ರಣಜಿ ಪಂದ್ಯಗಳಿಗೆ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅಲಭ್ಯ

Virat Kohli and KL Rahul: ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಬಾರಿಯ ರಣಜಿ ಟೂರ್ನಿಯಲ್ಲೂ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಪ್ರಮುಖ ಸ್ಪೋರ್ಟ್ಸ್​ ವೆಬ್​ಸೈಟ್ ವರದಿ ಪ್ರಕಾರ, ಈ ಇಬ್ಬರು ಆಟಗಾರರು ಫೆಬ್ರವರಿ 6 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮತ್ತೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ರಣಜಿ ಪಂದ್ಯಗಳಿಗೆ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅಲಭ್ಯ
Virat Kohli - Kl RahulImage Credit source: Gettyimage
Follow us
ಝಾಹಿರ್ ಯೂಸುಫ್
|

Updated on: Jan 18, 2025 | 12:05 PM

ಜನವರಿ 23 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳಿಗೆ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ. ಟೀಮ್ ಇಂಡಿಯಾ ಆಟಗಾರರು ದೇಶೀಯ ಟೂರ್ನಿ ಆಡಬೇಕೆಂಬ ಬಿಸಿಸಿಐನ ಕಟ್ಟಪ್ಪಣೆಯ ಹೊರತಾಗಿಯೂ ಈ ಇಬ್ಬರು ಹೊರಗುಳಿಯಲು ಮುಖ್ಯ ಕಾರಣ ಗಾಯದ ಸಮಸ್ಯೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿ ಕುತ್ತಿಗೆ ನೋವಿಗೆ ತುತ್ತಾಗಿದ್ದರು. ಈ ನೋವಿನಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅಲ್ಲದೆ ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ರಣಜಿ ಟೂರ್ನಿಯ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಇನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಕೆಎಲ್ ರಾಹುಲ್ ಮೊಣಕೈಗೆ ಗಾಯವಾಗಿತ್ತು. ಈ ಗಾಯವು ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ರಣಜಿ ಟೂರ್ನಿಯಿಂದ ಹೊರಗುಳಿಯುವುದಾಗಿ ರಾಹುಲ್ ಬಿಸಿಸಿಐಗೆ ತಿಳಿಸಿದೆ. ಇದೇ ಕಾರಣದಿಂದಾಗಿ ಅವರು ವಿಜಯ ಹಝಾರೆ ಟೂರ್ನಿಯಿಂದಲೂ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ವೇಳೆ ವಿರಾಟ್ ಕೊಹ್ಲಿ ಸಂಪೂರ್ಣ ಫಿಟ್​ ಆಗಿದ್ದ ಅವರು 12 ವರ್ಷಗಳ ಬಳಿಕ ಮತ್ತೆ ರಣಜಿ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅಂದರೆ ಕಿಂಗ್ ಕೊಹ್ಲಿ ದೆಹಲಿ ಪರ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದು 2012 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾದ ಖಾಯಂ ಸದಸ್ಯರಾದ ಕೊಹ್ಲಿ ಮತ್ತೆ ದೇಶೀಯ ಟೂರ್ನಿಯತ್ತ ಮುಖ ಮಾಡಿಲ್ಲ ಎಂಬುದೇ ಅಚ್ಚರಿ.

ಇನ್ನು ಕೆಎಲ್ ರಾಹುಲ್ ಕೂಡ ಕರ್ನಾಟಕ ಪರ ರಣಜಿ ಪಂದ್ಯವಾಡಿ 4 ವರ್ಷಗಳೇ ಕಳೆದಿವೆ. ಇತ್ತ ಸ್ಟಾರ್ ಆಟಗಾರರು ದೇಶೀಯ ಟೂರ್ನಿಯಿಂದ ವಿಮುಖವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಎಲ್ಲಾ ಆಟಗಾರರು ರಣಜಿ ಟೂರ್ನಿ ಆಡುವಂತೆ ಸೂಚಿಸಿದೆ.

ಈ ಸೂಚನೆ ಬೆನ್ನಲ್ಲೇ ರಿಷಭ್ ಪಂತ್, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಸೇರಿದಂತೆ ಟೀಮ್ ಇಂಡಿಯಾದ ಕೆಲ ಆಟಗಾರರು ಈ ಬಾರಿಯ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಮತ್ತೊಂದೆಡೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ರಣಜಿ ಟೂರ್ನಿ ಆಡಲಿದ್ದಾರಾ ಎಂಬುದೇ ಕುತೂಹಲ. ಏಕೆಂದರೆ ಜನವರಿ 23 ರಿಂದ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳು ಶುರುವಾಗಲಿದ್ದು, ಈ ವೇಳೆ ರೋಹಿತ್ ಶರ್ಮಾ ಫ್ರೀ ಆಗಿ ಇರಲಿದ್ದಾರೆ.

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ಅಂದರೆ ಭಾರತ ಟಿ20 ತಂಡದಿಂದ ಹೊರಗುಳಿದಿರುವ ಅವರು ಫೆಬ್ರವರಿ 6 ರ ತನಕ ಬಿಡುವಿನಲ್ಲಿದ್ದಾರೆ. ಈ ಬಿಡುವಿನ ವೇಳೆ ರೋಹಿತ್ ಶರ್ಮಾ ಮುಂಬೈ ಪರ ರಣಜಿ ಪಂದ್ಯವಾಡಲಿದ್ದಾರಾ ಎಂಬುದೇ ಈಗ ಕುತೂಹಲ.

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್