರವಿನಿಂದ ಕರ್ನಾಟಕ ತಂಡ 1 ವಿಕೆಟ್​ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಕರ್ನಾಟಕ ತಂಡವು ಟೂರ್ನಿಯಲ್ಲಿ ತನ್ನ ಅಜೇಯ ಅಭಿಯಾನವನ್ನು ಮುಂದುವರೆಸಿದೆ.

ಮಯಾಂಕ್ ಶತಕ, ಅಭಿಲಾಷ್ ಮಾರಕ ದಾಳಿ; ಕರ್ನಾಟಕಕ್ಕೆ ಹ್ಯಾಟ್ರಿಕ್ ಜಯ
ಅಭಿಲಾಷ್ ಶೆಟ್ಟಿ, ಮಯಾಂಕ್ ಅಗರ್ವಾಲ್
ಪೃಥ್ವಿಶಂಕರ
|

Updated on: Dec 26, 2024 | 6:35 PM

Share

ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ತನ್ನ ಮೂರನೇ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿರುವ ಕರ್ನಾಟಕ ತಂಡ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇದುವರೆಗೆ ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಮಯಾಂಕ್ ಅಗರ್ವಾಲ್ ಪಡೆ ಸಿ ಗುಂಪಿನಲ್ಲಿ ಅಗ್ರಸ್ಥಾನವನ್ನು ಪಡೆದಿಕೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ 49.2 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 247 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ನಾಯಕ ಮಯಾಂಕ್ ಅಗರ್ವಾಲ್ ಸಿಡಿಸಿದ ಶತಕದ ನೆರವಿನಿಂದ 9 ವಿಕೆಟ್ ಕಳೆದುಕೊಂಡು ಇನ್ನು 15 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು.

ಪಂಜಾಬ್​ಗೆ ಸಾಧಾರಣ ಆರಂಭ

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ತಂಡಕ್ಕೆ ಸಾಧಾರಣ ಆರಂಭ ಸಿಕ್ಕಿತು. ಆರಂಭಿಕರಿಬ್ಬರು ಮೊದಲ ವಿಕೆಟ್​ಗೆ 39 ರನ್​ಗಳ ಜೊತೆಯಾಟ ನೀಡಿದರು. ಈ ವೇಳೆ ಕರ್ನಾಟಕ ಪರ ಚೊಚ್ಚಲ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನಾಡುತ್ತಿರುವ ಅಭಿಲಾಷ್ ಶೆಟ್ಟಿ ಪಂಜಾಬ್ ನಾಯಕ ಅಭಿಷೇಕ್ ಶರ್ಮಾ ವಿಕೆಟ್ ಉರುಳಿಸಿ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಸ್ಫೋಟಕ ಬ್ಯಾಟರ್ ಪ್ರಭಾಸಿಮ್ರಾನ್ ಸಿಂಗ್ ಕೂಡ ಕೌಶಿಕ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಆದರೆ ಈ ಬಳಿಕ ಜೊತೆಯಾದ ಅನ್ಮೋಲ್ಪ್ರೀತ್ ಸಿಂಗ್ ಹಾಗೂ ನೆಹಾಲ್ ವದೇರಾ 3ನೇ ವಿಕೆಟ್​ಗೆ ಅರ್ಧಶತಕದ ಜೊತೆಯಾಟ ನೀಡಿದರು.

5 ವಿಕೆಟ್ ಪಡೆದು ಮಿಂಚಿದ ಅಭಿಲಾಷ್

ಈ ವೇಳೆ ಅನ್ಮೋಲ್ಪ್ರೀತ್ ಸಿಂಗ್ 51 ರನ್​ಗಳ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ನೆಹಾಲ್ 37 ರನ್​ಗಳ ಕಾಣಿಕೆ ನೀಡಿದರು. ಇಬ್ಬರ ವಿಕೆಟ್ ಪತನದ ಬಳಿಕ ಬಂದ ಅನ್ಮೋಲ್ ಮಲ್ಹೋತ್ರಾ 42 ರನ್​ಗಳ ಇನ್ನಿಂಗ್ಸ್ ಆಡಿದರೆ, ಸನ್ವೀರ್ ಸಿಂಗ್ 35 ರನ್ ಕಲೆಹಾಕಿದರು. ಇವರ ಆಟದಿಂದ ಪಂಜಾಬ್ ತಂಡ 247 ರನ್ ಕಲೆಹಾಕಿತು. ಇತ್ತ ಕರ್ನಾಟಕ ಪರ ಬೌಲಿಂಗ್‌ನಲ್ಲಿ ಮಿಂಚಿದ ಅಭಿಲಾಷ್ ಶೆಟ್ಟಿ ಮೊದಲ ಪಂದ್ಯದಲ್ಲೇ 5 ವಿಕೆಟ್ ಪಡೆದ ಸಾಧನೆ ಮಾಡಿದರು. ಇವರಿಗೆ ಸಾಥ್ ನೀಡಿದ ಕೌಶಿಕ್ ಹಾಗೂ ನಿಖಿನ್ ತಲಾ 2 ವಿಕೆಟ್ ಪಡೆದರು.

ಕೈಕೊಟ್ಟ ಮಧ್ಯಮ ಕ್ರಮಾಂಕ

ಪಂಜಾಬ್ ನೀಡಿದ 247 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡಕ್ಕೆ ಮೊದಲ ವಿಕೆಟ್​ಗೆ 50 ರನ್​ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ನಿಖಿನ್ 13 ರನ್ ಕಲೆಹಾಕಿ ವಿಕೆಟ್ ಒಪ್ಪಿಸುವ ಮೂಲಕ ಈ ಜೊತೆಯಾಟ ಮುರಿದುಬಿತ್ತು. ಆದರೆ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್‌ ಮಾಡಿದ ನಾಯಕ ಮಯಾಂಕ್ ಕೊನೆಯವರೆಗೂ ಅಜೇಯರಾಗಿ ಉಳಿದು ಸ್ಫೋಟಕ ಶತಕ ಸಿಡಿಸಿದಲ್ಲದೆ ತಂಡವನ್ನು ಗೆಲುವಿನ ದಡ ಸೇರಿಸಿದರು. ಮಯಾಂಕ್​ಗೆ ಸಾಥ್ ನೀಡಿದ ಶ್ರೇಯಸ್ ಗೋಪಾಲ್ 29 ರನ್​ಗಳ ಕಾಣಿಕೆ ನೀಡಿದರೆ, ಅಭಿನವ್ ಮನೋಹರ್ 20 ರನ್​ಗಳಿಗೆ ಸುಸ್ತಾದರು.

ಮಯಾಂಕ್ ಗೆಲುವಿನ ಶತಕ

ಒಂದೆಡೆ ವಿಕೆಟ್ ಪತನದ ನಡುವೆಯೂ ತಮ್ಮ ಆಟವನ್ನು ಮುಂದುವರೆಸಿದ ಮಯಾಂಕ್, ಇತರ ಆಟಗಾರರಿಂದ ಸಿಕ್ಕ ಅಲ್ಪ ಕಾಣಿಕೆಯ ನೆರವಿನಿಂದ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಮಯಾಂಕ್ ತಮ್ಮ ಇನ್ನಿಂಗ್ಸ್​ನಲ್ಲಿ 127 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್​ಗಳ ನೆರವಿನಿಂದ 139 ರನ್ ಕಲೆಹಾಕಿದರು. ಮಯಾಂಕ್ ಹೊರತುಪಡಿಸಿ ತಂಡದ ಮತ್ತ್ಯಾವ ಆಟಗಾರನಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಆದಾಗ್ಯೂ ಎಲ್ಲರಿಂದ ಸಿಕ್ಕ ಅಲ್ಪ ಕಾಣೆಕೆಯ ನೆರವಿನಿಂದ ತಂಡ ಸತತ ಮೂರನೇ ಜಯ ದಾಖಲಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?