Vinod Kambli: ಪಿಂಚಣಿಯಿಂದಲೇ ಜೀವನ ದೂಡುತ್ತಿರುವ ವಿನೋದ್ ಕಾಂಬ್ಳಿ

Vinod Kambli: ವಿನೋದ್ ಕಾಂಬ್ಳಿ ಅವರು ಭಾರತಕ್ಕಾಗಿ 104 ಏಕದಿನ, 17 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ನಾಲ್ಕು ಟೆಸ್ಟ್ ಶತಕಗಳು ಮತ್ತು 2 ಏಕದಿನ ಶತಕಗಳೊಂದಿಗೆ ಒಟ್ಟು 3561 ರನ್ ಗಳಿಸಿದ್ದಾರೆ.

Vinod Kambli: ಪಿಂಚಣಿಯಿಂದಲೇ ಜೀವನ ದೂಡುತ್ತಿರುವ ವಿನೋದ್ ಕಾಂಬ್ಳಿ
vinod kambli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 17, 2022 | 12:54 PM

ವಿನೋದ್ ಕಾಂಬ್ಳಿ…ಟೀಮ್ ಇಂಡಿಯಾದ ಮಾಜಿ ಆಟಗಾರನನ್ನು ಈಗಲೂ ಜನರು ಗುರುತಿಸುತ್ತಿರುವುದು ಸಚಿನ್ ತೆಂಡೂಲ್ಕರ್ ಅವರ ಬಾಲ್ಯದ ಗೆಳೆಯ ಎಂಬ ಟ್ಯಾಗ್​ ಲೈನ್​ನಿಂದಲೇ…ಅಷ್ಟರಮಟ್ಟಿಗೆ ಕಾಂಬ್ಳಿ-ಸಚಿನ್ ಹೆಸರು ಮಾಡಿದ್ದರು. ಇಲ್ಲಿ ಸಚಿನ್ ಬಲಗೈ ಬ್ಯಾಟ್ಸ್​ಮನ್ ಆಗಿ ದೇಶೀಯ ಅಂಗಳದಲ್ಲಿ ಮಿಂಚಿದ್ರೆ, ಕಾಂಬ್ಳಿ ಎಡಗೈ ದಾಂಡಿಗನಾಗಿ ಅಬ್ಬರಿಸಿದ್ದರು. ಅಲ್ಲದೆ ಇಬ್ಬರು ಸೇರಿ ಬಾಲ್ಯದಲ್ಲಿ 664 ರನ್​ಗಳ ಜೊತೆಯಾಟವಾಡಿ ದಾಖಲೆ ಕೂಡ ನಿರ್ಮಿಸಿದ್ದರು. ವಿಶೇಷ ಎಂದರೆ ಈ ಇನಿಂಗ್ಸ್​ನಲ್ಲಿ ವಿನೋದ್ ಕಾಂಬ್ಳಿ ಏಕಾಂಗಿಯಾಗಿ 349 ರನ್ ಬಾರಿಸಿದ್ದರು.

ಇದಾದ ಬಳಿಕ ಸಚಿನ್ ತೆಂಡೂಲ್ಕರ್​ 1989 ರಲ್ಲಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡರೆ, 1991 ರಲ್ಲಿ ವಿನೋದ್ ಕಾಂಬ್ಳಿ ಭಾರತ ತಂಡದಲ್ಲಿ ಅವಕಾಶ ಪಡೆದರು. ಆದರೆ ಸಚಿನ್ ತೆಂಡೂಲ್ಕರ್​ರಂತೆ ಮಿಂಚಲು ಕಾಂಬ್ಳಿಗೆ ಸಾಧ್ಯವಾಗಿರಲಿಲ್ಲ. ಅಲ್ಲದೆ 2000 ರಲ್ಲಿ ತಂಡದಿಂದ ಹೊರಬಿದ್ದ ಬಳಿಕ ಕಂಬ್ಯಾಕ್ ಕೂಡ ಮಾಡಲಾಗಲಿಲ್ಲ.

ಇದೀಗ ವಿನೋದ್ ಕಾಂಬ್ಳಿ ವರ್ಷಗಳ ಬಳಿಕ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಾಗಲು ಮುಖ್ಯ ಕಾರಣ ಅವರ ಬಡತನ. ಅಂದರೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಕಾಂಬ್ಳಿ ಈಗ ಬದುಕುತ್ತಿರುವುದು ಬಿಸಿಸಿಐ ನೀಡುತ್ತಿರುವ ಪಿಂಚಣಿಯಿಂದ ಎಂದರೆ ನಂಬಲೇಬೇಕು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಕಾಂಬ್ಳಿ, ನಾನು ನಿರುದ್ಯೋಗಿಯಾಗಿದ್ದೇನೆ. ನಮ್ಮ ಕುಟುಂಬವು ಬಿಸಿಸಿಐ ನೀಡುವ ಪಿಂಚಣಿಯಿಂದ ಬದುಕು ಸಾಗಿಸುತ್ತಿದೆ. ತಿಂಗಳಿಗೆ 30 ಸಾವಿರ ಪಿಂಚಣಿ ಬರುತ್ತಿದ್ದು, ಇದರೊಂದಿಗೆ ಕುಟುಂಬ ನಿರ್ವಹಣೆ ಮಾಡುತ್ತಿದ್ದೇನೆ ಎಂದು ಕಾಂಬ್ಳಿ ನೋವು ಹಂಚಿಕೊಂಡಿದ್ದಾರೆ.

ಈ ಹಿಂದೆ ವಿನೋದ್ ಕಾಂಬ್ಳಿ ಅವರು ಸಚಿನ್ ತೆಂಡೂಲ್ಕರ್ ಅವರ ಮಿಡ್ಲ್ಸೆಕ್ಸ್ ಗ್ಲೋಬಲ್ ಅಕಾಡೆಮಿಯಲ್ಲಿ ಮಾರ್ಗದರ್ಶಕರಾಗಿದ್ದರು. ಆದರೆ ನಂತರ ಅವರು ಅಲ್ಲಿನ ಕೆಲಸವನ್ನು ಕಾರಣಾಂತರಗಳಿಂದ ತೊರೆದಿದ್ದರು. ನಾನು ಪ್ರತಿದಿನ ಬೆಳಗ್ಗೆ 5 ಗಂಟೆಗೆ ಏಳುತ್ತಿದ್ದೆ. ಇದಾದ ಬಳಿಕ ಡಿವೈ ಪಾಟೀಲ್ ಕ್ರೀಡಾಂಗಣಕ್ಕೆ ಕ್ಯಾಬ್​ನಲ್ಲಿ ಹೋಗುತ್ತಿದ್ದೆ. ಅಲ್ಲದೆ ಸಂಜೆಯವರೆಗೆ ಬಿಕೆಸಿ ಗ್ರೌಂಡ್ ನಲ್ಲಿ ಕೋಚಿಂಗ್ ಕೊಡುತ್ತಿದ್ದೆ. ಇದು ನನಗೆ ತುಂಬಾ ಬೇಸರದ ದಿನಚರಿಯಾಗಿತ್ತು ಎಂದು ಕಾಂಬ್ಳಿ ತಿಳಿಸಿದ್ದಾರೆ.

ನನ್ನ ಪರಿಸ್ಥಿತಿಯ ಬಗ್ಗೆ ಸಚಿನ್‌ಗೆ ಎಲ್ಲವೂ ಗೊತ್ತು. ಆದರೆ ನಾನು ಅವರಿಂದ ಏನನ್ನೂ ನಿರೀಕ್ಷಿಸುವುದಿಲ್ಲ. ತೆಂಡೂಲ್ಕರ್ ನನಗೆ ಮಿಡ್ಲ್ಸೆಕ್ಸ್ ಗ್ಲೋಬಲ್ ಅಕಾಡೆಮಿಯಲ್ಲಿ ಕೆಲಸ ನೀಡಿದರು. ಅದರಿಂದ ನಾನು ತುಂಬಾ ಸಂತೋಷಪಟ್ಟಿದ್ದೆ. ಆತ ನನಗೆ ಬಹಳ ಒಳ್ಳೆಯ ಸ್ನೇಹಿತ. ಅವರು ಯಾವಾಗಲೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿನೋದ್ ಕಾಂಬ್ಳಿ ತಿಳಿಸಿದ್ದಾರೆ.

ನಾನು ಯುವ ಆಟಗಾರರಿಗೆ ಸಹಾಯ ಮಾಡುವಂತಹ ಕೆಲಸವನ್ನು ನಿರ್ವಹಿಸಲು ಬಯಸುತ್ತೇನೆ. ಅಮೋಲ್ ಮಜುಂದಾರ್ ಮುಂಬೈ ತಂಡದ ಮುಖ್ಯ ಕೋಚ್ ಎಂದು ನನಗೆ ತಿಳಿದಿದೆ. ನಾವೆಲ್ಲರೂ ಜೊತೆಯಾಗಿ ಆಡಿದ ಆಟಗಾರರು. ಹೀಗಾಗಿ ಅವರಿಗೆ ಸಹಾಯ ಮಾಡಲು ನಾನು ಸದಾ ಸಿದ್ದನಾಗಿದ್ದೇನೆ ಎಂದು ವಿನೋದ್ ಕಾಂಬ್ಳಿ ತಿಳಿಸಿದ್ದಾರೆ.

ವಿನೋದ್ ಕಾಂಬ್ಳಿ ಅವರು ಭಾರತಕ್ಕಾಗಿ 104 ಏಕದಿನ, 17 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ನಾಲ್ಕು ಟೆಸ್ಟ್ ಶತಕಗಳು ಮತ್ತು 2 ಏಕದಿನ ಶತಕಗಳೊಂದಿಗೆ ಒಟ್ಟು 3561 ರನ್ ಗಳಿಸಿದ್ದಾರೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್