
ಬೆಂಗಳೂರು (ಅ. 14): ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ನಂತರ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಇದೀಗ ಮತ್ತೆ ಟೀಮ್ ಇಂಡಿಯಾ ಸೇರಿಕೊಳ್ಲಲು ಸಜ್ಜಾಗಿದ್ದಾರೆ. ಚಾಂಪಿಯನ್ಸ್ ಟ್ರೋಫಿ ನಂತರ ಕೊಹ್ಲಿ ಟೀಮ್ ಇಂಡಿಯಾದಿಂದ ವಿರಾಮ ತೆಗೆದುಕೊಂಡಿದ್ದರು. ಐಪಿಎಲ್ 2025 ಮುಗಿದ ಕೂಡಲೇ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಇಂಗ್ಲೆಂಡ್‌ಗೆ ತೆರಳಿ ಅಲ್ಲಿ ದೀರ್ಘಕಾಲ ಇದ್ದರು. ಕೊಹ್ಲಿ ಈಗ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಟೀಮ್ ಇಂಡಿಯಾ ಸೇರಲಿದ್ದಾರೆ. ವಿರಾಟ್ ಕೊಹ್ಲಿ ಭಾರತಕ್ಕೆ ಕಾಲಿಟ್ಟಾಗ ಅವರನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದರು.
ವಿಮಾನ ನಿಲ್ದಾಣದಲ್ಲಿ, ಕೊಹ್ಲಿ ಕಪ್ಪು ಶರ್ಟ್ ಮತ್ತು ಬಿಳಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ವಿಮಾನ ನಿಲ್ದಾಣದಲ್ಲಿ ಅವರನ್ನು ನೋಡಿದ ಅಭಿಮಾನಿಗಳು ಖುಷಿಯಿಂದ ಜೈಕಾರ ಹಾಕಿದ್ದಾರೆ. ವಿರಾಟ್ ಕೊಹ್ಲಿ ಅವರ ವಿಮಾನ ನಿಲ್ದಾಣದ ಲುಕ್‌ನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಅಂದಹಾಗೆ ಕೊಹ್ಲಿ ಟೆಸ್ಟ್ ಮತ್ತು ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ, ಹೀಗಾಗಿ ಅವರು ಏಕದಿನ ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯುತ್ತಿದ್ದಾರೆ.
VIRAT KOHLI HAS ARRIVED IN DELHI.
– The GOAT is back. 🔥 [Sports Yaari] pic.twitter.com/7WrMofkMno
— Johns. (@CricCrazyJohns) October 14, 2025
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 19 ರಂದು ನಡೆಯಲಿದೆ. ಈ ಪ್ರವಾಸಕ್ಕೂ ಮುನ್ನ, ಟೀಮ್ ಇಂಡಿಯಾದ ಅನೇಕ ಆಟಗಾರರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರತರಾಗಿದ್ದರು. ಆದ್ದರಿಂದ, ಟೆಸ್ಟ್ ಸರಣಿಯಲ್ಲಿ ಆಡದ ಆಟಗಾರರು ಅಂದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಕೆಲ ಆಟಗಾರರು ಮೊದಲೇ ಆಸ್ಟ್ರೇಲಿಯಾಕ್ಕೆ ತೆರಳುತ್ತಾರೆ.
ನಾಚಿಕೆಗೇಡು… ಆತನನ್ನು ಬಿಟ್ಟು ಬಿಡಿ: ಗೌತಮ್ ಗಂಭೀರ್ ಗರಂ
ಎರಡನೇ ಬ್ಯಾಚ್‌ನಲ್ಲಿ, ಟೆಸ್ಟ್ ಸರಣಿಯಲ್ಲಿ ಆಡುತ್ತಿದ್ದ ಮತ್ತು ಏಕದಿನ ತಂಡದಲ್ಲಿ ಸ್ಥಾನ ಪಡೆದ ಆಟಗಾರರು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಈ ಪಟ್ಟಿಯಲ್ಲಿ ಶುಭ್ಮನ್ ಗಿಲ್, ಧ್ರುವ್ ಜುರೆಲ್, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಸಿರಾಜ್‌ರಂತಹ ಅನೇಕ ಆಟಗಾರರು ಸೇರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಜೊತೆಗೆ, ಟಿ20 ಪಂದ್ಯಗಳು ಸಹ ನಡೆಯಲಿವೆ.
ಏಕದಿನ ಸರಣಿ ವೇಳಾಪಟ್ಟಿ:
ಟಿ20 ಸರಣಿ ವೇಳಾಪಟ್ಟಿ:
ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತೀಯ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ