AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕ್ರಿಕೆಟ್ ದೇವರ ಶ್ರೇಷ್ಠ ದಾಖಲೆ ಮುರಿದ ರನ್ ಮಷಿನ್ ವಿರಾಟ್ ಕೊಹ್ಲಿ

Virat Kohli Achieves Double Milestone: ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಅದ್ಭುತ ಅರ್ಧಶತಕ ಗಳಿಸಿ ಎರಡು ದೊಡ್ಡ ಮೈಲುಗಲ್ಲುಗಳನ್ನು ಸಾಧಿಸಿದ್ದಾರೆ. ಏಷ್ಯಾದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16,000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಆಟಗಾರನೆಂಬ ದಾಖಲೆಬರೆದಿದ್ದು, ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧ 4000 ರನ್ ಗಳಿಸಿದ ಮೊದಲ ಭಾರತೀಯ ಆಟಗಾರನೂ ಎನಿಸಿಕೊಂಡಿದ್ದಾರೆ.

IND vs ENG: ಕ್ರಿಕೆಟ್ ದೇವರ ಶ್ರೇಷ್ಠ ದಾಖಲೆ ಮುರಿದ ರನ್ ಮಷಿನ್ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Follow us
ಪೃಥ್ವಿಶಂಕರ
|

Updated on: Feb 12, 2025 | 7:13 PM

ಕಳೆದ ಕೆಲವು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಕಿಂಗ್ ಕೊಹ್ಲಿಯ ಬ್ಯಾಟ್ ಕೊನೆಗೂ ಅಬ್ಬರಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಇನ್ನಿಂಗ್ಸ್ ಮೂಲಕ ವಿರಾಟ್ ಕೊಹ್ಲಿ ಇಬ್ಬರು ದಿಗ್ಗಜರ ದಾಖಲೆಯನ್ನು ಸಹ ಮುರಿದಿದ್ದಾರೆ. ಆಂಗ್ಲರ ವಿರುದ್ಧ ಅರ್ಧಶತಕದ ಇನ್ನಿಂಗ್ಸ್ ಆಡಿದ ವಿರಾಟ್ ಏಷ್ಯಾದಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 16 ಸಾವಿರ ಅಥವಾ ಅದಕ್ಕಿಂತ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಹಾಗೆಯೇ ಇಂಗ್ಲೆಂಡ್ ವಿರುದ್ಧ ನಾಲ್ಕು ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಏಷ್ಯಾದಲ್ಲಿ 16,000 ರನ್

ಇಂಗ್ಲೆಂಡ್ ವಿರುದ್ಧ ಅರ್ಧಶತಕ ಗಳಿಸುವ ಮೂಲಕ ಮತ್ತು ಏಷ್ಯಾದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16,000 ರನ್‌ಗಳನ್ನು ಪೂರ್ಣಗೊಳಿಸುವ ಮೂಲಕ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಮುರಿದಿದ್ದಾರೆ. ವಾಸ್ತವವಾಗಿ ಸಚಿನ್ ತೆಂಡೂಲ್ಕರ್ ಏಷ್ಯಾದಲ್ಲಿ 353 ಇನ್ನಿಂಗ್ಸ್‌ಗಳಲ್ಲಿ 16 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದರೆ, ವಿರಾಟ್ ಕೊಹ್ಲಿ ತಮ್ಮ 340ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಇಬ್ಬರ ನಂತರದ ಸ್ಥಾನದಲ್ಲಿರುವ ಶ್ರೀಲಂಕಾದ ಕುಮಾರ್ ಸಂಗಕ್ಕಾರ 360 ಇನ್ನಿಂಗ್ಸ್‌ಗಳಲ್ಲಿ ಹಾಗೂ ಮಹೇಲ ಜಯವರ್ಧನೆ 401 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆಯನ್ನು ಮಾಡಿದ್ದರು.

ಇಂಗ್ಲೆಂಡ್ ವಿರುದ್ಧ 4000 ರನ್

ಇದು ಮಾತ್ರವಲ್ಲದೆ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ನಾಲ್ಕು ಸಾವಿರ ಅಂತರರಾಷ್ಟ್ರೀಯ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ 87ನೇ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗೆ ವಿರಾಟ್ ಇಂಗ್ಲೆಂಡ್ ವಿರುದ್ಧ 41.23 ಸರಾಸರಿಯಲ್ಲಿ 8 ಶತಕ ಮತ್ತು 32 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ.

451 ದಿನಗಳ ನಂತರ ಅರ್ಧಶತಕ

ರೋಹಿತ್ ಶರ್ಮಾ ಔಟಾದ ನಂತರ ಎರಡನೇ ಓವರ್​ನಲ್ಲೇ ಬ್ಯಾಟಿಂಗ್​ಗೆ ಬಂದ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದ ಬಳಿಕ ವಿಕೆಟ್ ಒಪ್ಪಿಸಿದರು. ಈ ಮೂಲಕ 50 ಓವರ್‌ಗಳ ಸ್ವರೂಪದಲ್ಲಿ ಕೊಹ್ಲಿ 451 ದಿನಗಳ ನಂತರ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 55 ಎಸೆತಗಳನ್ನು ಎದುರಿಸಿದ ಕೊಹ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 52 ರನ್ ಕಲೆಹಾಕಿ ಇಂಗ್ಲೆಂಡ್​ನ ಸ್ಟಾರ್ ಸ್ಪಿನ್ನರ್ ಆದಿಲ್ ರಶೀದ್​ಗೆ ಮತ್ತೊಮ್ಮೆ ಬಲಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?