ಭಾರತ ಮತ್ತು ಬಾಂಗ್ಲಾದೇಶ (India vs Bangladesh) ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಸದ್ಯ ಎಂಟನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಝಾಕಿರ್ ಹಸನ್ (Zakir Hasan) ಕ್ಯಾಚ್ ಹಿಡಿಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ಹೆಸರಿನಲ್ಲಿ 291 ಕ್ಯಾಚ್‌ಗಳು ದಾಖಲಾಗಿವೆ. ಕೊಹ್ಲಿ 482 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 572 ಇನ್ನಿಂಗ್ಸ್‌ಗಳಲ್ಲಿ ಈ ಕ್ಯಾಚ್‌ಗಳನ್ನು ಪಡೆದಿದ್ದಾರೆ.
2. ಟಾಪ್-10ರಲ್ಲಿ ಇಬ್ಬರು ಭಾರತೀಯ ಆಟಗಾರರು
ವಿರಾಟ್ ಕೊಹ್ಲಿ ಸೇರಿದಂತೆ ಇಬ್ಬರು ಆಟಗಾರರು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಟಾಪ್-10 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಕೊಹ್ಲಿ ಜೊತೆಗೆ ಭಾರತದ ಮಾಜಿ ಬ್ಯಾಟ್ಸ್‌ಮನ್ ಮತ್ತು ಪ್ರಸ್ತುತ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ಸ್ಥಾನ ಪಡೆದಿದ್ದಾರೆ. ಟಾಪ್-10 ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಐದನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ 8ನೇ ಸ್ಥಾನದಲ್ಲಿದ್ದಾರೆ. ರಾಹುಲ್ ದ್ರಾವಿಡ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 509 ಪಂದ್ಯಗಳಲ್ಲಿ 571 ಇನ್ನಿಂಗ್ಸ್‌ಗಳಲ್ಲಿ 334 ಕ್ಯಾಚ್‌ಗಳನ್ನು ಪಡೆದಿದ್ದಾರೆ. ಇದರಲ್ಲಿ ಪ್ರತಿ ಇನ್ನಿಂಗ್ಸ್‌ಗೆ ಅವರ ಕ್ಯಾಚ್ ಶೇಕಡಾ 0.58 ಆಗಿದೆ. ಕೊಹ್ಲಿ 572 ಇನ್ನಿಂಗ್ಸ್‌ಗಳಲ್ಲಿ 291 ಕ್ಯಾಚ್‌ಗಳನ್ನು ಪಡೆದಿದ್ದಾರೆ.
IND vs SL: ಹಾರ್ದಿಕ್ ನಾಯಕ; ಕೊಹ್ಲಿ, ರೋಹಿತ್ ಔಟ್: ಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
3. ಇದು ಟಾಪ್ 10 ಪಟ್ಟಿ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:27 pm, Sun, 18 December 22