
ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಏಕದಿನ ಸರಣಿ ರೋಚಕತೆ ಸೃಷ್ಟಿಸಿದೆ. ಪ್ರಥಮ ಪಂದ್ಯದಲ್ಲಿ ಭಾರತ ಗೆದ್ದರೆ ಭಾನುವಾರ ವಿಶಾಖಪಟ್ಟಣದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್ಗಳ ಅಮೋಘ ಗೆಲುವು ಕಂಡಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿ 1-1 ಅಂಕಗಳ ಅಂತರದಿಂದ ಸಮಬಲದಲ್ಲಿದೆ. ಹೀಗಾಗಿ ಅಂತಿಮ ತೃತೀಯ ಏಕದಿನ ಪಂದ್ಯ ನಿರ್ಣಾಯಕವಾಗಿದ್ದು ಗೆದ್ದ ತಂಡ ಟ್ರೋಫಿ ವಶಪಡಿಸಿಕೊಳ್ಳಲಿದೆ. ಟೀಮ್ ಇಂಡಿಯಾ (Team India) ಸರಣಿ ಕಳೆದುಕೊಂಡರೆ ತವರಿನಲ್ಲಿ ಭಾರೀ ಮುಖಭಂಗ ಅನುಭವಿಸಲಿದೆ. ಇತ್ತ ಟೆಸ್ಟ್ ಸರಣಿ ಸೋತಿರುವ ಕಾಂಗರೂ ಪಡೆಗೆ ಏಕದಿನ ಸರಣಿ ಬಹುಮುಖ್ಯವಾಗಿದೆ. ಇದೀಗ ಅಂತಿಮ ಕಾದಾಟಕ್ಕಾಗಿ ಟೀಮ್ ಇಂಡಿಯಾ ಚೆನ್ನೈ (Chennai) ತಲುಪಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಿರ್ಣಾಯಕ ಪಂದ್ಯ ಮಾರ್ಚ್ 22 ರಂದು ಚೆನ್ನೈನ ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಸೋಮವಾರ ಸಂಜೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಸೇರಿದಂತೆ ಟೀಮ್ ಇಂಡಿಯಾದ ಎಲ್ಲ ಆಟಗಾರರು ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿ ಹೋಟೆಲ್ಗೆ ನಿರ್ಗಮಿಸಿದರು. ಇದರ ನಡುವೆ ವಿರಾಟ್ ಕೊಹ್ಲಿ ಏರ್ಪೋರ್ಟ್ಗೆ ಆಗಮಿಸಿದ ಫೋಟೋ ಸಖತ್ ವೈರಲ್ ಆಗುತ್ತಿದೆ. ಕಪ್ಪು ಬಣ್ಣದ ಶರ್ಟ್ನಲ್ಲಿ ವಿರಾಟ್ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.
Indian Team at Chennai Airport❤️#rohitsharmma #viratkohli #Shubmangill #sky #klrahul #indvsaus pic.twitter.com/c8ecRwcAPy
— ft.wrogn18 (@Imlakshay_18) March 20, 2023
Virat Kohli arrives in Chennai ahead of the 3rd ODI against Australia. pic.twitter.com/b5CBxJKL4j
— Mufaddal Vohra (@mufaddal_vohra) March 20, 2023
WPL 2023: ಯುಪಿ ವಾರಿಯರ್ಸ್ಗೆ ಜಯ: ಪ್ಲೇಆಫ್ನಿಂದ RCB ಔಟ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯ ಮಾರ್ಚ್ 22 ರಂದು ನಡೆಯಲಿದೆ. ಇದನ್ನು ಚೆನ್ನೈನ ಎಂ ಚಿದಂಬರಂ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಬುಧವಾರ ಮಧ್ಯಾಹ್ನ 01:30 ಕ್ಕೆ ಪಂದ್ಯ ಆರಂಭವಾಗಲಿದೆ. ಒಂದು ಗಂಟೆಗೆ ಟಾಸ್ ನಡೆಯಲಿದೆ. ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಇರಲಿದೆ. ಅಂತೆಯೆ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ. ನೀವು tv9 Kannada.com ನಲ್ಲಿ ಪಂದ್ಯದ ಲೈವ್ ಅಪ್ಡೇಟ್ ಓದಬಹುದಾಗಿದೆ.
ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ತೋರಿತು. ಮಿಚೆಲ್ ಸ್ಟಾರ್ಕ್ (5 ವಿಕೆಟ್) ಬೌಲಿಂಗ್ ದಾಳಿಗೆ ತತ್ತರಿಸಿದ ಭಾರತ 50 ರನ್ಗು ಮುನ್ನವೇ ಅರ್ಧ ಬ್ಯಾಟರ್ಗಳು ಪೆವಿಲಿಯನ್ ಸೇರಿಕೊಂಡರು. ರೋಹಿತ್ ಶರ್ಮಾ (13,) ಸೂರ್ಯ ಕುಮಾರ್ ಯಾದವ್ (0), ಕೆಎಲ್ ರಾಹುಲ್ (9), ಹಾರ್ದಿಕ್ ಪಾಂಡ್ಯ (1), ಕೊಹ್ಲಿ (31), ಜಡೇಜಾ (16), ಅಕ್ಷರ್ ಪಟೇಲ್ (29) ಸೇರಿದಂತೆ ಯಾರುಕೂಡ ಹೆಚ್ಚುಹೊತ್ತು ಕ್ರಿಸ್ನಲ್ಲಿ ನಿಲ್ಲಲಿಲ್ಲ. ಭಾರತ 26 ಓವರ್ಗಳಲ್ಲಿ 117 ರನ್ಗೆ ಸರ್ವಪತನ ಕಂಡಿತು. ಸುಲಭ ಟಾರ್ಗೆಟ್ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಆರಂಭಿಕರಾದ ಟ್ರಾವಿಸ್ ಹೆಡ್ 51 ರನ್ ಮತ್ತು ಮಿಚೆಲ್ ಮಾರ್ಷ್ 66 ರನ್ ಗಳಸಿ 10 ವಿಕೆಟ್ಗಳ ಅಮೋಘ ಗೆಲುವಿಗೆ ಕಾರಣರಾದರು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:51 am, Tue, 21 March 23