Virat Kohli: ಸೋತರೂ ಟಿ20 ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
India vs Pakistan: ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಮಹೇಲಾ ಜಯವರ್ಧನೆ ಇದ್ದು, ಜಯವರ್ಧನೆ ಟಿ20 ವಿಶ್ವಕಪ್ನಲ್ಲಿ 7 ಬಾರಿ ಅರ್ಧಶತಕ ಬಾರಿಸಿದ್ದರು. ಹಾಗೆಯೇ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 4ನೇ ಸ್ಥಾನದಲ್ಲಿದ್ದಾರೆ. ಹಿಟ್ಮ್ಯಾನ್ ಇದುವರೆಗೆ ಟಿ20 ವಿಶ್ವಕಪ್ನಲ್ಲಿ 6 ಅರ್ಧಶತಕ ಸಿಡಿಸಿದ್ದಾರೆ.
ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (India vs Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ (Virat Kohli) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಮೊದಲ ಓವರ್ನಲ್ಲೇ ರೋಹಿತ್ ಶರ್ಮಾ (Rohit Sharma) ಹಾಗೂ 3ನೇ ಓವರ್ನಲ್ಲಿ ಕೆಎಲ್ ರಾಹುಲ್ (KL Rahul) ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಕೊಹ್ಲಿ ಆಸರೆಯಾದರು. ಅದರಂತೆ ಎಚ್ಚರಿಕೆಯ ಆಟವಾಡುತ್ತಾ ರನ್ ಗತಿ ಹೆಚ್ಚಿಸಿದ ಕೊಹ್ಲಿ 45 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಈ ಆಕರ್ಷಕ ಇನಿಂಗ್ಸ್ನಲ್ಲಿ ಕೊಹ್ಲಿ ಬ್ಯಾಟ್ನಿಂದ 1 ಸಿಕ್ಸ್ ಹಾಗೂ 5 ಫೋರ್ಗಳು ಮೂಡಿಬಂದಿದ್ದವು. ಈ ಅರ್ಧಶತಕದೊಂದಿಗೆ ಟೀಮ್ ಇಂಡಿಯಾ ನಾಯಕ ಟಿ20 ವಿಶ್ವಕಪ್ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಈ ದಾಖಲೆ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.
ಗೇಲ್ ಟಿ20 ವಿಶ್ವಕಪ್ನಲ್ಲಿ 9 ಬಾರಿ ಅರ್ಧಶತಕ ಬಾರಿಸಿದ್ದರು. ಇದೀಗ ವಿರಾಟ್ ಕೊಹ್ಲಿ 10 ಬಾರಿ ಹಾಫ್ ಸೆಂಚುರಿ ಸಿಡಿಸಿ ಹೊಸ ಇತಿಹಾಸ ಬರೆದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಶ್ರೀಲಂಕಾದ ಮಹೇಲಾ ಜಯವರ್ಧನೆ ಇದ್ದು, ಜಯವರ್ಧನೆ ಟಿ20 ವಿಶ್ವಕಪ್ನಲ್ಲಿ 7 ಬಾರಿ ಅರ್ಧಶತಕ ಬಾರಿಸಿದ್ದರು. ಹಾಗೆಯೇ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 4ನೇ ಸ್ಥಾನದಲ್ಲಿದ್ದಾರೆ. ಹಿಟ್ಮ್ಯಾನ್ ಇದುವರೆಗೆ ಟಿ20 ವಿಶ್ವಕಪ್ನಲ್ಲಿ 6 ಅರ್ಧಶತಕ ಸಿಡಿಸಿದ್ದಾರೆ.
ಇದನ್ನೂ ಓದಿ: India vs Pakistan: 2007ರ ಟಿ20 ವಿಶ್ವಕಪ್ ಫೈನಲ್ ಆಡಿದ್ದ ಇಬ್ಬರು ಆಟಗಾರರ ಮುಖಾಮುಖಿ
ಇದನ್ನೂ ಓದಿ: T20 World cup 2021: ಪಾಕ್ ವಿರುದ್ದದ ಪಂದ್ಯದೊಂದಿಗೆ ಹೊಸ ಸಾಧನೆ ಮಾಡಲಿದ್ದಾರೆ ಕೆಎಲ್ ರಾಹುಲ್, ಪಾಂಡ್ಯ
ಇದನ್ನೂ ಓದಿ: T20 World Cup 2021: ಟಿ20 ರ್ಯಾಂಕಿಂಗ್ನಲ್ಲಿ ನಂಬರ್ 1 ತಂಡ ಯಾವುದು ಗೊತ್ತಾ?
(Virat Kohli Created New Record In T20 World Cup)