Virat Kohli: 186 ರನ್​ ಸಿಡಿಸಿ ಹಿಟ್​ಮ್ಯಾನ್​ನ​ ಹಿಂದಿಕ್ಕಿದ ಕಿಂಗ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Mar 12, 2023 | 5:24 PM

India vs Australia 4th Test: ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಕುತೂಹಲದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಉಸ್ಮಾನ್ ಖ್ವಾಜಾ (180) ಅವರ ಶತಕದ ನೆರವಿನಿಂದ 480 ರನ್​ ಕಲೆಹಾಕಿತು.

Virat Kohli: 186 ರನ್​ ಸಿಡಿಸಿ ಹಿಟ್​ಮ್ಯಾನ್​ನ​ ಹಿಂದಿಕ್ಕಿದ ಕಿಂಗ್ ಕೊಹ್ಲಿ
Virat Kohli
Follow us on

India vs Australia 4th Test: ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ. ಈ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿಯ ಮೂವರವರೆ ವರ್ಷಗಳ ಟೆಸ್ಟ್ ಶತಕದ ಕಾಯುವಿಕೆ ಕೂಡ ಅಂತ್ಯವಾಗಿದೆ. ಈ ಪಂದ್ಯದ 3ನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಿದ್ದ ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಷ್ಟೇ ಅಲ್ಲದೆ ಮೂರನೇ ದಿನದಾಟದ ಅಂತ್ಯಕ್ಕೆ ಅರ್ಧಶತಕ ಬಾರಿಸಿ ಕ್ರೀಸ್ ಕಚ್ಚಿ ನಿಂತಿದ್ದರು.

4ನೇ ದಿನದಾಟದಲ್ಲಿ 59 ರನ್​ಗಳೊಂದಿಗೆ ಇನಿಂಗ್ಸ್ ಮುಂದುವರೆಸಿದ ವಿರಾಟ್ ಕೊಹ್ಲಿ 241 ಎಸೆತಗಳಲ್ಲಿ ಶತಕ ಪೂರೈಸಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಸೆಂಚುರಿ ಬಾರಿಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾದರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಮಾತ್ರ ಈ ಸಾಧನೆ ಮಾಡಿದ್ದರು.

ಇನ್ನು ಶತಕದ ಬಳಿಕ ರನ್​ ಗಳಿಕೆಯ ವೇಗವನ್ನು ಹೆಚ್ಚಿಸಿದ ಕಿಂಗ್ ಕೊಹ್ಲಿ 3ನೇ ಸೆಷನ್​ ವೇಳೆ ವೈಯುಕ್ತಿಕ ಮೊತ್ತವನ್ನು 150 ರ ಗಡಿದಾಟಿಸಿದರು. ಅಂತಿಮವಾಗಿ 364 ಎಸೆತಗಳಲ್ಲಿ 15 ಫೋರ್​ನೊಂದಿಗೆ 186 ರನ್​ ಬಾರಿಸಿ ಟಾಡ್ ಮರ್ಫಿಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿಯ ಪಾಲಾಯಿತು.

ಇದನ್ನೂ ಓದಿ
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್​ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಪಂದ್ಯಗಳ 36 ಇನಿಂಗ್ಸ್​ನಲ್ಲಿ ಒಟ್ಟು 1794 ರನ್​ ಕಲೆಹಾಕಿದ್ದರು. ಇದೀಗ 52 ಇನಿಂಗ್ಸ್​ ಮೂಲಕ 1803 ರನ್​ಬಾರಿಸಿ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.

WTC ರನ್​ ಸರದಾರರು:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ಬ್ಯಾಟರ್​ ಜೋ ರೂಟ್ ಮೊದಲ ಸ್ಥಾನದಲ್ಲಿದ್ದಾರೆ. ಡಬ್ಲ್ಯೂಟಿಸಿಯಲ್ಲಿ ಒಟ್ಟು 77 ಇನಿಂಗ್ಸ್​ ಆಡಿರುವ ರೂಟ್ ಇದುವರೆಗೆ 3575 ರನ್​ ಕಲೆಹಾಕಿದ್ದಾರೆ.
ಹಾಗೆಯೇ ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮಾರ್ನಸ್ ಲಾಬುಶೇನ್ 55 ಇನಿಂಗ್ಸ್​ಗಳಿಂದ 3121 ರನ್​ ಪೇರಿಸಿದ್ದಾರೆ. ಜೋ ರೂಟ್ ಹಾಗೂ ಮಾರ್ನಸ್ ಲಾಬುಶೇನ್ ಹೊರತುಪಡಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಟೆಸ್ಟ್ ಪಂದ್ಯಗಳಲ್ಲಿ ಯಾವುದೇ ಬ್ಯಾಟ್ಸ್​ಮನ್ 3 ಸಾವಿರ ರನ್ ಕಲೆಹಾಕಿಲ್ಲ ಎಂಬುದು ವಿಶೇಷ.

ಕುತೂಹಲಘಟ್ಟದತ್ತ ಅಂತಿಮ ಟೆಸ್ಟ್ ಪಂದ್ಯ:

ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯವು ಕುತೂಹಲದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಉಸ್ಮಾನ್ ಖ್ವಾಜಾ (180) ಅವರ ಶತಕದ ನೆರವಿನಿಂದ 480 ರನ್​ ಕಲೆಹಾಕಿತು.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ (128) ಹಾಗೂ ವಿರಾಟ್ ಕೊಹ್ಲಿ (186) ಶತಕ ಸಿಡಿಸಿ ಮಿಂಚಿದ್ದಾರೆ. ಪರಿಣಾಮ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 571 ರನ್​ ಕಲೆಹಾಕಿದೆ. ಇದೀಗ 91 ರನ್​ಗಳ ಹಿನ್ನಡೆಯೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​ ಆರಂಭಿಸಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್ , ಸ್ಟೀವನ್ ಸ್ಮಿತ್ (ನಾಯಕ) ಪೀಟರ್ ಹ್ಯಾಂಡ್ಸ್​ಕಾಂಬ್ , ಕ್ಯಾಮರೂನ್ ಗ್ರೀನ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ಮ್ಯಾಥ್ಯೂ ಕುಹ್ನೆಮನ್ , ಟಾಡ್ ಮರ್ಫಿ , ನಾಥನ್ ಲಿಯಾನ್.

ಇದನ್ನೂ ಓದಿ: Virat Kohli: ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಮುರಿದ ಕಿಂಗ್ ಕೊಹ್ಲಿ

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ಚೇತೇಶ್ವರ ಪೂಜಾರ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ (ಗಾಯಾಳು), ಶ್ರೀಕರ್ ಭರತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಉಮೇಶ್ ಯಾದವ್ , ಮೊಹಮ್ಮದ್ ಶಮಿ.

 

 

Published On - 5:23 pm, Sun, 12 March 23