Virat Kohli: ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಶಾಕಿಂಗ್ ನ್ಯೂಸ್: ಬಿಸಿಸಿಐ ನಡೆಸಿದೆ ವಿಶೇಷ ಸಭೆ

ICC T20 World Cup: ವಿರಾಟ್ ಕೊಹ್ಲಿ ಅವರ ನಾಯಕತ್ವದ ಕುರಿತು ಬಿಸಿಸಿಐ ವಿಶೇಷ ಸಭೆ ನಡೆಸಿದೆ. ಸೀಮಿತ ಓವರ್ ಕ್ರಿಕೆಟ್​ಗೆ ಮತ್ತು ಟೆಸ್ಟ್ ಕ್ರಿಕೆಟ್​ಗೆ ಬೇರೆ ಬೇರೆ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ.

Virat Kohli: ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಶಾಕಿಂಗ್ ನ್ಯೂಸ್: ಬಿಸಿಸಿಐ ನಡೆಸಿದೆ ವಿಶೇಷ ಸಭೆ
Virat Kohli
Follow us
| Updated By: Vinay Bhat

Updated on: Sep 09, 2021 | 11:25 AM

ಐಸಿಸಿ ಟಿ-20 ವಿಶ್ವಕಪ್ (ICC T20 World Cup) ಮಹಾ ಟೂರ್ನಿಗೆ ಬುಧವಾರಷ್ಟೆ ಬಿಸಿಸಿಐ (BCCI) ಭಾರತ ತಂಡವನ್ನು ಪ್ರಕಟ ಮಾಡಿದೆ. ವಿರಾಟ್ ಕೊಹ್ಲಿ (Virat Kohli) ನಾಯಕನಾಗಿದ್ದರೆ, ರೋಹಿತ್ ಶರ್ಮಾ (Rohit Sharma) ಉಪ ನಾಯಕನ ಸ್ಥಾನದಲ್ಲಿದ್ದಾರೆ. ವಿಶೇಷವಾಗಿ ಎಂ ಎಸ್ ಧೋನಿ (MS Dhoni) ಅವರನ್ನು ಮೆಂಟರ್ ಆಗಿ ಆಯ್ಕೆ ಮಾಡಲಾಗಿದೆ. ಉಳಿದಂತೆ ಬಿಸಿಸಿಐ ಕೆಲ ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿದೆ. ಆರ್. ಅಶ್ವಿನ್ (R Ashwin) ನಾಲ್ಕು ವರ್ಷಗಳ ಬಳಿಕ ಟೀಮ್ ಇಂಡಿಯಾ (Team India) ಟಿ-20 ತಂಡಕ್ಕೆ ಆಯ್ಕೆಯಾಗಿದ್ದರೆ, ಅನುಭವಿ ಆರಂಭಿಕ ಶಿಖರ್ ಧವನ್, ಯುಜ್ವೇಂದ್ರ ಚಹಾಲ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಇದರ ನಡುವೆ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ವಿರಾಟ್ ಕೊಹ್ಲಿ ಅವರ ನಾಯಕತ್ವದ ಕುರಿತು ಬಿಸಿಸಿಐ ವಿಶೇಷ ಸಭೆ ನಡೆಸಿದೆ. ಹಿಂದಿ ಪತ್ರಿಕೆ ದೈನಿಕ್ ಜಾಗ್ರನ್ ಅವರ ಸುದ್ದಿಯ ಪ್ರಕಾರ, ಕಳೆದ ಜುಲೈನಲ್ಲಿ ಬಿಸಿಸಿಐ ಅಧಿಕಾರಿಗಳು ವಿಶೇಷ ಸಭೆ ನಡೆಸಿದ್ದಾರೆ. ಇದರಲ್ಲಿ ಸೀಮಿತ ಓವರ್ ಕ್ರಿಕೆಟ್​ಗೆ ಮತ್ತು ಟೆಸ್ಟ್ ಕ್ರಿಕೆಟ್​ಗೆ ಬೇರೆ ಬೇರೆ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಅಲ್ಲದೆ ವಿರಾಟ್ ಕೊಹ್ಲಿ ಅವರ ನಾಯಕತ್ವದ ಮುಂದುವರಿಕೆಯನ್ನು ಐಸಿಸಿ ಟಿ-20 ವಿಶ್ವಕಪ್​ನ ಫಲಿತಾಂಶದ ಮೇಲೆ ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗಿದೆ.

ಈ ಮೂಲಕ ಟಿ-20 ವಿಶ್ವಕಪ್ ಮುಗಿದ ಬಳಿಕ ವಿರಾಟ್ ಕೊಹ್ಲಿ ಸೀಮಿತ ಓವರ್​ ಕ್ರಿಕೆಟ್​ನಲ್ಲಿ ನಾಯಕತ್ವದಿಂದ ಕೆಳಗಿಳಿಯುವುದು ಬಹುತೇಕ ಖಚಿತವಾಗಿದೆ. ಹೀಗಾದಲ್ಲಿ ಏಕದಿನ ಮತ್ತು ಟಿ-20 ತಂಡಕ್ಕೆ ರೋಹಿತ್ ಶರ್ಮಾ ಕ್ಯಾಪ್ಟನ್ ಆದರೆ, ಟೆಸ್ಟ್​ನಲ್ಲಿ ಭಾರತವನ್ನು ವಿರಾಟ್ ಕೊಹ್ಲಿ ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.

2013ರ ಬಳಿಕ ಟೀಮ್ ಇಂಡಿಯಾ ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. 2014 ರಿಂದ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವ ಕೊಹ್ಲಿ ನಾಯಕತ್ವದಲ್ಲಿ ಐಸಿಸಿ ಪ್ರಶಸ್ತಿ ಭಾರತಕ್ಕೆ ಮರೀಚಿಕೆಯಾಗಿದೆ. ನಾಯಕನಾಗಿ ಕೊಹ್ಲಿ ಐಸಿಸಿ ಟೂರ್ನಿಗಳಾದ ಟಿ-20 ವಿಶ್ವಕಪ್​, ಏಕದಿನ ವಿಶ್ವಕಪ್​, ಚಾಂಪಿಯನ್​​ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸೇರಿ 4 ಟೂರ್ನಿಗಳಲ್ಲಿ ಕೊನೆ ಹಂತದಲ್ಲಿ ಎಡವಿದ್ದಾರೆ.

2017 ರಲ್ಲಿ ಚಾಂಪಿಯನ್​ ಟ್ರೋಫಿಯಲ್ಲಿ ಫೈನಲ್ ಪ್ರವೇಶಿಸಿದರೂ ಪಾಕಿಸ್ತಾನ ವಿರುದ್ದ ಸೋಲುವ ಮೂಲಕ ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈತಪ್ಪಿಸಿಕೊಂಡಿದ್ದರು. 2019ರ ವಿಶ್ವಕಪ್​​ನಲ್ಲಿ ಸೆಮಿಫೈನಲ್​ನಲ್ಲಿ ಎಡವಿದ ಟೀಮ್ ಇಂಡಿಯಾ ಟ್ರೋಫಿಗೆ ಮುತ್ತಿಕ್ಕುವ ಅವಕಾಶವನ್ನು ಕಳೆದುಕೊಂಡಿತು.

ಅಲ್ಲದೆ ಚೊಚ್ಚಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲೂ​ ನ್ಯೂಜಿಲೆಂಡ್ ವಿರುದ್ದ ಸೋಲುವ ಮೂಲಕ ಕೊಹ್ಲಿ ನಿರಾಸೆ ಅನುಭವಿಸಿದರು. ಇಲ್ಲಿಂದ ಕೊಹ್ಲಿ ನಾಯಕತ್ವದ ಬಗ್ಗೆ ಟೀಕೆಗಳು ಹೆಚ್ಚಾಗಿದ್ದವು. ಟಿ-20 ವಿಕಶ್ವಕಪ್ ಮುಗಿದ ಬೆನ್ನಲ್ಲೇ ಬಿಸಿಸಿಐ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.

T20 World cup: ಭಾರತ ಟಿ-20 ವಿಶ್ವಕಪ್ ತಂಡದಲ್ಲಿ ಬದಲಾವಣೆ ಸಾಧ್ಯತೆ: ಆ ಒಂದು ಕ್ಷಣಕ್ಕೆ ಕಾದು ಕುಳಿತಿದೆ ಬಿಸಿಸಿಐ

T20 World Cup 2021: ಟಿ-20 ವಿಶ್ವಕಪ್​ನಿಂದ ಯುಜ್ವೇಂದ್ರ ಚಾಹಲ್​ರನ್ನು ಕೈಬಿಟ್ಟಿದ್ದಕ್ಕೆ ಅಸಲಿ ಕಾರಣ ಬಹಿರಂಗ

(Virat Kohli: BCCI discussed about Kohli captaincy and will be decided after the result of T20 World Cup)

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್