Vijay Hazare Trophy: ರಣರೋಚಕ ಪಂದ್ಯದಲ್ಲಿ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಕರ್ನಾಟಕ

Vijay Hazare Trophy 2025: ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬರೋಡಾ ತಂಡವನ್ನು 5 ರನ್​ಗಳಿಂದ ಮಣಿಸಿದ ಮಯಾಂಕ್ ಅಗರ್ವಾಲ್ ನಾಯಕತ್ವದ ಕರ್ನಾಟಕ ತಂಡ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಕರ್ನಾಟಕ ತಂಡ ಯಶಸ್ವಿಯಾಗಿದೆ.

Vijay Hazare Trophy: ರಣರೋಚಕ ಪಂದ್ಯದಲ್ಲಿ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಕರ್ನಾಟಕ
ಕರ್ನಾಟಕ ತಂಡ
Follow us
ಪೃಥ್ವಿಶಂಕರ
|

Updated on:Jan 11, 2025 | 5:59 PM

ವಡೋದರಾದ ಮೋತಿ ಬಾಗ್ ಕ್ರೀಡಾಂಗಣದಲ್ಲಿ ನಡೆದ ವಿಜಯ್​ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ನೇತೃತ್ವದ ಬರೋಡಾ ತಂಡವನ್ನು 5 ರನ್​ಗಳಿಂದ ಮಣಿಸಿದ ಕರ್ನಾಟಕ ತಂಡ ಸೆಮಿಫೈನಲ್​ ಪ್ರವೇಶಿಸಿದೆ. ರಣರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಬರೋಡಾ ಗೆಲುವಿಗೆ ಕೊನೆಯ ಓವರ್​ನಲ್ಲಿ 12 ರನ್​ಗಳ ಅವಶ್ಯಕತೆ ಇತ್ತು. ಆದರೆ ಅಂತಿಮವಾಗಿ ಬರೋಡಾ ತಂಡ 276 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಹೀಗಾಗಿ ಕರ್ನಾಟಕ ತಂಡಕ್ಕೆ 5 ರನ್​ಗಳ ರೋಚಕ ಜಯ ಲಭಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡ ದೇವದತ್ ಪಡಿಕ್ಕಲ್ ಅವರ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 281 ರನ್ ಕಲೆಹಾಕಿತು. ಇತ್ತ ಬರೋಡಾ ತಂಡದ ಪರ ಆರಂಭಿಕ ಶಾಶ್ವತ್ ರಾವತ್ ಶತಕ ಬಾರಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಪಡಿಕ್ಕಲ್- ಅವಿನಾಶ್ ಶತಕದ ಜೊತೆಯಾಟ

ಪಂದ್ಯದಲ್ಲಿ ಟಾಸ್ ಗೆದ್ದ ಬರೋಡಾ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಸಾಧಾರಣ ಆರಂಭ ಸಿಕ್ಕಿತು. ಶತಕಗಳ ವೀರ ಮಯಾಂಕ್ ಅಗರ್ವಾಲ್ ನಿರ್ಧಾರಕ ಪಂದ್ಯದಲ್ಲಿ ಮಿಂಚಲು ಸಾಧ್ಯವಾಗದೆ ಕೇವಲ 6 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ಆ ಬಳಿಕ ಜೊತೆಯಾದ ದೇವದತ್ ಪಡಿಕ್ಕಲ್ ಹಾಗೂ ಕೆವಿ ಅವಿನಾಶ್ 132 ರನ್​ಗಳ ಜೊತೆಯಾಟವನ್ನಾಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇದಲ್ಲದೆ ಇಬ್ಬರು ಕೂಡ ಅರ್ಧಶತಕ ದಾಖಲಿಸಿದರು. ಆದರೆ ಈ ಹಂತದಲ್ಲಿ ಅವಿನಾಶ್ 52 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಪಡಿಕ್ಕಲ್ ಶತಕ

ಅವಿನಾಶ್ ವಿಕೆಟ್ ಪತನದ ಬಳಿಕ ದೇವದತ್ ಪಡಿಕ್ಕಲ್ ಕೂಡ ಸ್ಮರಣೀಯ ಶತಕ ಸಿಡಿಸಿ ಪೆವಿಲಿಯನ್ ಸೇರಿಕೊಂಡರು. ಪಡಿಕ್ಕಲ್ ತಮ್ಮ ಇನ್ನಿಂಗ್ಸ್​ನಲ್ಲಿ 99 ಎಸೆತಗಳನ್ನು ಎದುರಿಸಿ 15 ಬೌಂಡರಿ ಹಾಗೂ 2 ಸಿಕ್ಸರ್​ಗಳ ಸಹಿತ 102 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಇಬ್ಬರ ವಿಕೆಟ್ ಪತನದ ಬಳಿಕ ಜೊತೆಯಾದ ಸ್ಮರಣ್ ಹಾಗೂ ಅಭಿನವ್ ಕೂಡ 49 ರನ್​ಗಳ ಜೊತೆಯಾಟ ನೀಡುವಲ್ಲಿ ಯಶಸ್ವಿಯಾದರು. ಈ ಹಂತದಲ್ಲಿ ಸ್ಮರಣ್ ರವಿಚಂದ್ರನ್ 28 ರನ್​ಗಳ ಅಲ್ಪ ಕಾಣಿಕೆ ನೀಡಿ ವಿಕೆಟ್ ಕೈಚೆಲ್ಲಿದರೆ, ಹಾರ್ದಿಕ್ ಸೊನ್ನೆ ಸುತ್ತಿದರು. ಶ್ರೇಯಸ್ ಗೋಪಾಲ್ ಅವರ ಇನ್ನಿಂಗ್ಸ್ 16 ರನ್​ಗಳಿಗೆ ಅಂತ್ಯಗೊಂಡರೆ, ವೇಗಿ ಪ್ರಸಿದ್ಧ್ ಕೃಷ್ಣ 12 ರನ್​ಗಳ ಕಾಣಿಕೆ ನೀಡಿದರು. ಅಂತಿಮವಾಗಿ ಅಭಿನವ್ ಮನೋಹರ್ ಕೂಡ 21 ರನ್​ಗಳ ಇನ್ನಿಂಗ್ಸ್ ಆಡಿ ತಂಡವನ್ನು 281 ರನ್​ಗಳಿಗೆ ಕೊಂಡೊಯ್ದರು.

ಶಾಶ್ವತ್ ಶತಕ ವ್ಯರ್ಥ

ಕರ್ನಾಟಕ ನೀಡಿದ 281 ರನ್​ಗಳ ಗುರಿ ಬೆನ್ನಟ್ಟಿದ ಬರೋಡಾ ತಂಡಕ್ಕೂ ಸಾಧಾರಣ ಆರಂಭ ಸಿಕ್ಕಿತು. ಆರಂಭಿಕ ನಿನಾದ್ 14 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ನಂತರ ಜೊತೆಯಾದ ಅತಿಥ್ ಹಾಗೂ ಶಾಶ್ವತ್​ ಶತಕದ ಜೊತೆಯಾಟವನ್ನಾಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದರೆ ಅತಿಥ್ ಅರ್ಧಶತಕ ಸಿಡಿಸಿ ವಿಕೆಟ್ ಒಪ್ಪಿಸಿದ ಬಳಿಕ ಬರೋಡಾದ ಇನ್ನಿಂಗ್ಸ್ ತತ್ತರಿಸಿತು. ನಾಯಕ ಕೃನಾಲ್ ಕೂಡ 30 ರನ್ ಬಾರಿಸಲಷ್ಟೇ ಶಕ್ತರಾದರು. ಆದರೆ ತಂಡದ ಪರ ಕೊನೆಯವರೆಗೂ ಹೋರಾಡಿದ ಆರಂಭಿಕ ಶಾಶ್ವತ್ ಶತಕದ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಶಾಶ್ವತ್ ಹೊರತಾಗಿ ಕೊನೆಯಲ್ಲಿ ಭಾನು ಪಾನಿಯಾ ಕೂಡ 22 ರನ್​ಗಳ ಕಾಣಿಕೆ ಕೊಟ್ಟರಾದರೂ ಅದು ಗೆಲುವಿಗೆ ಸಾಕಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Sat, 11 January 25

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ