2024ರ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ- ರೋಹಿತ್ ಆಡಬೇಕು ಎಂದ ಗಂಭೀರ್

|

Updated on: Nov 23, 2023 | 6:03 PM

T20 World Cup 2024: ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಪ್ರದರ್ಶನವನ್ನು ನೋಡಿದ ನಂತರ, ಅವರು ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವ ಬಗ್ಗೆ ಮಾತನಾಡಿದ್ದಾರೆ. ರೋಹಿತ್ ಶರ್ಮಾ ಅವರ ನಿರ್ಭೀತ ಬ್ಯಾಟಿಂಗ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಟಿ20 ವಿಶ್ವಕಪ್ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾಗೆ ನೀಡಬೇಕು ಎಂಬ ಚರ್ಚೆ ನಡೆಯುತ್ತಿದೆ.

2024ರ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ- ರೋಹಿತ್ ಆಡಬೇಕು ಎಂದ ಗಂಭೀರ್
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಗೌತಮ್ ಗಂಭೀರ್
Follow us on

2023ರ ಏಕದಿನ ವಿಶ್ವಕಪ್ (ICC World Cup 2023) ಬಳಿಕ ಇದೀಗ ಟೀಂ ಇಂಡಿಯಾ 2024ರ ಟಿ20 ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ಮೂಲಕ ಐಸಿಸಿ (ICC) ಕಪ್ ಬರ ನೀಗಿಸಲು ಟೀಂ ಇಂಡಿಯಾಕ್ಕೆ ಕೆಲವೇ ತಿಂಗಳಲ್ಲಿ ಮತ್ತೊಂದು ಅವಕಾಶ ಸಿಗಲಿದೆ. ಆದರೆ ಈ ಮಧ್ಯೆ ಭಾರತ ತಂಡದ ನಿಯಮಿತ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ ಹಿಂದೆ ಸರಿಯುವ ಯೋಚನೆಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪರ ವಿರೋಧದ ಚರ್ಚೆಗಳು ಸಹ ಆರಂಭವಾಗಿವೆ. ಕೆಲವರು ಭವಿಷ್ಯದ ಟೀಂ ಇಂಡಿಯಾ ಕಟ್ಟುವ ಸಲುವಾಗಿ ರೋಹಿತ್ ಅವರ ನಿರ್ಧಾರ ಸರಿಯಾಗಿದೆ ಎಂದಾದರೆ. ಇನ್ನು ಕೆಲವರು ರೋಹಿತ್ ಮುಂದಿನ ಟಿ20 ವಿಶ್ವಕಪ್ (T20 World Cup 2024) ಆಡಿದ ಬಳಿಕ ಈ ನಿರ್ಧಾರಕ್ಕೆ ಬರಲಿ ಎನ್ನುತ್ತಿದ್ದಾರೆ. ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir), ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಿ20 ತಂಡದಲ್ಲಿ ಕಾಣಿಸಿಕೊಂಡ ಕೊಹ್ಲಿ- ರೋಹಿತ್

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 2022 ರ ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಈ ಚುಟುಕು ಮಾದರಿಯಲ್ಲಿ ಪಂದ್ಯವನ್ನು ಆಡಿದ್ದರು. ಅಂದಿನಿಂದ ಇಬ್ಬರೂ ಆಟಗಾರರು ಒಂದೇ ಒಂದು ಟಿ20 ಪಂದ್ಯವನ್ನು ಆಡಿಲ್ಲ. ಹೀಗಾಗಿ ಟಿ20 ಕ್ರಿಕೆಟ್ ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ಅವರಿಗೆ ವಹಿಸಲಾಗಿದೆ. ಆದರೆ ಬಿಸಿಸಿಐ ಅಧಿಕೃತವಾಗಿ ಟಿ20 ತಂಡದ ಖಾಯಂ ನಾಯಕತ್ವವನ್ನು ಹಾರ್ದಿಕ್​ಗೆ ಹಸ್ತಾಂತರಿಸಿಲ್ಲ. ಅಲ್ಲದೆ ರೋಹಿತ್ ಶರ್ಮಾ ಕೂಡ ಟಿ20 ಆಡುವುದಿಲ್ಲ ಎಂದು ಎಲ್ಲೂ ಹೇಳಿಲ್ಲ.

ಲಕ್ನೋ ತಂಡವನ್ನು ತೊರೆದು ತಾನು ಚಾಂಪಿಯನ್‌ ಮಾಡಿದ್ದ ತಂಡ ಸೇರಿಕೊಂಡ ಗಂಭೀರ್..!

ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಪ್ರದರ್ಶನವನ್ನು ನೋಡಿದ ನಂತರ, ಅವರು ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವ ಬಗ್ಗೆ ಮಾತನಾಡಿದ್ದಾರೆ. ರೋಹಿತ್ ಶರ್ಮಾ ಅವರ ನಿರ್ಭೀತ ಬ್ಯಾಟಿಂಗ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಟಿ20 ವಿಶ್ವಕಪ್ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾಗೆ ನೀಡಬೇಕು ಎಂಬ ಚರ್ಚೆ ನಡೆಯುತ್ತಿದೆ.

ರೋಹಿತ್ ನಾಯಕತ್ವವಹಿಸಬೇಕು

ಈ ಬಗ್ಗೆ ಮಾತನಾಡಿರುವ ಗಂಭೀರ್, ‘ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರನ್ನೂ ಟಿ20 ವಿಶ್ವಕಪ್ ತಂಡಕ್ಕೆ ಸೇರಿಸಿಕೊಳ್ಳಬೇಕು. ಅದರಲ್ಲಿ ಯಾವುದೇ ಸಂಶಯವಿಲ್ಲ. ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನು ಮುನ್ನಡೆಸುವುದನ್ನು ನೋಡಲು ನಾನು ಬಯಸುತ್ತೇನೆ. ನನ್ನ ಆದ್ಯತೆ ಹಾರ್ದಿಕ್ ಪಾಂಡ್ಯ ಬದಲಿಗೆ ರೋಹಿತ್ ಶರ್ಮಾ ಆಗಿದ್ದಾರೆ. ಹಾಗಾಗಿ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಅವರನ್ನು ಕೇವಲ ಬ್ಯಾಟರ್ ಎಂದು ಪರಿಗಣಿಸಬೇಡಿ. ಟಿ20 ವಿಶ್ವಕಪ್ ತಂಡದಲ್ಲಿ ವಿರಾಟ್ ಕೊಹ್ಲಿಗೂ ಅವಕಾಶ ಸಿಗಬೇಕು’ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.

ವಾಸಿಂ ಅಕ್ರಮ್ ಹೇಳಿದ್ದೇನು?

ಮತ್ತೊಂದೆಡೆ, ಟಿ20 ವಿಶ್ವಕಪ್ ತಂಡದಲ್ಲಿ ವಿರಾಟ್ ಮತ್ತು ರೋಹಿತ್ ಇರಬೇಕು ಎಂಬ ಅಭಿಪ್ರಾಯವನ್ನೂ ವಾಸೀಂ ಅಕ್ರಮ್ ವ್ಯಕ್ತಪಡಿಸಿದ್ದಾರೆ. ಟಿ20 ವಿಶ್ವಕಪ್‌ಗೆ ಇನ್ನು ಆರು ತಿಂಗಳು ಮಾತ್ರ ಬಾಕಿ ಇದೆ. ಖಂಡಿತಾ ವಿರಾಟ್ ಮತ್ತು ರೋಹಿತ್ ಟಿ20 ತಂಡದಲ್ಲಿರಬೇಕು. ಅವರು ಪ್ರಮುಖ ಆಟಗಾರರು. ಅವರ ಅನುಭವ ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ಯುವ ಆಟಗಾರರ ನಂಬಿಕೆಯ ಮೇಲೆ ತಂಡ ಕಟ್ಟಲು ಸಾಧ್ಯವಿಲ್ಲ ಎಂದು ವಾಸಿಂ ಅಕ್ರಂ ಹೇಳಿದ್ದಾರೆ.

Published On - 6:00 pm, Thu, 23 November 23