T20 World Cup 2022: ಟಿ20 ವಿಶ್ವಕಪ್​ಗೆ​ ಟೀಮ್ ಇಂಡಿಯಾ ಆರಂಭಿಕ ಜೋಡಿ ಫಿಕ್ಸ್​..!

Team India: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ.

T20 World Cup 2022: ಟಿ20 ವಿಶ್ವಕಪ್​ಗೆ​ ಟೀಮ್ ಇಂಡಿಯಾ ಆರಂಭಿಕ ಜೋಡಿ ಫಿಕ್ಸ್​..!
Rohit Sharma-Virat Kohli
TV9kannada Web Team

| Edited By: Zahir PY

Sep 19, 2022 | 11:02 AM

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ (Team India) ಆರಂಭಿಕ ಯಾರಾಗ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ನಾಯಕ ರೋಹಿತ್ ಶರ್ಮಾ (Rohit Sharma) ಉತ್ತರ ನೀಡಿದ್ದಾರೆ. ಆಸ್ಟ್ರೇಲಿಯಾ (India vs Australia) ವಿರುದ್ಧದ ಟಿ20 ಸರಣಿಗೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಟಿ20 ವಿಶ್ವಕಪ್​ನಲ್ಲಿ ನಾನು ಮತ್ತು ಕೆಎಲ್ ರಾಹುಲ್ (KL Rahul) ಆರಂಭಿಕರಾಗಿ ಆಡಲಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿಗೆ (Virat Kohli) ಓಪನರ್ ಆಗಿ ಬಡ್ತಿ ನೀಡಲಾಗುತ್ತದೆ ಎಂಬ ಚರ್ಚೆಗಳಿಗೆ ಟೀಮ್ ಇಂಡಿಯಾ ನಾಯಕ ಪೂರ್ಣ ವಿರಾಮ ಹಾಕಿದ್ದಾರೆ.

ಇದಾಗ್ಯೂ ತಂಡದಲ್ಲಿ 3ನೇ ಆರಂಭಿಕ ಆಟಗಾರನ ಆಯ್ಕೆಯಾಗಿ ವಿರಾಟ್ ಕೊಹ್ಲಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ. ಅಂದರೆ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಜೋಡಿ ಯಶಸ್ವಿಯಾಗದಿದ್ದರೆ, ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಬಹುದು.

ಇದನ್ನು ಖುದ್ದು ರೋಹಿತ್ ಶರ್ಮಾ ಅವರೇ ಖಚಿತಪಡಿಸಿದ್ದಾರೆ. ಅಂದರೆ 3ನೇ ಆರಂಭಿಕ ಆಟಗಾರನಾಗಿ ತಂಡದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ. ಅವರು ಕೂಡ ಕೆಲ ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಬಹುದು ಎಂದಿದ್ದಾರೆ. ಏಕೆಂದರೆ ಏಷ್ಯಾಕಪ್​ನ ಕೊನೆಯ ಪಂದ್ಯದಲ್ಲಿ ಕೊಹ್ಲಿಯ ಬ್ಯಾಟಿಂಗ್ ಅದ್ಭುತವಾಗಿತ್ತು. ಆದರೆ ಆರಂಭಿಕರಾಗಿ ಮೊದಲ ಆಯ್ಕೆ ಕೆಎಲ್ ರಾಹುಲ್ ಅವರನ್ನೇ ಪರಿಗಣಿಸುತ್ತೇವೆ. ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ನಾನು ಮತ್ತು ಕೆಎಲ್​ಆರ್​ ಇನಿಂಗ್ಸ್ ಆರಂಭಿಸುವುದು ಖಚಿತ ಎಂದಿದ್ದಾರೆ ರೋಹಿತ್ ಶರ್ಮಾ.

ಅಂದರೆ ಇಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಆಡುವುದು ಖಚಿತ. ಇದಾಗ್ಯೂ ಇವರಿಬ್ಬರಲ್ಲಿ ಒಬ್ಬರು ಫೇಲ್ ಆದರೆ, ವಿರಾಟ್ ಕೊಹ್ಲಿ ಆರಂಭಿಕನಾಗಿ ಆಡಬಹುದು. ಹೀಗಾಗಿಯೇ ರೋಹಿತ್ ಶರ್ಮಾ ಮೂರನೇ ಆರಂಭಿಕನ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಬಳಸಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಅದರಂತೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಮೂವರು ಆರಂಭಿಕರ ಪ್ಲ್ಯಾನ್​ನೊಂದಿಗೆ ಕಣಕ್ಕಿಳಿಯಲಿದೆ. ಏಕೆಂದರೆ ಇತ್ತೀಚೆಗೆ ಅಫ್ಘಾನಿಸ್ತಾನ್ ವಿರುದ್ದ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದು ಶತಕ ಬಾರಿಸಿ ಮಿಂಚಿದ್ದರು. ಹಾಗೆಯೇ ಈ ಹಿಂದೆ ಇಂಗ್ಲೆಂಡ್ ವಿರುದ್ಧ ಕೂಡ ಆರಂಭಿಕರಾಗಿ ಬ್ಯಾಟ್ ಬೀಸಿ ಯಶಸ್ಸು ಸಾಧಿಸಿದ್ದರು.

ಅಷ್ಟೇ ಅಲ್ಲದೆ 2016 ರಲ್ಲಿ ಆರ್​ಸಿಬಿ ಪರ ಆರಂಭಿಕರಾಗಿ ಆಡಿದ್ದ ಕೊಹ್ಲಿ 973 ರನ್​ ಬಾರಿಸಿ ದಾಖಲೆ ಬರೆದಿದ್ದರು. ಹೀಗಾಗಿಯೇ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಮತ್ತೆ ಆರಂಭಿಕರಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ಇದನ್ನೂ ಓದಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada