AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಬೆನ್ನುಮೂಳೆ ಇಲ್ಲದವರೇ…ಶಮಿಯನ್ನು ಟ್ರೋಲ್​ ಮಾಡಿದವರ ವಿರುದ್ದ ಸಿಡಿದ ವಿರಾಟ್ ಕೊಹ್ಲಿ

Mohammed Shami: ಮೊಹಮ್ಮದ್ ಶಮಿ ವಿರುದ್ದ ಮೂಡಿಬಂದ ಟೀಕೆಗಳ ವಿರುದ್ದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯಜುವೇಂದ್ರ ಚಹಲ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಧ್ವನಿಯೆತ್ತಿದ್ದರು.

Virat Kohli: ಬೆನ್ನುಮೂಳೆ ಇಲ್ಲದವರೇ...ಶಮಿಯನ್ನು ಟ್ರೋಲ್​ ಮಾಡಿದವರ ವಿರುದ್ದ ಸಿಡಿದ ವಿರಾಟ್ ಕೊಹ್ಲಿ
Virat Kohli
TV9 Web
| Updated By: ಝಾಹಿರ್ ಯೂಸುಫ್|

Updated on: Oct 30, 2021 | 5:03 PM

Share

ಭಾನುವಾರ ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನ 16ನೇ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ (India vs Pakistan) ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳಿಂದ ಪಾಕ್​ ವಿರುದ್ದ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ (Team India) ವೇಗಿ ಮೊಹಮ್ಮದ್ ಶಮಿ (Mohammed Shami) ಅವರನ್ನು ಗುರಿಯಾಗಿಸಿ ಟೀಕೆಗಳು ಕೇಳಿ ಬಂದಿದ್ದವು. ಅದರಲ್ಲೂ ಶಮಿ ಅವರ ಧರ್ಮದವನ್ನು ಎಳೆದು ತಂದು ಅವರನ್ನು ನಿಂದಿಸಲಾಗಿತ್ತು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ವೇಗಿಯನ್ನು ಪಾಕಿಸ್ತಾನದವ…ಎಂದೆಲ್ಲಾ ಟ್ರೋಲ್ ಮಾಡಲಾಗಿತ್ತು. ಈ ಟ್ರೋಲ್​ಗಳಿಗೆ ಇದೀಗ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಶಮಿ ವಿರುದ್ದದ ಕೋಮು ನಿಂದನೆಯನ್ನು ಖಂಡಿಸಿದ್ದಾರೆ. ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು.

ಧರ್ಮದ ಆಧಾರದಲ್ಲಿ ಆಟಗಾರರನ್ನು ನೋಡುವುದು ಸಂಪೂರ್ಣ ತಪ್ಪು. ನಾನು ಯಾರೊಂದಿಗೂ ಈ ರೀತಿ ವರ್ತಿಸಿಲ್ಲ. ಆದರೆ ಇದು ಕೆಲವರ ಕೆಲಸ. ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ತಿಳಿಸಿದರು.

ಇದೇ ವೇಳೆ ನಮ್ಮದು ಮೈದಾನದಲ್ಲಿ ಆಡುತ್ತಿರುವವರ ಗುಂಪು ಎಂದ ಕೊಹ್ಲಿ, ಸೋಷಿಯಲ್ ಮೀಡಿಯಾದಲ್ಲಿ ಟೀಕೆ ಮಾಡುವತ್ತಾ ಕೂರುವ ಬೆನ್ನುಮೂಳೆಯಿಲ್ಲದ ಜನರ ಗುಂಪಲ್ಲ ಎಂದು ತಿಳಿಸಿದರು. ಈ ಮೂಲಕ ವೈಯುಕ್ತಿಕ ವಿಚಾರಗಳನ್ನು ಪ್ರಸ್ತಾಪಿಸಿ ಟೀಕೆ ಮಾಡುವವರಿಗೆ ಕೊಹ್ಲಿ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದರು.

ಇದಕ್ಕೂ ಮುನ್ನ ಮೊಹಮ್ಮದ್ ಶಮಿ ವಿರುದ್ದ ಮೂಡಿಬಂದ ಟೀಕೆಗಳ ವಿರುದ್ದ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯಜುವೇಂದ್ರ ಚಹಲ್ ಸೇರಿದಂತೆ ಅನೇಕ ಮಾಜಿ ಕ್ರಿಕೆಟಿಗರು ಧ್ವನಿಯೆತ್ತಿದ್ದರು. ಅಷ್ಟೇ ಅಲ್ಲದೆ ಶಮಿಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: T20 World Cup 2021: ಸೆಮಿಫೈನಲ್ ಲೆಕ್ಕಾಚಾರ: ನ್ಯೂಜಿಲೆಂಡ್ ವಿರುದ್ದ ಟೀಮ್ ಇಂಡಿಯಾ ಗೆಲ್ಲಲೇಬೇಕು, ಯಾಕೆ ಗೊತ್ತಾ?

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ಇದನ್ನೂ ಓದಿ:  T20 World Cup 2021: ಹಿಂದೂಗಳ ಮುಂದೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದ ಪಾಕ್ ಕ್ರಿಕೆಟಿಗ

(Virat Kohli Blasts Social Media Trolls Who Targetted Mohammed Shami)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!