AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli 100th Test: ವಿರಾಟ್ ಕೊಹ್ಲಿಯ ಬೆಸ್ಟ್ ಇನ್ನಿಂಗ್ಸ್​ ಯಾವುದು? ನಾಯಕ ರೋಹಿತ್ ಉತ್ತರವಿದು

Virat Kohli 100th Test: ಅಂದು ವಿರಾಟ್ ಕೊಹ್ಲಿ ಮತ್ತು ನಾನು ಮೊದಲ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದೇವು. ದಕ್ಷಿಣ ಆಫ್ರಿಕಾ ಪಿಚ್‌ನಲ್ಲಿ ಬೌನ್ಸ್ ಮತ್ತು ಪೇಸ್ ಎರಡನ್ನೂ ಹೊಂದಿತ್ತು. ದಕ್ಷಿಣ ಆಫ್ರಿಕಾದಲ್ಲಿ ಡೇಲ್ ಸ್ಟೇಯ್ನ್, ಮೊರ್ನೆ ಮೊರ್ಕೆಲ್, ಫಿಲಾಂಡರ್, ಕಾಲಿಸ್ ಅವರಂತಹ ಬೌಲರ್‌ಗಳಿದ್ದರು.

Virat Kohli 100th Test: ವಿರಾಟ್ ಕೊಹ್ಲಿಯ ಬೆಸ್ಟ್ ಇನ್ನಿಂಗ್ಸ್​ ಯಾವುದು? ನಾಯಕ ರೋಹಿತ್ ಉತ್ತರವಿದು
ಕೊಹ್ಲಿ, ರೋಹಿತ್
TV9 Web
| Updated By: ಪೃಥ್ವಿಶಂಕರ|

Updated on: Mar 03, 2022 | 2:34 PM

Share

ಮೊಹಾಲಿಯಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಬಹಳ ವಿಶೇಷವಾಗಿದೆ. ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಮೊಹಾಲಿಯ ಪಿಸಿಎ ಸ್ಟೇಡಿಯಂನಲ್ಲಿ ತಮ್ಮ ವೃತ್ತಿಜೀವನದ 100 ನೇ ಟೆಸ್ಟ್ ಪಂದ್ಯವನ್ನು ಆಡಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಟೆಸ್ಟ್ ಮಾದರಿಯಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಅತ್ಯುತ್ತಮವಾಗಿದ್ದು, ಟೀಂ ಇಂಡಿಯಾಗೆ ಅವರ ಕೊಡುಗೆ ಶ್ಲಾಘನೀಯ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ (India vs Sri Lanka, 1st Test) ರೋಹಿತ್, ವಿರಾಟ್ ಕೊಹ್ಲಿ ಅವರ ವಿಶೇಷ ಇನ್ನಿಂಗ್ಸ್ ಅನ್ನು ನೆನಪಿಸಿಕೊಂಡರು. ಜೊತೆಗೆ ತನಗೆ ಕೊಹ್ಲಿಯ ಯಾವ ಶತಕ ಬೆಸ್ಟ್ ಎಂಬುದನ್ನು ಸಹ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ‘ನಾವು ತಂಡದ ಬಗ್ಗೆ ಮಾತನಾಡುವುದಾದರೆ, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 2018 ರಲ್ಲಿ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿರುವುದು ತುಂಬಾ ವಿಶೇಷವಾಗಿದೆ. ಆದರೆ ನಾನು ಬ್ಯಾಟ್ಸ್‌ಮನ್ ಆಗಿ ವಿರಾಟ್ ಕೊಹ್ಲಿಯ ಅತ್ಯಂತ ವಿಶೇಷ ಕ್ಷಣದ ಬಗ್ಗೆ ಮಾತನಾಡಿದರೆ, 2013 ರಲ್ಲಿ ಅವರು ದಕ್ಷಿಣ ಆಫ್ರಿಕಾದಲ್ಲಿ ಶತಕ ಬಾರಿಸಿದರು, ಅದು ನನಗೆ ತುಂಬಾ ವಿಶೇಷವಾದ ಇನ್ನಿಂಗ್ಸ್ ಆಗಿತ್ತು. ರೋಹಿತ್, ಅಂದು ವಿರಾಟ್ ಕೊಹ್ಲಿ ಮತ್ತು ನಾನು ಮೊದಲ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ್ದೇವು. ದಕ್ಷಿಣ ಆಫ್ರಿಕಾ ಪಿಚ್‌ನಲ್ಲಿ ಬೌನ್ಸ್ ಮತ್ತು ಪೇಸ್ ಎರಡನ್ನೂ ಹೊಂದಿತ್ತು. ದಕ್ಷಿಣ ಆಫ್ರಿಕಾದಲ್ಲಿ ಡೇಲ್ ಸ್ಟೇಯ್ನ್, ಮೊರ್ನೆ ಮೊರ್ಕೆಲ್, ಫಿಲಾಂಡರ್, ಕಾಲಿಸ್ ಅವರಂತಹ ಬೌಲರ್‌ಗಳಿದ್ದರು. ವಿರಾಟ್ ಕೊಹ್ಲಿ ಅವರ ಮುಂದೆ ಶತಕ ಬಾರಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ವಂಚಿತರಾದರು. 2018ರಲ್ಲೂ ವಿರಾಟ್ ಪರ್ತ್​ನಲ್ಲಿ ಶತಕ ಸಿಡಿಸಿದ್ದರು, ಆದರೆ ನನಗೆ 2013ರಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದು ವಿಶೇಷವಾಗಿತ್ತು ಎಂದಿದ್ದಾರೆ.

ಜೋಹಾನ್ಸ್​ಬರ್ಗ್​ನಲ್ಲಿ ವಿರಾಟ್ ಕೊಹ್ಲಿ ಶತಕ ರೋಹಿತ್ ಶರ್ಮಾ ನೆಚ್ಚಿನ ಶತಕವನ್ನು ವಿರಾಟ್ ಕೊಹ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಸಿಡಿಸಿದ್ದರು. ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 119 ರನ್ ಗಳಿಸಿದ್ದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ರನ್‌ಗಳಿಂದ ಶತಕ ವಂಚಿತರಾದರು. ಎರಡನೇ ಇನ್ನಿಂಗ್ಸ್‌ನಲ್ಲಿ ವಿರಾಟ್ 96 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ 7 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 51 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 719 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿಯದ್ದು ಸರಿಸಾಟಿಯಿಲ್ಲದ ಟೆಸ್ಟ್ ವೃತ್ತಿ ವಿರಾಟ್ ಕೊಹ್ಲಿ ಅವರ ಟೆಸ್ಟ್ ವೃತ್ತಿಜೀವನವು ಅದ್ಭುತವಾಗಿದೆ. 99 ಟೆಸ್ಟ್‌ಗಳಲ್ಲಿ ವಿರಾಟ್ ಕೊಹ್ಲಿ 50ಕ್ಕೂ ಹೆಚ್ಚು ಸರಾಸರಿಯಲ್ಲಿ 7962 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಬ್ಯಾಟ್‌ನಿಂದ 27 ಶತಕಗಳು ಬಂದಿವೆ. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 7 ಶತಕ ಸಿಡಿಸಿದ್ದಾರೆ. ಅವರು ಇಂಗ್ಲೆಂಡ್ ಮತ್ತು ಶ್ರೀಲಂಕಾ ವಿರುದ್ಧ ತಲಾ 5 ಶತಕಗಳನ್ನು ಗಳಿಸಿದ್ದಾರೆ. ಬಲಿಷ್ಠ ಬೌಲಿಂಗ್ ಲೈನ್ ಅಪ್ ವಿರುದ್ಧ ವಿರಾಟ್ ಕೊಹ್ಲಿ ಅವರ ಬ್ಯಾಟ್ ರನ್​ಗಳನ್ನು ಸುರಿಸುತ್ತಿರುವುದು ಸ್ಪಷ್ಟವಾಗಿದೆ. 100ನೇ ಟೆಸ್ಟ್ ಪಂದ್ಯದಲ್ಲೂ ವಿರಾಟ್ ಕೊಹ್ಲಿಯಿಂದ ಇದೇ ರೀತಿಯ ಪ್ರದರ್ಶನ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:Rohit Sharma: ಟೀಂ ಇಂಡಿಯಾ ಜೆರ್ಸಿ ಬಣ್ಣದ ಐಷರಾಮಿ ಕಾರು ಖರೀದಿಸಿದ ರೋಹಿತ್; ಬೆಲೆ ಕೇಳಿದ್ರೆ ಪಕ್ಕ ಶಾಕ್ ಆಗ್ತೀರಾ?

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ