Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಷ್ಠ ಭಾರತ ತಂಡವನ್ನು ಕಟ್ಟಿದ್ದು ಕ್ಯಾಪ್ಟನ್ ಕೊಹ್ಲಿ: ಗೌತಮ್ ಗಂಭೀರ್ ಬಹುಪರಾಕ್

Virat Kohli - Gautam Gambhir: ಭಾರತ ಕ್ರಿಕೆಟ್ ತಂಡದ ಯಶಸ್ವಿ ಟೆಸ್ಟ್ ನಾಯಕ ಯಾರೆಂಬ ಪ್ರಶ್ನೆ ಮುಂದಿಟ್ಟರೆ ಹಲವು ಉತ್ತರಗಳು ಮುಂದೆ ಬರಬಹುದು. ಆದರೆ ಈ ಉತ್ತರಗಳಲ್ಲಿ ವಿರಾಟ್ ಕೊಹ್ಲಿ ಹೆಸರು ಇರಲೇಬೇಕು. ಏಕೆಂದರೆ ಭಾರತ ಟೆಸ್ಟ್ ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ ನಾಯಕನೆಂದರೆ ಅದು ವಿರಾಟ್ ಕೊಹ್ಲಿ. ಇದಕ್ಕೆ ಸಾಕ್ಷಿ ಅವರ ನಾಯಕತ್ವದ ಅಂಕಿ ಅಂಶಗಳು.

ಬಲಿಷ್ಠ ಭಾರತ ತಂಡವನ್ನು ಕಟ್ಟಿದ್ದು ಕ್ಯಾಪ್ಟನ್ ಕೊಹ್ಲಿ: ಗೌತಮ್ ಗಂಭೀರ್ ಬಹುಪರಾಕ್
Virat Kohli - Gautam Gambhir
Follow us
ಝಾಹಿರ್ ಯೂಸುಫ್
|

Updated on: Sep 18, 2024 | 1:17 PM

ಭಾರತ ಕ್ರಿಕೆಟ್ ತಂಡವು ಇಂದು ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದು. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪಾರುಪತ್ಯ ಮೆರೆಯುತ್ತಾ ಸಾಗುತ್ತಿದೆ. ಇದಕ್ಕೆ ಸಾಕ್ಷಿ ತವರಿನಲ್ಲಿ ಭಾರತ ತಂಡವು ಸತತ 17 ಟೆಸ್ಟ್ ಸರಣಿಗಳನ್ನು ಗೆದ್ದಿರುವುದು. ಇಂತಹ ಅಮೋಘ ಗೆಲುವಿನ ನಾಗಾಲೋಟಕ್ಕೆ ನಾಂದಿಯಾಡಿದ್ದು ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ. ಇದನ್ನು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಕೂಡ ಒಪ್ಪಿಕೊಂಡಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಚಿಟ್ ಚಾಟ್​ವೊಂದರಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಬಿಸಿಸಿಐ ಪ್ರಸ್ತುತಪಡಿಸಿರುವ ಈ ಮಾತುಕತೆಯ ವೇಳೆ ಗಂಭೀರ್, ಬಲಿಷ್ಠ ಭಾರತ ತಂಡ ರೂಪುಗೊಳ್ಳಲು ಕೊಹ್ಲಿಯ ಕೊಡುಗೆಯನ್ನು ಹಾಡಿ ಹೊಗಳಿದ್ದಾರೆ.

ಈ ಬಗ್ಗೆ ವಿರಾಟ್ ಕೊಹ್ಲಿ ಜೊತೆ ಮಾತನಾಡಿದ ಗಂಭೀರ್, ಭಾರತ ತಂಡವು ಬಲಿಷ್ಠ ಬೌಲಿಂಗ್ ಲೈನಪ್ ಹೊಂದಲು ನೀವೇ ಮುಖ್ಯ ಕಾರಣ. ನೀವು ಗಟ್ಟಿಯಾದ ವೇಗದ ಬೌಲಿಂಗ್ ಲೈನಪ್​ ಸೃಷ್ಟಿಸಿದ್ದೀರಿ. ಅಂದು ನೀವು ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ವಹಿಸಿಕೊಂಡಾಗ ನಿಮ್ಮ ವಯಸ್ಸು 24-25 ವರ್ಷ ಅಷ್ಟೇ. ಆ ಸಮಯದಲ್ಲಿ ನೀವು ಬಲಿಷ್ಠ ತಂಡವನ್ನು ರೂಪಿಸಿದ್ದೀರಿ. ಅದರ ಶ್ರೇಯಸ್ಸು ಖಂಡಿತವಾಗಿಯೂ ನಿಮಗೆ ಸಲ್ಲಬೇಕು ಎಂದು ಗೌತಮ್ ಗಂಭೀರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ ನಿಮ್ಮ (ವಿರಾಟ್ ಕೊಹ್ಲಿ) ನಾಯಕತ್ವದಲ್ಲಿ ವಿದೇಶಗಳಲ್ಲಿ ಟೀಮ್ ಇಂಡಿಯಾ ಹಲವು ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡಿದೆ. ಇಂತಹ ಗೆಲುವಿಗೆ ನಿಮ್ಮ ಮನೋಭಾವವೇ ಕಾರಣ. ಈ ಮೂಲಕ ಬಲಿಷ್ಠ ಭಾರತ ತಂಡ ರೂಪುಗೊಳ್ಳುವಲ್ಲಿ ನಿಮ್ಮ ಪಾತ್ರವು ಬಹಳ ಮುಖ್ಯ ಎಂದು ಗಂಭೀರ್ ಕೊಹ್ಲಿಯ ನಾಯಕತ್ವವನ್ನು ಕೂಡ ಹೊಗಳಿದ್ದಾರೆ.

ಇದೀಗ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವಣ ಚಿಟ್ ಚಾಟ್ ವಿಡಿಯೋ ವೈರಲ್ ಆಗಿದ್ದು, ಟೀಮ್ ಇಂಡಿಯಾ ಕೋಚ್​ನ ನೇರ ನುಡಿಗಳಿಗೆ ಕಿಂಗ್ ಕೊಹ್ಲಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಅಂದಹಾಗೆ ಗೌತಮ್ ಗಂಭೀರ್ ಹೇಳಿದಂತೆ ಭಾರತ ತಂಡವು ಬಲಿಷ್ಠವಾಗಿ ರೂಪುಗೊಳ್ಳುವಲ್ಲಿ ವಿರಾಟ್ ಕೊಹ್ಲಿಯ ನಾಯಕತ್ವ ಪ್ರಮುಖ ಪಾತ್ರವಹಿಸಿತ್ತು. ಏಕೆಂದರೆ ಕಿಂಗ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ತಂಡವು ಹಲವು ಪ್ರಮುಖ ಸರಣಿಗಳನ್ನು ಗೆದ್ದುಕೊಂಡಿತ್ತು. ಅಷ್ಟೇ ಅಲ್ಲದೆ ಭಾರತ ಕಂಡಂತಹ ಯಶಸ್ವಿ ಟೆಸ್ಟ್ ನಾಯಕರುಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿಯ ನಾಯಕತ್ವದಲ್ಲಿ ಟೀಮ್ ಇಂಡಿಯಾ 2014 ರಿಂದ 2022 ರವರೆಗೆ 68 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಭಾರತ ತಂಡವು 40 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 11 ಮ್ಯಾಚ್​ಗಳನ್ನು ಡ್ರಾ ಮಾಡಿಕೊಂಡಿದೆ. ಅಂದರೆ ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡವು ಶೇ. 70.17 ರಷ್ಟು ಗೆಲುವಿನ ಸರಾಸರಿ ಹೊಂದಿತ್ತು.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ಅದೇ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 60 ಟೆಸ್ಟ್​ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 27 ಪಂದ್ಯಗಳನ್ನು ಮಾತ್ರ. ಇದಾಗ್ಯೂ ಭಾರತ ಯಶಸ್ವಿ ನಾಯಕನ ಚರ್ಚೆಯಲ್ಲಿ ವಿರಾಟ್ ಕೊಹ್ಲಿಯ ಹೆಸರು ಮುನ್ನಲೆಗೆ ಬರದಿರುವುದು ವಿಪಯಾರ್ಸವೇ ಸರಿ.

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ