ಕ್ಯಾಚ್ ಕಿಂಗ್ ಕೊಹ್ಲಿ; ವಿರಾಟ್ ಹೆಸರಲ್ಲಿ ಮತ್ತೊಂದು ದಾಖಲೆ! ಟಾಪ್ 10ರಲ್ಲಿ ಇಬ್ಬರೇ ಭಾರತೀಯ ಆಟಗಾರರು

Virat Kohli: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ದಾಖಲೆಯನ್ನು ನಿರ್ಮಿಸಿದ್ದಾರೆ.

ಕ್ಯಾಚ್ ಕಿಂಗ್ ಕೊಹ್ಲಿ; ವಿರಾಟ್ ಹೆಸರಲ್ಲಿ ಮತ್ತೊಂದು ದಾಖಲೆ! ಟಾಪ್ 10ರಲ್ಲಿ ಇಬ್ಬರೇ ಭಾರತೀಯ ಆಟಗಾರರು
virat kohli
Follow us
TV9 Web
| Updated By: ಪೃಥ್ವಿಶಂಕರ

Updated on:Dec 18, 2022 | 12:27 PM

ಭಾರತ ಮತ್ತು ಬಾಂಗ್ಲಾದೇಶ (India vs Bangladesh) ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಸದ್ಯ ಎಂಟನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಝಾಕಿರ್ ಹಸನ್ (Zakir Hasan) ಕ್ಯಾಚ್ ಹಿಡಿಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ಹೆಸರಿನಲ್ಲಿ 291 ಕ್ಯಾಚ್‌ಗಳು ದಾಖಲಾಗಿವೆ. ಕೊಹ್ಲಿ 482 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 572 ಇನ್ನಿಂಗ್ಸ್‌ಗಳಲ್ಲಿ ಈ ಕ್ಯಾಚ್‌ಗಳನ್ನು ಪಡೆದಿದ್ದಾರೆ.

2. ಟಾಪ್-10ರಲ್ಲಿ ಇಬ್ಬರು ಭಾರತೀಯ ಆಟಗಾರರು

ವಿರಾಟ್ ಕೊಹ್ಲಿ ಸೇರಿದಂತೆ ಇಬ್ಬರು ಆಟಗಾರರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಟಾಪ್-10 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಕೊಹ್ಲಿ ಜೊತೆಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ಮತ್ತು ಪ್ರಸ್ತುತ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಸ್ಥಾನ ಪಡೆದಿದ್ದಾರೆ. ಟಾಪ್-10 ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಐದನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 8ನೇ ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 509 ಪಂದ್ಯಗಳಲ್ಲಿ 571 ಇನ್ನಿಂಗ್ಸ್‌ಗಳಲ್ಲಿ 334 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಇದರಲ್ಲಿ ಪ್ರತಿ ಇನ್ನಿಂಗ್ಸ್‌ಗೆ ಅವರ ಕ್ಯಾಚ್ ಶೇಕಡಾ 0.58 ಆಗಿದೆ. ಕೊಹ್ಲಿ 572 ಇನ್ನಿಂಗ್ಸ್‌ಗಳಲ್ಲಿ 291 ಕ್ಯಾಚ್‌ಗಳನ್ನು ಪಡೆದಿದ್ದಾರೆ.

IND vs SL: ಹಾರ್ದಿಕ್ ನಾಯಕ; ಕೊಹ್ಲಿ, ರೋಹಿತ್ ಔಟ್: ಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ

3. ಇದು ಟಾಪ್ 10 ಪಟ್ಟಿ.

  1. 1. ಮಹೇಲಾ ಜಯವರ್ಧನೆ (ಶ್ರೀಲಂಕಾ) – 652 ಅಂತಾರಾಷ್ಟ್ರೀಯ ಪಂದ್ಯಗಳು, 768 ಇನ್ನಿಂಗ್ಸ್ – 440 ಕ್ಯಾಚ್‌ಗಳು.
  2. 2. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 560 ಅಂತಾರಾಷ್ಟ್ರೀಯ ಪಂದ್ಯಗಳು, 717 ಇನ್ನಿಂಗ್ಸ್ – 364 ಕ್ಯಾಚ್‌ಗಳು.
  3. 3. ರಾಸ್ ಟೇಲರ್ (ನ್ಯೂಜಿಲೆಂಡ್) – 450 ಅಂತಾರಾಷ್ಟ್ರೀಯ ಪಂದ್ಯಗಳು, 546 ಇನ್ನಿಂಗ್ಸ್ – 351 ಕ್ಯಾಚ್‌ಗಳು.
  4. 4. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) – 519 ಅಂತರಾಷ್ಟ್ರೀಯ ಪಂದ್ಯಗಳು, 664 ಇನ್ನಿಂಗ್ಸ್ – 338 ಕ್ಯಾಚ್‌ಗಳು.
  5. 5. ರಾಹುಲ್ ದ್ರಾವಿಡ್ (ಭಾರತ) – 509 ಅಂತಾರಾಷ್ಟ್ರೀಯ ಪಂದ್ಯಗಳು, 571 ಇನ್ನಿಂಗ್ಸ್ – 334 ಕ್ಯಾಚ್‌ಗಳು.
  6. 6. ಸ್ಟೀಫನ್ ಫ್ಲೆಮಿಂಗ್ (ನ್ಯೂಜಿಲೆಂಡ್) – 396 ಅಂತರಾಷ್ಟ್ರೀಯ ಪಂದ್ಯಗಳು, 480 ಇನ್ನಿಂಗ್ಸ್ – 306 ಕ್ಯಾಚ್‌ಗಳು.
  7. 7. ಗ್ರೇಮ್ ಸ್ಮಿತ್ (ದಕ್ಷಿಣ ಆಫ್ರಿಕಾ) – 347 ಅಂತಾರಾಷ್ಟ್ರೀಯ ಪಂದ್ಯಗಳು, 454 ಇನ್ನಿಂಗ್ಸ್ – 292 ಕ್ಯಾಚ್‌ಗಳು.
  8. 8. ವಿರಾಟ್ ಕೊಹ್ಲಿ (ಭಾರತ) – 482 ಅಂತರಾಷ್ಟ್ರೀಯ ಪಂದ್ಯಗಳು, 572 ಇನ್ನಿಂಗ್ಸ್ – ಇದುವರೆಗೆ 291 ಕ್ಯಾಚ್‌ಗಳು*
  9. 9. ಮಾರ್ಕ್ ವಾ (ಆಸ್ಟ್ರೇಲಿಯಾ) – 372 ಅಂತಾರಾಷ್ಟ್ರೀಯ ಪಂದ್ಯಗಳು, 488 ಇನ್ನಿಂಗ್ಸ್ – 289 ಕ್ಯಾಚ್‌ಗಳು.
  10. 10. ಬ್ರಿಯಾನ್ ಲಾರಾ (ವೆಸ್ಟ್ ಇಂಡೀಸ್) – 430 ಅಂತಾರಾಷ್ಟ್ರೀಯ ಪಂದ್ಯಗಳು, 537 ಇನ್ನಿಂಗ್ಸ್ – 284 ಕ್ಯಾಚ್‌ಗಳು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Sun, 18 December 22

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ