AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ಚೆನ್ನೈಗೆ ಆಗಮಿಸಿದ ಟೀಮ್ ಇಂಡಿಯಾ: ಬ್ಲಾಕ್ ಶರ್ಟ್​ನಲ್ಲಿರುವ ಕೊಹ್ಲಿಯ ಫೋಟೋ ವೈರಲ್

India vs Australia 3rd ODI: ಸೋಮವಾರ ಸಂಜೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಸೇರಿದಂತೆ ಟೀಮ್ ಇಂಡಿಯಾದ ಎಲ್ಲ ಆಟಗಾರರು ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿ ಹೋಟೆಲ್​ಗೆ ನಿರ್ಗಮಿಸಿದರು.

IND vs AUS 3rd ODI: ಚೆನ್ನೈಗೆ ಆಗಮಿಸಿದ ಟೀಮ್ ಇಂಡಿಯಾ: ಬ್ಲಾಕ್ ಶರ್ಟ್​ನಲ್ಲಿರುವ ಕೊಹ್ಲಿಯ ಫೋಟೋ ವೈರಲ್
Team India and Virat Kohli
Vinay Bhat
|

Updated on:Mar 21, 2023 | 7:51 AM

Share

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಏಕದಿನ ಸರಣಿ ರೋಚಕತೆ ಸೃಷ್ಟಿಸಿದೆ. ಪ್ರಥಮ ಪಂದ್ಯದಲ್ಲಿ ಭಾರತ ಗೆದ್ದರೆ ಭಾನುವಾರ ವಿಶಾಖಪಟ್ಟಣದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿ 1-1 ಅಂಕಗಳ ಅಂತರದಿಂದ ಸಮಬಲದಲ್ಲಿದೆ. ಹೀಗಾಗಿ ಅಂತಿಮ ತೃತೀಯ ಏಕದಿನ ಪಂದ್ಯ ನಿರ್ಣಾಯಕವಾಗಿದ್ದು ಗೆದ್ದ ತಂಡ ಟ್ರೋಫಿ ವಶಪಡಿಸಿಕೊಳ್ಳಲಿದೆ. ಟೀಮ್ ಇಂಡಿಯಾ (Team India) ಸರಣಿ ಕಳೆದುಕೊಂಡರೆ ತವರಿನಲ್ಲಿ ಭಾರೀ ಮುಖಭಂಗ ಅನುಭವಿಸಲಿದೆ. ಇತ್ತ ಟೆಸ್ಟ್ ಸರಣಿ ಸೋತಿರುವ ಕಾಂಗರೂ ಪಡೆಗೆ ಏಕದಿನ ಸರಣಿ ಬಹುಮುಖ್ಯವಾಗಿದೆ. ಇದೀಗ ಅಂತಿಮ ಕಾದಾಟಕ್ಕಾಗಿ ಟೀಮ್ ಇಂಡಿಯಾ ಚೆನ್ನೈ (Chennai) ತಲುಪಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ ಮಾರ್ಚ್ 22 ರಂದು ಚೆನ್ನೈನ ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಸೋಮವಾರ ಸಂಜೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಸೇರಿದಂತೆ ಟೀಮ್ ಇಂಡಿಯಾದ ಎಲ್ಲ ಆಟಗಾರರು ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿ ಹೋಟೆಲ್​ಗೆ ನಿರ್ಗಮಿಸಿದರು. ಇದರ ನಡುವೆ ವಿರಾಟ್ ಕೊಹ್ಲಿ ಏರ್​ಪೋರ್ಟ್​ಗೆ ಆಗಮಿಸಿದ ಫೋಟೋ ಸಖತ್ ವೈರಲ್ ಆಗುತ್ತಿದೆ. ಕಪ್ಪು ಬಣ್ಣದ ಶರ್ಟ್​ನಲ್ಲಿ ವಿರಾಟ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

ಇದನ್ನೂ ಓದಿ
Image
IPL: ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ 2ನೇ ತಂಡ ಆರ್​ಸಿಬಿ! ಯಾವ ತಂಡಕ್ಕೆ ಯಾವ ಸ್ಥಾನ? ಇಲ್ಲಿದೆ ವಿವರ
Image
WPL 2023: ವುಮೆನ್ಸ್ ಪ್ರೀಮಿಯರ್ ಲೀಗ್​ ಪ್ಲೇಆಫ್​ಗೆ 3 ತಂಡಗಳು ಎಂಟ್ರಿ
Image
IPL 2023: ಹೊಸ ಅವತಾರದಲ್ಲಿ ಐಪಿಎಲ್​ಗೆ ಶ್ರೀಶಾಂತ್ ಕಂಬ್ಯಾಕ್
Image
Sunil Narine: 7 ಓವರ್, 7 ಮೇಡನ್, 7 ವಿಕೆಟ್​: ಸುನಿಲ್ ನರೈನ್ ಮ್ಯಾಜಿಕ್..!

WPL 2023: ಯುಪಿ ವಾರಿಯರ್ಸ್​ಗೆ ಜಯ: ಪ್ಲೇಆಫ್​ನಿಂದ RCB ಔಟ್

ಪಂದ್ಯದ ಬಗ್ಗೆ ಮಾಹಿತಿ:

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯ ಮಾರ್ಚ್ 22 ರಂದು ನಡೆಯಲಿದೆ. ಇದನ್ನು ಚೆನ್ನೈನ ಎಂ ಚಿದಂಬರಂ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಬುಧವಾರ ಮಧ್ಯಾಹ್ನ 01:30 ಕ್ಕೆ ಪಂದ್ಯ ಆರಂಭವಾಗಲಿದೆ. ಒಂದು ಗಂಟೆಗೆ ಟಾಸ್ ನಡೆಯಲಿದೆ. ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಇರಲಿದೆ. ಅಂತೆಯೆ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ. ನೀವು tv9 Kannada.com ನಲ್ಲಿ ಪಂದ್ಯದ ಲೈವ್ ಅಪ್​ಡೇಟ್ ಓದಬಹುದಾಗಿದೆ.

ಎರಡನೇ ಏಕದಿನ ಪಂದ್ಯ ಹೇಗಿತ್ತು?:

ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ತೋರಿತು. ಮಿಚೆಲ್ ಸ್ಟಾರ್ಕ್ (5 ವಿಕೆಟ್) ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ 50 ರನ್​ಗು ಮುನ್ನವೇ ಅರ್ಧ ಬ್ಯಾಟರ್​ಗಳು ಪೆವಿಲಿಯನ್ ಸೇರಿಕೊಂಡರು. ರೋಹಿತ್ ಶರ್ಮಾ (13,) ಸೂರ್ಯ ಕುಮಾರ್​ ಯಾದವ್​ (0), ಕೆಎಲ್​ ರಾಹುಲ್​ (9), ಹಾರ್ದಿಕ್​ ಪಾಂಡ್ಯ (1), ಕೊಹ್ಲಿ (31), ಜಡೇಜಾ (16), ಅಕ್ಷರ್ ಪಟೇಲ್ (29) ಸೇರಿದಂತೆ ಯಾರುಕೂಡ ಹೆಚ್ಚುಹೊತ್ತು ಕ್ರಿಸ್​ನಲ್ಲಿ ನಿಲ್ಲಲಿಲ್ಲ. ಭಾರತ 26 ಓವರ್​ಗಳಲ್ಲಿ 117 ರನ್​ಗೆ ಸರ್ವಪತನ ಕಂಡಿತು. ಸುಲಭ ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಆರಂಭಿಕರಾದ ಟ್ರಾವಿಸ್ ಹೆಡ್ 51 ರನ್​ ಮತ್ತು ಮಿಚೆಲ್ ಮಾರ್ಷ್ 66 ರನ್​ ಗಳಸಿ 10 ವಿಕೆಟ್​ಗಳ ಅಮೋಘ ಗೆಲುವಿಗೆ ಕಾರಣರಾದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 am, Tue, 21 March 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?