Viral Video: ವಿರಾಟ್ ಬೌಲಿಂಗ್ ಅಭ್ಯಾಸ: ಆಲ್​ರೌಂಡರ್ ಪಾತ್ರದಲ್ಲಿ ಕಿಂಗ್ ಕೊಹ್ಲಿ?

Virat Kohli Bowling: ಮುಂಬರುವ ಟಿ20 ಸರಣಿಗಳಲ್ಲಿ ಮತ್ತು ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಐವರು ಬೌಲರ್​ಗಳೊಂದಿಗೆ ಕಣಕ್ಕಿಳಿಯುವುದು ಖಚಿತ.

Viral Video: ವಿರಾಟ್ ಬೌಲಿಂಗ್ ಅಭ್ಯಾಸ: ಆಲ್​ರೌಂಡರ್ ಪಾತ್ರದಲ್ಲಿ ಕಿಂಗ್ ಕೊಹ್ಲಿ?
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 20, 2022 | 4:55 PM

ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ನೆಟ್ಸ್​​ನಲ್ಲಿ ಬ್ಯಾಟಿಂಗ್ ಅಭ್ಯಾಸದೊಂದಿಗೆ ಸಮಯ ಕಳೆಯುವ ಕೊಹ್ಲಿ, ಈ ಬಾರಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡು ಬಂದಿದೆ. ಅದು ಕೂಡ ಟೀಮ್ ಇಂಡಿಯಾದ ಪ್ರಮುಖ ಬೌಲರ್​ಗಳೊಂದಿಗೆ ಎಂಬುದು ವಿಶೇಷ. ಹೀಗಾಗಿಯೇ ಮುಂಬರುವ ದಿನಗಳಲ್ಲಿ ಕೊಹ್ಲಿ ಆಲ್​ರೌಂಡರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಇತ್ತೀಚೆಗೆ ಏಷ್ಯಾಕಪ್​ನಲ್ಲಿ ಕೊಹ್ಲಿ ಹಾಂಗ್ ಕಾಂಗ್ ವಿರುದ್ಧ 1 ಓವರ್ ಬೌಲ್ ಮಾಡಿದ್ದರು. ಈ ವೇಳೆ ಕೇವಲ 6 ರನ್​ ಮಾತ್ರ ನೀಡಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 6 ವರ್ಷಗಳ ಬಳಿಕ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದ ಕೊಹ್ಲಿ ಇದೀಗ ಆಸೀಸ್ ವಿರುದ್ಧದ ಸರಣಿಗೂ ಮುನ್ನ ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇದೇ ಕಾರಣದಿಂದಾಗಿ ಕೊಹ್ಲಿಯನ್ನು ಹೆಚ್ಚುವರಿ ಬೌಲರ್​ ಬಳಸಿಕೊಳ್ಳಲು ಟೀಮ್ ಇಂಡಯಾ ಪ್ಲ್ಯಾನ್ ರೂಪಿಸುತ್ತಿದೆಯಾ ಎಂಬ ಪ್ರಶ್ನೆಯೊಂದು ಉದ್ಭವಿಸಿದೆ. ಏಕೆಂದರೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿ ಸಮತೋಲನ ತರಬೇಕಿದ್ದರೆ ಓರ್ವ ಬ್ಯಾಟ್ಸ್​ಮನ್ ಬೌಲಿಂಗ್ ಮಾಡಲೇಬೇಕು. ಅಂದರೆ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಇಬ್ಬರನ್ನು ಕಣಕ್ಕಿಳಿಸಬೇಕಿದ್ದರೆ ಓರ್ವ ಆಟಗಾರ ಹೆಚ್ಚುವರಿಯಾಗಿ ಬೌಲರ್​ನ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅದರಂತೆ ಇದೀಗ ವಿರಾಟ್ ಕೊಹ್ಲಿಯನ್ನು ಟೀಮ್ ಇಂಡಿಯಾ 6ನೇ ಬೌಲರ್​ ಆಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಕೊಹ್ಲಿ ಟೀಮ್ ಇಂಡಿಯಾದ ಪ್ರಮುಖ ಬೌಲರ್​ಗಳೊಂದಿಗೆ ಅಭ್ಯಾಸ ನಡೆಸುತ್ತಿರುವುದು ಕಂಡು ಬಂದಿದೆ. ಅಂದರೆ ಮುಂಬರುವ ಟಿ20 ಸರಣಿಗಳಲ್ಲಿ ಮತ್ತು ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಐವರು ಬೌಲರ್​ಗಳೊಂದಿಗೆ ಕಣಕ್ಕಿಳಿಯುವುದು ಖಚಿತ. ಇದಾಗ್ಯೂ 6ನೇ ಬೌಲರ್​​ ಅನಿವಾರ್ಯತೆ ಎದುರಾದರೆ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯನ್ನು ಬಳಸಿಕೊಳ್ಳಬಹುದು. ಅದರ ಮೊದಲ ಹೆಜ್ಜೆಯಾಗಿ ಇದೀಗ ವಿರಾಟ್ ಕೊಹ್ಲಿ ಬೌಲಿಂಗ್ ಮೂಲಕ ಬೆವರಿಳಿಸಿದ್ದಾರೆ.

ಒಟ್ಟಿನಲ್ಲಿ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ, ಇದೇ ಮೊದಲ ಬಾರಿಗೆ ನೆಟ್ಸ್​ನಲ್ಲಿ 30 ನಿಮಿಷಕ್ಕೂ ಹೆಚ್ಚು ಹೊತ್ತು ಬೌಲಿಂಗ್ ಅಭ್ಯಾಸ ನಡೆಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಕಿಂಗ್ ಕೊಹ್ಲಿ ಆಲ್​ರೌಂಡರ್ ಆಗಿ ರೂಪುಗೊಂಡರೂ ಅಚ್ಚರಿಪಡಬೇಕಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ