ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರಿಗೆ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೊಳ್ಳುವಂತೆ ಬಿಸಿಸಿಐ ಸೂಚಿಸಿದೆ. ಅದರಂತೆ ಮುಂಬರುವ ದೇಶೀಯ ಟೂರ್ನಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್ಗಳಾದ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್, ಸೂರ್ಯಕುಮಾರ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಅವರಿಗೆ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸುವಂತೆ ಬಿಸಿಸಿಐ ತಿಳಿಸಿದೆ.
ಇನ್ನು ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯಲ್ಲೂ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವಂತೆ ಕೇಳಿಕೊಳ್ಳಲಾಗಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಆಟಗಾರರು ದುಲೀಪ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಸೆಪ್ಟೆಂಬರ್ 5 ರಿಂದ ಆರು ತಂಡಗಳ ನಡುವಣ ದುಲೀಪ್ ಟ್ರೋಫಿ ಶುರುವಾಗಲಿದ್ದು, ಸೆಪ್ಟೆಂಬರ್ 24 ರಂದು ಕೊನೆಗೊಳ್ಳಲಿದೆ. ಅತ್ತ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯ ಶುರುವಾಗುವುದು ಸೆಪ್ಟೆಂಬರ್ 19 ರಿಂದ. ಹೀಗಾಗಿ ಭಾರತೀಯ ಆಟಗಾರರು ದುಲೀಪ್ ಟ್ರೋಫಿಯ 2ನೇ ಪಂದ್ಯದ ವೇಳೆ ಕಣಕ್ಕಿಳಿಯುವ ಸಾಧ್ಯತೆಯಿದೆ.
ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ. ಹಾಗೆಯೇ ಈ ಟೂರ್ನಿಯಲ್ಲಿ ದೇಶದ ಆರು ವಲಯಗಳ ತಂಡಗಳು ಕಣಕ್ಕಿಳಿಯುತ್ತವೆ. ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳು ಈ ಕೆಳಗಿನಂತಿವೆ…
ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ. ದಕ್ಷಿಣ ವಲಯ ತಂಡದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಹೈದರಾಬಾದ್, ಕೇರಳ, ಪಾಂಡಿಚೇರಿ, ತಮಿಳುನಾಡು ರಾಜ್ಯಗಳ ಆಟಗಾರರು ಕಾಣಿಸಿಕೊಳ್ಳುತ್ತಾರೆ.
ಇದನ್ನೂ ಓದಿ: IPL 2025: ಡೆಲ್ಲಿ ಕ್ಯಾಪಿಟಲ್ಸ್ ತೊರೆಯುತ್ತಾರಾ ರಿಷಭ್ ಪಂತ್: ಸ್ಪಷ್ಟನೆ ನೀಡಿದ ಸೌರವ್ ಗಂಗೂಲಿ
ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಗೂ ಮುನ್ನ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ಮೂಲಕ ತಯಾರಿ ನಡೆಸಲು ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚಿಸಿದೆ. ಹೀಗಾಗಿಯೇ ಈ ಬಾರಿಯ ದುಲೀಪ್ ಟ್ರೋಫಿಯು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ.
Published On - 10:30 am, Mon, 12 August 24