Virat Kohli: ಹೊಸ ವಿಶ್ವ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ
India vs Pakistan: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು.

Asia Cup 2022: ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 36 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಅಬ್ಬರಿಸಿದ ಕೊಹ್ಲಿ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಅಂದರೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 50+ ರನ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಇದೀಗ ವಿರಾಟ್ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ವಿಶ್ವ ದಾಖಲೆಯು ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್ಮ್ಯಾನ್ ಟಿ20 ಕ್ರಿಕೆಟ್ನಲ್ಲಿ 31 ಬಾರಿ 50 ಪ್ಲಸ್ ರನ್ ಕಲೆಹಾಕಿದ್ದರು. ಈ ವೇಳೆ 27 ಅರ್ಧಶತಕಗಳನ್ನು, 4 ಭರ್ಜರಿ ಶತಕಗಳನ್ನು ಸಿಡಿಸಿದ್ದರು.
ಇದೀಗ ಕೇವಲ ಅರ್ಧಶತಕಗಳ ಮೂಲಕವೇ ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರ ಈ ಅಪರೂಪದ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 32 ಅರ್ಧಶತಕಗಳನ್ನು ಬಾರಿಸಿದ್ದು, ಈ ಮೂಲಕ 32 ಬಾರಿ 50+ ರನ್ ಕಲೆಹಾಕಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ಇನ್ನು ಪಾಕ್ ವಿರುದ್ದ 44 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್ನೊಂದಿಗೆ 60 ರನ್ ಬಾರಿಸುವ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಟಿ20 ಕ್ರಿಕೆಟ್ ಅರ್ಧಶತಕದ ಸರದಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (32) ಅಗ್ರಸ್ಥಾನದಲ್ಲಿದ್ದರೆ ರೋಹಿತ್ ಶರ್ಮಾ (27) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ (26) ಮೂರನೇ ಸ್ಥಾನದಲ್ಲಿದ್ದಾರೆ.
ಒಟ್ಟಿನಲ್ಲಿ ಕಳಪೆ ಫಾರ್ಮ್ನಿಂದ ಹೊರಬಂದಿರುವ ಕಿಂಗ್ ಕೊಹ್ಲಿ, ಇದೀಗ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಮತ್ತೊಂದಷ್ಟು ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತು.




