Shoaib Akhtar: ಟಿ20 ವಿಶ್ವಕಪ್​ ಬಳಿಕ ವಿರಾಟ್ ಕೊಹ್ಲಿ ನಿವೃತ್ತಿಯಾಗಬಹುದು: ಅಖ್ತರ್

Virat Kohli: ಕಳೆದ ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದ ವಿರಾಟ್ ಕೊಹ್ಲಿ ಇದೀಗ ಮತ್ತೆ ಫಾರ್ಮ್ ಕಂಡುಕೊಂಡಿದ್ದಾರೆ.

Shoaib Akhtar: ಟಿ20 ವಿಶ್ವಕಪ್​ ಬಳಿಕ ವಿರಾಟ್ ಕೊಹ್ಲಿ ನಿವೃತ್ತಿಯಾಗಬಹುದು: ಅಖ್ತರ್
Virat Kohli
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 14, 2022 | 12:10 PM

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಟಿ20 ವಿಶ್ವಕಪ್​ ಬಳಿಕ ನಿವೃತ್ತಿಯಾಗುವ ಸಾಧ್ಯತೆಯಿದೆ ಎಂದು ಪಾಕಿಸ್ತಾನ್ ತಂಡದ ಮಾಜಿ ವೇಗಿ ಶೊಯೇಬ್ ಅಖ್ತರ್ (Shoaib Akhtar) ಅಭಿಪ್ರಾಯಪಟ್ಟಿದ್ದಾರೆ. ಪ್ರಮುಖ ಸಂದರ್ಶನವೊಂದರಲ್ಲಿ ಮಾತನಾಡಿದ ಅಖ್ತರ್, ವಿರಾಟ್ ಕೊಹ್ಲಿ 104 ಟಿ20 ಪಂದ್ಯಗಳನ್ನಾಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಬಳಿಕ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಬಹುದು ಎಂದಿದ್ದಾರೆ.

ಕಳೆದ ಕೆಲ ತಿಂಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಕಿಂಗ್ ಕೊಹ್ಲಿ ಈ ಬಾರಿಯ ಏಷ್ಯಾಕಪ್ ಮೂಲಕ ಕಂಬ್ಯಾಕ್ ಮಾಡಿದ್ದರು. ಅಲ್ಲದೆ ಮೂರು ವರ್ಷಗಳ ಬಳಿಕ ಶತಕ ಸಿಡಿಸಿ ಅಬ್ಬರಿಸಿದ್ದರು. ಹಾಗೆಯೇ ಈ ಬಾರಿ ಏಷ್ಯಾಕಪ್​ನಲ್ಲಿ ಕೇವಲ 5 ಪಂದ್ಯಗಳಿಂದ 271 ರನ್​ ಕಲೆಹಾಕುವ ಮೂಲಕ ಅತ್ಯಧಿಕ ರನ್​ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದರು.

ಇದೀಗ ಟಿ20 ವಿಶ್ವಕಪ್​ನಲ್ಲೂ ಟೀಮ್ ಇಂಡಿಯಾ ಪಾಲಿಗೆ ವಿರಾಟ್ ಕೊಹ್ಲಿಯ ಭರ್ಜರಿ ಫಾರ್ಮ್​ ಟ್ರಂಪ್ ಕಾರ್ಡ್ ಆಗಲಿದೆ. ಆದರೆ ಫಾರ್ಮ್​ಗೆ ಮರಳುತ್ತಿದ್ದಂತೆ ವಿರಾಟ್ ಕೊಹ್ಲಿ ನಿವೃತ್ತಿಯಾಗಲಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಶೊಯೇಬ್ ಅಖ್ತರ್ ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ಬಗ್ಗೆ ಮಾತನಾಡಿದ ಅಖ್ತರ್, ಈಗಾಗಲೇ ನೂರಕ್ಕೂ ಅಧಿಕ ಟಿ20 ಪಂದ್ಯಗಳಲ್ಲಿ ಕೊಹ್ಲಿ ಟೀಮ್ ಇಂಡಿಯಾ ಪ್ರತಿನಿಧಿಸಿದ್ದಾರೆ. ಹಾಗಾಗಿ ನನ್ನ ಪ್ರಕಾರ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಮೂಲಕ ಅವರ 20 ಓವರ್​ಗಳ ಸ್ವರೂಪದಿಂದ ನಿವೃತ್ತರಾಗಬಹುದು. ಏಕೆಂದರೆ ಅವರು ಇತರೆ ಸ್ವರೂಪಗಳಲ್ಲಿ, ಅಂದರೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ತಮ್ಮ ಕೆರಿಯರ್ ವಿಸ್ತರಿಸಲು ಈ ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎಂದು ಅಖ್ತರ್ ಹೇಳಿದ್ದಾರೆ.

ಕಳೆದ ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದ ವಿರಾಟ್ ಕೊಹ್ಲಿ ಇದೀಗ ಮತ್ತೆ ಫಾರ್ಮ್ ಕಂಡುಕೊಂಡಿದ್ದಾರೆ. ಇದೇ ವೇಳೆ ಮಾಜಿ ಆಟಗಾರರ ಹೇಳಿಕೆಗಳು ಹೊಸ ಚರ್ಚೆಗೆ ಕಾರಣವಾಗುತ್ತಿದೆ. ಏಕೆಂದರೆ ಈ ಹಿಂದೆ ಫಾರ್ಮ್​ ಬಗ್ಗೆ ಟೀಕಿಸುತ್ತಿದ್ದ ಕೆಲ ಮಾಜಿ ಆಟಗಾರರಿಗೆ ಕೊಹ್ಲಿ ಏಷ್ಯಾಕಪ್​ ಮೂಲಕ ಉತ್ತರ ನೀಡಿದ್ದಾರೆ. ಇದರ ಬೆನ್ನಲ್ಲೇ ಅವರ ನಿವೃತ್ತಿ ಚರ್ಚೆಗಳು ಶುರುವಾಗಿರುವುದು ವಿಪರ್ಯಾಸ.

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ