ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬರುತ್ತಲೇ ಅಚ್ಚರಿಯ ಹೇಳಿಕೆ ನೀಡಿದ ವಿನೋದ್ ಕಾಂಬ್ಳಿ

Vinod Kambli Discharged From Hospital: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ತೀವ್ರ ಅನಾರೋಗ್ಯದಿಂದಾಗಿ 10 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಡಿಸ್ಚಾರ್ಜ್ ಆಗಿದ್ದಾರೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಫಲವಾಗಿ ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ಮರಳಿದ್ದಾರೆ. ಆಸ್ಪತ್ರೆಯಿಂದ ಹೊರಬರುವಾಗ ಅವರು ಮಾಧಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವನ್ನೂ ಅವರು ನೀಡಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬರುತ್ತಲೇ ಅಚ್ಚರಿಯ ಹೇಳಿಕೆ ನೀಡಿದ ವಿನೋದ್ ಕಾಂಬ್ಳಿ
ವಿನೋದ್ ಕಾಂಬ್ಳಿ
Follow us
ಪೃಥ್ವಿಶಂಕರ
|

Updated on: Jan 01, 2025 | 6:45 PM

ತೀವ್ರ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕೊಂಚ ಚೇತರಿಸಿಕೊಂಡಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸುಮಾರು 10 ದಿನಗಳ ಹಿಂದೆ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಅವರನ್ನು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಂಬ್ಳಿಯವರನ್ನು ಪರಿಶೀಲಿಸಿದ್ದ ವೈದ್ಯರು ಕಾಂಬ್ಳಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರವ ಬಗ್ಗೆ ವರದಿ ನೀಡಿದ್ದರು. ಇದೀಗ ಸುಮಾರು 10 ದಿನಗಳ ಚಿಕಿತ್ಸೆಯ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಸದ್ಯ ಅವರ ಆರೀಗ್ಯ ಸ್ಥಿತಿ ಸ್ಥಿರವಾಗಿದ್ದು ಅವರನ್ನು ಮನೆಗೆ ಕಳುಹಿಸಿಕೊಡಲಾಗಿದೆ. ಇದೀಗ ಕಾಂಬ್ಳಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಡಿಯೋ ಕೂಡ ಹೊರಬಿದ್ದಿದೆ.

10 ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕುಡಿತದ ಚಟಕ್ಕೆ ಬಿದ್ದು ಹಲವು ಕಾಯಿಲೆಗಳಿಗೆ ತುತ್ತಾಗಿದ್ದ ವಿನೋದ್ ಕಾಂಬ್ಳಿ ಕಳೆದ ಡಿಸೆಂಬರ್ 21 ರಂದು ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಹತ್ತು ದಿನಗಳ ಚಿಕಿತ್ಸೆ ಬಳಿಕ ಮನೆಗೆ ಮರಳಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳುತ್ತಿರುವ ಕಾಂಬ್ಳಿ ಅವರಿಗೆ ಸರಿಯಾಗಿ ನಡೆಯಲು ಕೂಡ ಸಾಧ್ಯವಾಗುತ್ತಿಲ್ಲ. ಇನ್ನೊಬ್ಬರ ಸಹಾಯದೊಂದಿಗೆ ಕಾಂಬ್ಳಿ ನಡೆಯುತ್ತಿರುವುದು ಕಂಡುಬಂದಿತು. ಹಾಗೆಯೇ ಟೀಂ ಇಂಡಿಯಾ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಹೊರ ಬಂದಿರುವ ಕಾಂಬ್ಳಿಯವರ ಕೈಯಲ್ಲಿ ಬ್ಯಾಟ್ ಕೂಡ ಇತ್ತು. ಇದಲ್ಲದೇ ಹೊಸ ವರ್ಷದಲ್ಲಿ ನಾಗರಿಕರು ಮದ್ಯ ಹಾಗೂ ಇತರೆ ಅಮಲು ಪದಾರ್ಥಗಳಿಂದ ದೂರವಿರಬೇಕು ಎಂಬ ಸಂದೇಶ ನೀಡಿರುವ ಕಾಂಬ್ಳಿ ಯಾವುದೇ ವ್ಯಸನವು ಜೀವನವನ್ನು ನಾಶಪಡಿಸುತ್ತದೆ ಎಂದಿದ್ದಾರೆ. ಇದರ ಜೊತೆಗೆ ಶೀಘ್ರದಲ್ಲೇ ಮತ್ತೆ ಕ್ಷೇತ್ರಕ್ಕೆ ಹಿಂತಿರುಗುತ್ತೇನೆ ಎಂದಿದ್ದಾರೆ.

ಇತ್ತೀಚೆಗೆ ವಿನೋದ್ ಕಾಂಬ್ಳಿಯವರ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವೀಡಿಯೊದಲ್ಲಿ, ಅವರು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅದರಲ್ಲಿ ಅವರು ತುಂಬಾ ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬಂದಿತು. ಅಂದಿನಿಂದ, ಕಾಂಬ್ಳಿಯವರಿಗೆ ನೆರವು ನೀಡಲು ಹಲವರು ಮುಂದಾಗಿದ್ದರು. ಅದರಂತೆ ಆಸ್ಪತ್ರೆಗೆ ದಾಖಲಾದ ಬಳಿಕವೂ ಕೆಲವರು ಕಾಂಬ್ಳಿಗೆ ಆರ್ಥಿಕ ಸಹಾಯ ಮಾಡಿದ್ದರು.

ಡ್ಯಾನ್ಸ್ ವಿಡಿಯೋ ವೈರಲ್

ಇತ್ತೀಚೆಗೆ ವಿನೋದ್ ಕಾಂಬ್ಳಿ ಅವರ ಮತ್ತೊಂದು ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅವರು ತಮ್ಮ ಆಸ್ಪತ್ರೆಯ ಕೊಠಡಿಯಲ್ಲಿ ಸಿಬ್ಬಂದಿಯೊಂದಿಗೆ ಡ್ಯಾನ್ಸ್ ಮಾಡುತ್ತಿದ್ದು, ಜೋರಾಗಿ ಹಾಡುತ್ತಿದ್ದರು. ವೀಡಿಯೊದಲ್ಲಿ, ಕಾಂಬ್ಳಿ ಶಾರುಖ್ ಖಾನ್ ಅವರ ಪ್ರಸಿದ್ಧ ಚಲನಚಿತ್ರ ಚಕ್ ದೇ ಇಂಡಿಯಾದ ಶೀರ್ಷಿಕೆ ಗೀತೆಯಲ್ಲಿ ಆಸ್ಪತ್ರೆಯ ಮಹಿಳಾ ಉದ್ಯೋಗಿಯೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ