Vijay Hazare Trophy 2024-25: ಸ್ಮರಣ್ ಸ್ಮರಣೀಯ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ

Vijay Hazare Trophy 2024-25: ಕರ್ನಾಟಕ ತಂಡ ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮತ್ತೊಂದು ಅದ್ಭುತ ಗೆಲುವು ಸಾಧಿಸಿದೆ. ಪುದುಚೇರಿ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್‌ಗಳ ಜಯ ಸಾಧಿಸಿದ ಕರ್ನಾಟಕ, ಸತತ ಎರಡನೇ ಗೆಲುವಿನೊಂದಿಗೆ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಸ್ಮರಣ್ ರವಿಚಂದ್ರನ್ ಅವರ ಅಜೇಯ ಶತಕ ಮತ್ತು ಶ್ರೇಯಸ್ ಗೋಪಾಲ್ ಅವರ ಆಲ್​ರೌಂಡರ್ ಪ್ರದರ್ಶನ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು.

Vijay Hazare Trophy 2024-25: ಸ್ಮರಣ್ ಸ್ಮರಣೀಯ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ
ಸ್ಮರಣ್ ಶತಕ
Follow us
ಪೃಥ್ವಿಶಂಕರ
|

Updated on: Dec 23, 2024 | 6:17 PM

ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಕರ್ನಾಟಕ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪುದುಚೇರಿ ವಿರುದ್ಧದ ಪಂದ್ಯವನ್ನು ಕರ್ನಾಟಕ 3 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಟೂರ್ನಿಯಲ್ಲಿ ಬಲಿಷ್ಠ ಮುಂಬೈ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಿದ್ದ ಕರ್ನಾಟಕ ಆ ಪಂದ್ಯದಲ್ಲೂ 382 ರನ್​ಗಳ ಬೃಹತ್ ಗುರಿಯನ್ನು 46.2 ಓವರ್​ಗಳಲ್ಲೇ ಬೆನ್ನಟ್ಟಿ ಅಮೋಘ ಗೆಲುವು ದಾಖಲಿಸಿತ್ತು.

211 ರನ್ ಕಲೆಹಾಕಿದ ಪುದುಚೇರಿ

ತನ್ನ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಪುದುಚೇರಿ ತಂಡ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಮಿಂಚಿದ ನಾಯಕ ಅರುಣ್ ಕಾರ್ತಿಕ್ 71 ರನ್​ಗಳ ಇನ್ನಿಂಗ್ಸ್ ಆಡಿದರೆ, ಇವರಿಗೆ ಸಾಥ್ ನೀಡಿದ ಅಮನ್ ಹಕೀಮ್ ಖಾನ್ ಕೂಡ 45 ರನ್​ಗಳ ಕಾಣಿಕೆ ನೀಡಿದರು. ಈ ಇಬ್ಬರನ್ನು ಹೊರತುಪಡಿಸಿ ತಂಡದ ಉಳಿದ ಬ್ಯಾಟ್ಸ್‌ಮನ್​ಗಳಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.

ಇತ್ತ ಕರ್ನಾಟಕ ಪರ ಬೌಲಿಂಗ್‌ನಲ್ಲಿ ಮಿಂಚಿದ ವಿದ್ಯಾಧರ ಪಾಟೀಲ್ 10 ಓವರ್​ಗಳಲ್ಲಿ 27 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರೆ, ಶ್ರೇಯಸ್ ಗೋಪಾಲ್ ಕೂಡ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಉಳಿದಂತೆ ಕೌಶಿಕ್ ಹಾಗೂ ವೈಶಾಕ್ ವಿಜಯ್​ಕುಮಾರ್​ ತಲಾ ಒಂದೊಂದು ವಿಕೆಟ್ ಉರುಳಿಸಿದರು.

ಕರ್ನಾಟಕಕ್ಕೆ ಆರಂಭಿಕ ಆಘಾತ

ಇನ್ನು ಪುದುಚೇರಿ ನೀಡಿದ 211 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡ ಕೇವಲ 16 ರನ್​ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ನಿಖಿನ್ ಜೋಶ್ 10 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಾಯಕ ಮಯಾಂಕ್ ಕೂಡ 18 ರನ್​ಗಳಿಗೆ ಸುಸ್ತಾದರು. ಮೂರನೇ ಕ್ರಮಾಂಕದಲ್ಲಿ ಬಂದ ಅನೀಶ್ ಕೂಡ 15 ರನ್​ಗಳಿಗೆ ಸುಸ್ತಾದರು. ಆದರೆ 4ನೇ ಕ್ರಮಾಂಕದಲ್ಲಿ ಬಂದ ಸ್ಮರಣ್ ರವಿಚಂದ್ರನ್ ತಂಡದ ಪರ ಸ್ಮರಣೀಯ ಇನ್ನಿಂಗ್ಸ್ ಆಡಿದರು.

ಸ್ಮರಣ್ ಸ್ಮರಣೀಯ ಶತಕ

ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಸ್ಮರಣ್ ಅಜೇಯ ಶತಕ ಸಿಡಿಸಿದಲ್ಲದೆ ತಂಡವನ್ನು ಜಯದ ದಡ ಸೇರಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 87 ಎಸೆತಗಳನ್ನು ಎದುರಿಸಿದ ಸ್ಮರಣ್ 10 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್​ಗಳ ನೆರವಿನಿಂದ ಅಜೇಯ 100 ರನ್ ಕಲೆಹಾಕಿದರು. ಸ್ಮರಣ್​ಗೆ ಸಾಥ್ ನೀಡಿದ ಆಲ್​ರೌಂಡರ್ ಶ್ರೇಯಸ್ ಗೋಪಾಲ್ ಕೂಡ 40 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಹೀಗಾಗಿ ತಂಡ 7 ವಿಕೆಟ್ ಕಳೆದುಕೊಂಡು 40.5 ನೇ ಓವರ್​ನಲ್ಲಿ ಜಯದ ನಗೆ ಬೀರಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ