Virat Kohli: ಟಾಪ್-4 ಗೆ ವಿರಾಟ್ ಕೊಹ್ಲಿ ಎಂಟ್ರಿ..!

| Updated By: ಝಾಹಿರ್ ಯೂಸುಫ್

Updated on: Dec 30, 2023 | 8:54 AM

Virat Kohli Records: ಸಚಿನ್ 329 ಇನಿಂಗ್ಸ್​ಗಳ ಮೂಲಕ 15 ಸಾವಿರಕ್ಕೂ ಅಧಿಕ ರನ್ ಪೇರಿಸಿ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ. ವಿಶೇಷ ಎಂದರೆ ಸಚಿನ್ ಅವರನ್ನು ಹೊರತುಪಡಿಸಿ ವಿಶ್ವದ ಯಾವುದೇ ಬ್ಯಾಟರ್ 15 ಸಾವಿರಕ್ಕೂ ಅಧಿಕ ರನ್ ಕಲೆಹಾಕಿಲ್ಲ. ಹೀಗಾಗಿ ಈ ದಾಖಲೆಯನ್ನು ಅಳಿಸಿ ಹಾಕುವುದು ಕಷ್ಟಸಾಧ್ಯ ಎಂದೇ ಹೇಳಬಹುದು.

Virat Kohli: ಟಾಪ್-4 ಗೆ ವಿರಾಟ್ ಕೊಹ್ಲಿ ಎಂಟ್ರಿ..!
Sachin-Virat-Dravid
Follow us on

ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಉತ್ತಮ ಪ್ರದರ್ಶನ ನೀಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 38 ರನ್ ಬಾರಿಸಿದ್ದ ಕೊಹ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ 76 ರನ್ ಚಚ್ಚಿದ್ದರು. ಈ 114 ರನ್​ಗಳೊಂದಿಗೆ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​​​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

  • ಇದಕ್ಕೂ ಮುನ್ನ ನಾಲ್ಕನೇ ಸ್ಥಾನದಲ್ಲಿ ವಿವಿಎಸ್ ಲಕ್ಷಣ್ ಇದ್ದರು. ಇದೀಗ ಲಕ್ಷಣ್ ಅವರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ಭಾರತ ಟಾಪ್-4 ಟೆಸ್ಟ್​ ರನ್ ಸರದಾರ ಪಟ್ಟಿಗೆ ಎಂಟ್ರಿ ಕೊಟ್ಟಿರುವುದು ವಿಶೇಷ.
  • ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 329 ಟೆಸ್ಟ್ ಇನಿಂಗ್ಸ್​ಗಳಿಂದ ಸಚಿನ್ ಒಟ್ಟು 15921 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
  • ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ರಾಹುಲ್ ದ್ರಾವಿಡ್ ಇದ್ದಾರೆ. 284 ಟೆಸ್ಟ್ ಇನಿಂಗ್ಸ್ ಆಡಿರುವ ದ್ರಾವಿಡ್ 13265 ರನ್ ಪೇರಿಸುವ ಮೂಲಕ 2ನೇ ಸ್ಥಾನ ಅಲಂಕರಿಸಿದ್ದಾರೆ.
  • ಮೂರನೇ ಸ್ಥಾನದಲ್ಲಿ ಸುನಿಲ್ ಗವಾಸ್ಕರ್ ಇದ್ದು, ಅವರು 214 ಟೆಸ್ಟ್ ಇನಿಂಗ್ಸ್​ಗಳಿಂದ ಒಟ್ಟು 10122 ರನ್ ಕಲೆಹಾಕಿದ್ದಾರೆ.
  • ಇದೀಗ ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಇದುವರೆಗೆ 189 ಇನಿಂಗ್ಸ್​ ಆಡಿರುವ ಕಿಂಗ್ ಕೊಹ್ಲಿ ಒಟ್ಟು 8790 ರನ್ ಬಾರಿಸಿದ್ದಾರೆ.
  • ಹಾಗೆಯೇ ವಿವಿಎಸ್ ಲಕ್ಷಣ್ 225 ಟೆಸ್ಟ್ ಇನಿಂಗ್ಸ್​ಗಳಿಂದ ಒಟ್ಟು 8781 ರನ್​ ಕಲೆಹಾಕಿ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

ಟೆಸ್ಟ್ ಕ್ರಿಕೆಟ್​ನ ರನ್ ಸರದಾರ:

ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಇರುವುದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ. ಸಚಿನ್ 329 ಇನಿಂಗ್ಸ್​ಗಳ ಮೂಲಕ 15 ಸಾವಿರಕ್ಕೂ ಅಧಿಕ ರನ್ ಪೇರಿಸಿ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ. ವಿಶೇಷ ಎಂದರೆ ಸಚಿನ್ ಅವರನ್ನು ಹೊರತುಪಡಿಸಿ ವಿಶ್ವದ ಯಾವುದೇ ಬ್ಯಾಟರ್ 15 ಸಾವಿರಕ್ಕೂ ಅಧಿಕ ರನ್ ಕಲೆಹಾಕಿಲ್ಲ. ಹೀಗಾಗಿ ಈ ದಾಖಲೆಯನ್ನು ಅಳಿಸಿ ಹಾಕುವುದು ಕಷ್ಟಸಾಧ್ಯ ಎಂದೇ ಹೇಳಲಾಗುತ್ತದೆ.

ಇದನ್ನೂ ಓದಿ: Virat Kohli: ಸಚಿನ್​ರ ಮತ್ತೊಂದು ದಾಖಲೆ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಕಲೆಹಾಕಿದ ಬ್ಯಾಟರ್​ಗಳು:

  1. ಸಚಿನ್ ತೆಂಡೂಲ್ಕರ್ (ಭಾರತ)- 15921 ರನ್ಸ್​ (329 ಇನಿಂಗ್ಸ್​)
  2. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ)- 13378 ರನ್ಸ್​ (287 ಇನಿಂಗ್ಸ್​)
  3. ಜಾಕ್ಸ್ ಕಾಲಿಸ್ (ಸೌತ್ ಆಫ್ರಿಕಾ)- 13289 ರನ್ಸ್​ (280 ಇನಿಂಗ್ಸ್​)
  4. ರಾಹುಲ್ ದ್ರಾವಿಡ್ (ಭಾರತ)- 13288 ರನ್ಸ್​ (286 ಇನಿಂಗ್ಸ್​)
  5. ಅಲೆಸ್ಟರ್ ಕುಕ್ (ಇಂಗ್ಲೆಂಡ್)- 12472 ರನ್ಸ್​ (291 ಇನಿಂಗ್ಸ್​)