ಫೈನಲ್ ಪಂದ್ಯಕ್ಕೂ ಮುನ್ನ RCBಗೆ ಸ್ಪಷ್ಟ ಸಂದೇಶ ರವಾನಿಸಿದ ವಿಜಯ ಮಲ್ಯ
IPL 2025 Final: ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯವು ಜೂನ್ 3 ರಂದು ನಡೆಯಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಇಡಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನು ಫೈನಲ್ಗೇರಲು ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಪೈಪೋಟಿ ಇದ್ದು, ಇದರಲ್ಲಿ ಒಂದು ತಂಡ ಜೂನ್ 3 ರಂದು ಆರ್ಸಿಬಿ ವಿರುದ್ಧ ಕಣಕ್ಕಿಳಿಯಲಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಚಂಡೀಗಢ್ನ ಮುಲ್ಲನ್ಪುರ್ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 14.1 ಓವರ್ಗಳಲ್ಲಿ 101 ರನ್ ಬಾರಿಸಿ ಆಲೌಟ್ ಆಯಿತು.
102 ರನ್ಗಳ ಸುಲಭ ಗುರಿ ಬೆನ್ನತ್ತಿದ ಆರ್ಸಿಬಿ ತಂಡಕ್ಕೆ ಫಿಲ್ ಸಾಲ್ಟ್ (56) ಸ್ಪೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್ಗಳಲ್ಲಿ 106 ರನ್ ಬಾರಿಸಿ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿತು.
ಈ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕ ವಿಜಯ ಮಲ್ಯ, ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್ ಖಾತೆಯನ್ನು ಆರ್ಸಿಬಿ ತಂಡದ ಪರಾಕ್ರಮವನ್ನು ಕೊಂಡಾಡಿರುವ ಮಲ್ಯ ಫೈನಲ್ ಪಂದ್ಯಕ್ಕೂ ಮುನ್ನ ರಾಯಲ್ ಪಡೆಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧ ಏಕಪಕ್ಷೀಯವಾಗಿ ಗೆಲುವು ಸಾಧಿಸಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದ್ದಕ್ಕಾಗಿ ಆರ್‌ಸಿಬಿಗೆ ಅಭಿನಂದನೆಗಳು. ಒತ್ತಡದ ಸ್ಪರ್ಧೆಯಲ್ಲಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ಇದು. ಪ್ರಶಸ್ತಿಯತ್ತ ಮುಂದುವರಿಯಿರಿ ಎಂದು ವಿಜಯ ಮಲ್ಯ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯದಲೂ ಧೈರ್ಯದಿಂದ ಆಡಬೇಕೆಂಬ ಸಂದೇಶವನ್ನು ಸಹ ರವಾನಿಸಿದ್ದಾರೆ. ಇದೀಗ ವಿಜಯ ಮಲ್ಯ ಅವರ ಎಕ್ಸ್ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆಗಳು ಸಹ ವ್ಯಕ್ತವಾಗುತ್ತಿದೆ.
ವಿಜಯ ಮಲ್ಯ ಅಭಿನದನೆ:
Many congratulations to RCB for an authoritarian win over PBKS tonight to march into the IPL finals. Outstanding all round performance in a high pressure contest. Onwards and upwards towards the title. Play Bold.
— Vijay Mallya (@TheVijayMallya) May 29, 2025
ಅಂದಹಾಗೆ ವಿಜಯ್ ಮಲ್ಯ ಅವರು ಆರ್ಸಿಬಿ ತಂಡದ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್ನಲ್ಲಿ ಮಲ್ಯ ಅವರು ಆರ್ಸಿಬಿ ತಂಡವನ್ನು 455 ಕೋಟಿ ರೂ. ನೀಡಿ ಖರೀದಿಸಿದ್ದರು.
ಇದನ್ನೂ ಓದಿ: VIDEO: ಇದೆಂಥ ಕೀಳುಮಟ್ಟದ ವರ್ತನೆ… ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್ನಲ್ಲಿ ನೆಲೆಸಿದ್ದಾರೆ. ಇದೀಗ ಆರ್ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.
