Viral Video: ವಿರಾಟ್ ಬೌಲಿಂಗ್ ಅಭ್ಯಾಸ: ಆಲ್​ರೌಂಡರ್ ಪಾತ್ರದಲ್ಲಿ ಕಿಂಗ್ ಕೊಹ್ಲಿ?

| Updated By: ಝಾಹಿರ್ ಯೂಸುಫ್

Updated on: Sep 20, 2022 | 4:55 PM

Virat Kohli Bowling: ಮುಂಬರುವ ಟಿ20 ಸರಣಿಗಳಲ್ಲಿ ಮತ್ತು ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಐವರು ಬೌಲರ್​ಗಳೊಂದಿಗೆ ಕಣಕ್ಕಿಳಿಯುವುದು ಖಚಿತ.

Viral Video: ವಿರಾಟ್ ಬೌಲಿಂಗ್ ಅಭ್ಯಾಸ: ಆಲ್​ರೌಂಡರ್ ಪಾತ್ರದಲ್ಲಿ ಕಿಂಗ್ ಕೊಹ್ಲಿ?
Virat Kohli
Follow us on

ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೂ ಮುನ್ನ ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ನೆಟ್ಸ್​​ನಲ್ಲಿ ಬ್ಯಾಟಿಂಗ್ ಅಭ್ಯಾಸದೊಂದಿಗೆ ಸಮಯ ಕಳೆಯುವ ಕೊಹ್ಲಿ, ಈ ಬಾರಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡು ಬಂದಿದೆ. ಅದು ಕೂಡ ಟೀಮ್ ಇಂಡಿಯಾದ ಪ್ರಮುಖ ಬೌಲರ್​ಗಳೊಂದಿಗೆ ಎಂಬುದು ವಿಶೇಷ. ಹೀಗಾಗಿಯೇ ಮುಂಬರುವ ದಿನಗಳಲ್ಲಿ ಕೊಹ್ಲಿ ಆಲ್​ರೌಂಡರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಇತ್ತೀಚೆಗೆ ಏಷ್ಯಾಕಪ್​ನಲ್ಲಿ ಕೊಹ್ಲಿ ಹಾಂಗ್ ಕಾಂಗ್ ವಿರುದ್ಧ 1 ಓವರ್ ಬೌಲ್ ಮಾಡಿದ್ದರು. ಈ ವೇಳೆ ಕೇವಲ 6 ರನ್​ ಮಾತ್ರ ನೀಡಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 6 ವರ್ಷಗಳ ಬಳಿಕ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದ ಕೊಹ್ಲಿ ಇದೀಗ ಆಸೀಸ್ ವಿರುದ್ಧದ ಸರಣಿಗೂ ಮುನ್ನ ಬೌಲಿಂಗ್ ಅಭ್ಯಾಸದಲ್ಲಿ ತೊಡಗಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇದೇ ಕಾರಣದಿಂದಾಗಿ ಕೊಹ್ಲಿಯನ್ನು ಹೆಚ್ಚುವರಿ ಬೌಲರ್​ ಬಳಸಿಕೊಳ್ಳಲು ಟೀಮ್ ಇಂಡಯಾ ಪ್ಲ್ಯಾನ್ ರೂಪಿಸುತ್ತಿದೆಯಾ ಎಂಬ ಪ್ರಶ್ನೆಯೊಂದು ಉದ್ಭವಿಸಿದೆ. ಏಕೆಂದರೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿ ಸಮತೋಲನ ತರಬೇಕಿದ್ದರೆ ಓರ್ವ ಬ್ಯಾಟ್ಸ್​ಮನ್ ಬೌಲಿಂಗ್ ಮಾಡಲೇಬೇಕು. ಅಂದರೆ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಇಬ್ಬರನ್ನು ಕಣಕ್ಕಿಳಿಸಬೇಕಿದ್ದರೆ ಓರ್ವ ಆಟಗಾರ ಹೆಚ್ಚುವರಿಯಾಗಿ ಬೌಲರ್​ನ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ.

ಇದನ್ನೂ ಓದಿ
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅದರಂತೆ ಇದೀಗ ವಿರಾಟ್ ಕೊಹ್ಲಿಯನ್ನು ಟೀಮ್ ಇಂಡಿಯಾ 6ನೇ ಬೌಲರ್​ ಆಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಕೊಹ್ಲಿ ಟೀಮ್ ಇಂಡಿಯಾದ ಪ್ರಮುಖ ಬೌಲರ್​ಗಳೊಂದಿಗೆ ಅಭ್ಯಾಸ ನಡೆಸುತ್ತಿರುವುದು ಕಂಡು ಬಂದಿದೆ.
ಅಂದರೆ ಮುಂಬರುವ ಟಿ20 ಸರಣಿಗಳಲ್ಲಿ ಮತ್ತು ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಐವರು ಬೌಲರ್​ಗಳೊಂದಿಗೆ ಕಣಕ್ಕಿಳಿಯುವುದು ಖಚಿತ. ಇದಾಗ್ಯೂ 6ನೇ ಬೌಲರ್​​ ಅನಿವಾರ್ಯತೆ ಎದುರಾದರೆ ರೋಹಿತ್ ಶರ್ಮಾ ವಿರಾಟ್ ಕೊಹ್ಲಿಯನ್ನು ಬಳಸಿಕೊಳ್ಳಬಹುದು. ಅದರ ಮೊದಲ ಹೆಜ್ಜೆಯಾಗಿ ಇದೀಗ ವಿರಾಟ್ ಕೊಹ್ಲಿ ಬೌಲಿಂಗ್ ಮೂಲಕ ಬೆವರಿಳಿಸಿದ್ದಾರೆ.

ಒಟ್ಟಿನಲ್ಲಿ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ, ಇದೇ ಮೊದಲ ಬಾರಿಗೆ ನೆಟ್ಸ್​ನಲ್ಲಿ 30 ನಿಮಿಷಕ್ಕೂ ಹೆಚ್ಚು ಹೊತ್ತು ಬೌಲಿಂಗ್ ಅಭ್ಯಾಸ ನಡೆಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಕಿಂಗ್ ಕೊಹ್ಲಿ ಆಲ್​ರೌಂಡರ್ ಆಗಿ ರೂಪುಗೊಂಡರೂ ಅಚ್ಚರಿಪಡಬೇಕಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.