
ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಅನೇಕ ಬ್ಯಾಟ್ಸ್‌ಮನ್‌ಗಳು ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಅದರಲ್ಲಿ ವೈಭವ್ ಸೂರ್ಯವಂಶಿಗಿಂತ (Vaibhav Suryavanshi) ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿರುವ ಒಬ್ಬ ಬ್ಯಾಟ್ಸ್‌ಮನ್ ಕೂಡ ಸೇರಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೇವಲ ಮೂರು ಇನ್ನಿಂಗ್ಸ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರೈಲ್ವೇಸ್ ತಂಡದ ಪರ ಆಡುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರವಿ ಸಿಂಗ್ (Ravi Singh) ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಎಲ್ಲರನ್ನು ಅಚ್ಚರಿಗೊಳಿಸಿದ್ದು, ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ 136.5 ರ ಸರಾಸರಿ ಮತ್ತು 138 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್ನಲ್ಲಿ 273 ರನ್ ಗಳಿಸಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ಸಿಕ್ಸರ್ ಕಿಂಗ್ ಎನಿಸಿಕೊಂಡಿರುವ ರವಿ ಸಿಂಗ್ ಸರ್ವಿಸಸ್ ವಿರುದ್ಧದ ಮೂರನೇ ಪಂದ್ಯದಲ್ಲಿ 46 ಎಸೆತಗಳಲ್ಲಿ 88 ರನ್‌ಗಳ ಇನ್ನಿಂಗ್ಸ್ ಆಡಿದರು. ಇದರಲ್ಲಿ ಏಳು ಸಿಕ್ಸರ್‌ಗಳು ಸೇರಿದ್ದವು. ಈ ಮೂಲಕ ಅತ್ಯಧಿಕ ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿಯನ್ನು ಹಿಂದಿಕ್ಕಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಸೂರ್ಯವಂಶಿ 16 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ರವಿ ಸಿಂಗ್ 19 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರವಿ ಸಿಂಗ್ ಈ ಆವೃತ್ತಿಯಲ್ಲಿ ಆಡಿರುವ ಸತತ ಮೂರು ಪಂದ್ಯಗಳಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ್ದಾರೆ.
ಹರಿಯಾಣ ವಿರುದ್ಧದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ್ದ ರವಿ ಸಿಂಗ್ ಕೇವಲ 81 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿದ್ದರು. ರವಿ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ರೈಲ್ವೇಸ್ 43.4 ಓವರ್‌ಗಳಲ್ಲಿ 268 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ನಂತರ ಆಂಧ್ರಪ್ರದೇಶ ವಿರುದ್ಧವೂ ರವಿ 70 ಎಸೆತಗಳಲ್ಲಿ 76 ರನ್ ಸಿಡಿಸಿದ್ದರು. ಇದೀಗ ಸರ್ವಿಸಸ್ ವಿರುದ್ಧ ರವಿ ಸಿಂಗ್ 46 ಎಸೆತಗಳಲ್ಲಿ 88 ರನ್ ಕಲೆಹಾಕಿದ್ದಾರೆ. ಇದರಲ್ಲಿ 7 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳು ಸೇರಿವೆ.
ಬರೋಬ್ಬರಿ 15 ಸಿಕ್ಸ್; ವಿಶ್ವ ದಾಖಲೆಯ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ
ಐಪಿಎಲ್ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರವಿ ಸಿಂಗ್ ಅವರನ್ನು ಖರೀದಿ ಮಾಡಿದೆ. ರಾಜಸ್ಥಾನ್ ಅವರನ್ನು 95 ಲಕ್ಷಕ್ಕೆ ಖರೀದಿಸಿದೆ. ಯುಪಿ ಟಿ20 ಲೀಗ್‌ನಲ್ಲಿಯೂ ರವಿ ಸಿಂಗ್ ಅದ್ಭುತ ಇನ್ನಿಂಗ್ಸ್ ಆಡಿದ್ದರು. ರವಿ ವಿಕೆಟ್ ಕೀಪಿಂಗ್ ಮತ್ತು ಮ್ಯಾಚ್-ಫಿನಿಶಿಂಗ್ ಸಾಮರ್ಥ್ಯ ಎರಡನ್ನೂ ಹೊಂದಿದ್ದಾರೆ. ಆದ್ದರಿಂದ ನೀವು ಅವರನ್ನು ಐಪಿಎಲ್ 2026 ರಲ್ಲಿ ರಾಜಸ್ಥಾನದ ಪ್ಲೇಯಿಂಗ್ XI ನಲ್ಲಿ ನೋಡಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ